ಡೆಂಘೀ ನಿಯಂತ್ರಣಕ್ಕೆ ಮುನ್ನೆಚರಿಕೆ ವಹಿಸಿ
Team Udayavani, Jul 31, 2019, 3:00 AM IST
ಚಾಮರಾಜನಗರ: ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ಶುದ್ಧ ಆಹಾರ ಸೇವಿಸುವ ಜೊತೆಗೆ ಮನೆಯ ಸುತ್ತ ಮುತ್ತಲೂ ಸ್ವತ್ಛ ತೆೆಯನ್ನು ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕೆಂದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸಲಹೆ ನೀಡಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಇಲಾಖೆ ವತಿಯಿಂದ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನೀರು ನಿಲ್ಲದಂತೆ ನೋಡಿಕೊಳ್ಳಿ: ಡೆಂಘೀ ನಿಯಂತ್ರಣಕ್ಕೆ ಮುನ್ನೆಚರಿಕೆ ವಹಿಸಬೇಕು. ಸೊಳ್ಳೆಗಳನ್ನು ತಡೆಗಟ್ಟಲು ಪೂರಕವಾಗಿರುವ ಕ್ರಮಗಳನ್ನು ಅನುಸರಿಸಬೇಕು. ಮನೆಯ ಮುಂದೆ ಚರಂಡಿ ನೀರು ನಿಲ್ಲದಂತೆ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಕಳೆ ಗಿಡಗಳನ್ನು ತೆರವುಗೊಳಿಸಬೇಕು. ತೆಂಗಿನ ಚಿಪ್ಪು, ಕರಟ, ಹಳೆಯ ಟೈಯರುಗಳಲ್ಲಿ ನೀರು ನಿಲ್ಲುವುದರಿಂದ ಅವೆನ್ನಲ್ಲ ತೆರವುಗೊಳಿಸಬೇಕು ಎಂದು ಸಲಹೆ ಮಾಡಿದರು.
ಜಾಗೃತಿ ಕಾರ್ಯಕ್ರಮ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಕೆ.ಎಸ್. ಮಹೇಶ್ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಆರೋಗ್ಯ ಇಲಾಖೆ ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮವಹಿಸಿದೆ. ಆಶಾ ಕಾರ್ಯಕರ್ತರು ಮತ್ತು ಪಂಚಾಯಿತಿ ಅಧಿಕಾರಿಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು ಸಹ ಮಾಡಲಾಗುತ್ತಿದೆ ಎಂದರು.
ಅರಿವು ಮೂಡಿಸಬೇಕು: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 81 ಡೆಂಘೀ ಜ್ವರ ಪ್ರಕರಣಗಳು ವರದಿಯಾಗಿವೆ. ಚಾಮರಾಜನಗರ ತಾಲೂಕಿನಲ್ಲಿ 43, ಕೊಳ್ಳೇಗಾಲ ತಾಲೂಕಿನಲ್ಲಿ 15, ಗುಂಡ್ಲುಪೇಟೆ ತಾಲೂಕಿನಲ್ಲಿ 10, ಯಳಂದೂರು ತಾಲೂಕಿನಲ್ಲಿ 13 ಪ್ರಕರಣಗಳು ದಾಖಲಾಗಿವೆ. ಡೆಂಘೀ ಜ್ವರದ ನಿಯಂತ್ರಣಕ್ಕಾಗಿ ನಗರಸಭೆ, ಪುರಸಭೆ ಹಾಗೂ 130 ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮುನ್ನೆಚರಿಕೆ ಕ್ರಮವಹಿಸಿ ಅರಿವು ಮೂಡಿಸಬೇಕು ಎಂದರು.
ವಾರಕ್ಕೆ ಒಂದು ದಿನ ಒಣದಿನ ಆಚರಣೆ: ಸಾರ್ವಜನಿಕರು ವಾರಕ್ಕೆ ಒಂದು ದಿನ ಒಣದಿನ ಆಚರಣೆ ನಡೆಸಬೇಕು. ನೀರಿನ ಸಂಗ್ರಹಗಳನ್ನು ಖಾಲಿ ಮಾಡಿ ಸ್ವಚ್ಚಗೊಳಿಸಬೇಕು. ಮನೆಯ ಸುತ್ತ ಮುತ್ತಲ ಪ್ರದೇಶಗಳಲ್ಲಿ ಸ್ವತ್ಛ ತೆೆಗಾಗಿ ಕಾಪಾಡಿಕೊಳ್ಳಬೇಕು. ರೋಗ ಹರಡುವ ಈಡೀಸ್ ಸೊಳ್ಳೆಗಳು ಸ್ವಚ್ಚ ಪ್ರದೇಶದಲ್ಲೆ ಹೆಚ್ಚಾಗಿ ಕಂಡು ಬರುವುದರಿಂದ ಎಚ್ಚರ ವಹಿಸಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸಲಹೆ ನೀಡಿದರು.
ಡೆಂಘೀ ಅರಿವು ಜಾಥಾ: ಡೆಂಘೀ ಅರಿವು ಜಾಥಾ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ, ಮಲಗುವಾಗ ಸೊಳ್ಳೆ ಪರದೆ ಬಳಸಿ, ಯಾವುದೇ ನೀರಿರಲಿ ಭಧ್ರವಾಗಿ ಮುಚ್ಚಿಡಿ, ಚಿಕ್ಕ ಕಡಿತ ಭಾರಿ ಅಪಾಯ, ಸ್ವತ್ಛ ತೆ ಕಾಪಾಡಿ ಡೆಂಘೀ ತಡೆಗಟ್ಟಿ, ವಾರದಲ್ಲಿ ಒಂದು ದಿನ ಒಣದಿನ ಆಚರಣೆ ಮಾಡಿ ಎಂಬ ಭಿತ್ತಿ ಫಲಕಗಳನ್ನು ಹಿಡಿದು ಗಮನ ಸೆಳೆದರು.
ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನದ ಆವರಣದಿಂದ ಜಾಥಾ ಪ್ರಾರಂಭಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಪಿಡಬ್ಲೂಡಿ ಕಾಲೋನಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಸಮಾವೇಶಗೊಂಡರು. ತಾಪಂ ಅಧ್ಯಕ್ಷೆ ದೊಡ್ಡಮ್ಮ, ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಲತಾ ಕುಮಾರಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ.ಸಿ.ರವಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಎನ್.ಕಾಂತರಾಜು, ಮೇಲ್ವಿಚಾರಕ ನಾಗರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.