ಜಂತುಹುಳು ಬಗ್ಗೆ ಎಚ್ಚರವಹಿಸಿ

Team Udayavani, Feb 11, 2019, 7:23 AM IST

jantu.jpg

ಚಾಮರಾಜನಗರ: ಜಂತುಹುಳು ನಿವಾ ರಣೆಗಾಗಿ ವಹಿಸಬೇಕಿರುವ ಆರೋಗ್ಯ ಮುನ್ನೆಚ್ಚರಿಕೆಗಳ ಬಗ್ಗೆ ಪ್ರತಿಯೊಬ್ಬರು ತಿಳಿದು ಕೊಳ್ಳುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸಲಹೆ ಮಾಡಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿ ಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ಆಲ್ಬೆಂಡಾಜೋಲ್‌ ನೀಡು ವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಎಚ್ಚರಿಕೆ ವಹಿಸಿ: ಕೈ ತೊಳೆದುಕೊಳ್ಳದೆ ಆಹಾರ ಸೇವನೆ, ಬರಿಗಾಲಲ್ಲಿ ನಡೆಯುವುದು, ಬಯಲಿನಲ್ಲಿ ಶೌಚಾಲಯ ಮಾಡುವಂತಹ ಅಭ್ಯಾಸಗಳಿಂದ ಜಂತುಹುಳು ಸೋಂಕು ಕಾಣಿಸಿಕೊಂಡು ಅನಾರೋಗ್ಯ ಉಂಟಾ ಗುತ್ತದೆ. ರಕ್ತಹೀನತೆ, ಪೌಷ್ಟಿಕಾಂಶದ ಕೊರತೆ, ಜಂತು ಹುಳುವಿನಿಂದ ಬರುತ್ತದೆ. ಹೀಗಾಗಿ ಜಂತುಹುಳು ನಿವಾರಣೆಗೆ ಎಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದರು.

ಫೆ. 14ರಂದು ಮಾತ್ರೆ ಪಡೆಯಿರಿ: 6 ರಿಂದ 19 ವರ್ಷ ವಯಸ್ಸಿನವರಿಗೆ ಜಂತುಹುಳು ಸಮಸ್ಯೆ ಕಾಣಿಸಿಕೊಳ್ಳಲಿದೆ. ಜಂತುಹುಳು ಬಾಧೆಯಿಂದ ದೂರವಾಗಲು ಜಂತುಹುಳು ನಿವಾರಕ ಆಲ್ಬೆಂಡಾಝೋಲ್‌ ಮಾತ್ರೆಯನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ, ಖಾಸಗಿ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಆಲ್ಬೆಂಡಾಝೋಲ್‌ ಮಾತ್ರೆಯನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಈಗ ಮಾತ್ರೆ ಪಡೆಯಲು ಸಾಧ್ಯವಿಲ್ಲದವರಿಗೆ ಫೆ. 14ರಂದು ನೀಡಲಾಗುತ್ತದೆ ಎಂದು ತಿಳಿಸಿದರು.

ಸ್ವಚ್ಛತೆ ಕಾಪಾಡಿ: ಸ್ವಚ್ಛತೆ ಎಲ್ಲಿ ಇರುವು ದಿಲ್ಲವೋ ಅಲ್ಲಿ ಅನಾರೋಗ್ಯ ಕಾಡಲಿದೆ. ಹೀಗಾಗಿ ಶುಚಿತ್ವಕ್ಕೆ ವಿಶೇಷ ಮಹತ್ವ ನೀಡ ಬೇಕು. ಆರೋಗ್ಯಪೂರಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ತರಕಾರಿ, ಹಣ್ಣು, ಮೊಳಕೆ ಕಾಳುಗಳಂತಹ ಪೌಷ್ಟಿಕ ಆಹಾರವನ್ನು ಸೇವನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ಕಿವಿಮಾತು ಹೇಳಿದರು.

ಮಾರ್ಗದರ್ಶನ ನೀಡಿ: ಇದೇ ವೇಳೆ ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆ ಬಗ್ಗೆ ಸಲಹೆ ಮಾಡಿದ ಜಿಲ್ಲಾಧಿಕಾರಿಯವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಶ್ರಮಪಟ್ಟು ಅಧ್ಯಯನ ಮಾಡಬೇಕು. ಧೈರ್ಯವಾಗಿ ಪರೀಕ್ಷೆ ಎದುರಿಸಬೇಕು. ಕಾಲಹರಣ ಮಾಡದೆ ವ್ಯಾಸಂಗದತ್ತ ಗಮನ ನೀಡಬೇಕು. ಶಿಕ್ಷಕರು ಮಕ್ಕಳ ಫ‌ಲಿತಾಂಶ, ಕಲಿಕೆ ಬಗ್ಗೆ ಮಾರ್ಗ ದರ್ಶನ ಮಾಡಬೇಕು ಎಂದು ತಿಳಿಸಿದರು.

ಯಾವುದೇ ತೊಂದರೆ ಇಲ್ಲ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್‌ ಮಾತನಾಡಿ, ಜಿಲ್ಲೆಯಲ್ಲಿ 236121 ಮಕ್ಕಳಿಗೆ ಜಂತುಹುಳು ಸೋಂಕು ನಿಯಂತ್ರಣಕ್ಕಾಗಿ ಆಲ್ಫೆಂಡಾ ಝೋನ್‌ ಮಾತ್ರೆಯನ್ನು ನೀಡಲಾಗುತ್ತದೆ. 973 ಸರ್ಕಾರಿ ಶಾಲೆಗಳು, 212 ಖಾಸಗಿ ಶಾಲೆಗಳು, 63 ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ. ಮಾತ್ರೆ ತೆಗೆದುಕೊಳ್ಳುವುದ ರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ರಂಗದೇಗುಲ ಕಲಾತಂಡದ ಮುಖ್ಯಸ್ಥ ಶಾಂತರಾಜು ನೇತೃತ್ವದಲ್ಲಿ ಕಲಾವಿದರು ಜಂತುಹುಳು ಸೋಂಕಿನ ಪರಿಣಾಮಗಳು ಹಾಗೂ ಜಂತುಹುಳು ನಿವಾರಣೆಗೆ ತೆಗೆದುಕೊಳ್ಳಬೇಕಾದ ಆರೋಗ್ಯ ಪೂರಕ ಕ್ರಮಗಳ ಕುರಿತು ಪ್ರಸ್ತುತಪಡಿಸಿದ ಜಾಗೃತಿ ನಾಟಕ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಾರಾಯಣಸ್ವಾಮಿ, ಪ್ರಭಾರ ಮುಖ್ಯೋಪಾಧ್ಯಾಯ ರೇಣುಕಾ ಪಾಲ್‌ ಇತರರು ಇದ್ದರು.

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.