ವಿವಿ ವಿದ್ಯಾರ್ಥಿಗಳ ಭವಿಷ್ಯದ ಕೇಂದ್ರವಾಗಲಿ; ಪ್ರೊ.ಹೇಮಂತ್‌ಕುಮಾರ್‌

ಇಡೀ ವಿಶ್ವವೇ ಅಂಬೇಡ್ಕರ್‌ ಜನ್ಮದಿನವನ್ನು ವಿಶ್ವಜ್ಞಾನ ದಿನವನ್ನಾಗಿ ಆಚರಿಸುತ್ತಿದೆ.

Team Udayavani, Apr 28, 2022, 6:21 PM IST

ವಿವಿ ವಿದ್ಯಾರ್ಥಿಗಳ ಭವಿಷ್ಯದ ಕೇಂದ್ರವಾಗಲಿ; ಪ್ರೊ.ಹೇಮಂತ್‌ಕುಮಾರ್‌

ಚಾಮರಾಜನಗರ: ವಿಶ್ವವಿದ್ಯಾಲಯಗಳು ಕೇವಲ ಪದವಿ ನೀಡುವುದಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಬದುಕು ರೂಪಿಸುವ ಕೇಂದ್ರಗಳಾಗಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್‌ಕುಮಾರ್‌ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಸುವರ್ಣ ಗಂಗೋತ್ರಿಯ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ ಅವರಣದಲ್ಲಿ ಮೈಸೂರು ವಿವಿ ಸಹಯೋಗದಲ್ಲಿ ನಡೆದ ಡಾ.ಅಂಬೇಡ್ಕರ್‌  ಜಯಂತಿ ಹಾಗೂ ಸುವರ್ಣದೀಪ್ತಿ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭಿಸಿರುವ ಡಿಜಿಟಲ್‌ ಕ್ಯಾಂಪಸ್‌, ಜಾನಪದ ಮತ್ತು ಎಂ.ಬಿ.ಎ ಕೋರ್ಸ್‌ ಉದ್ಘಾಟಿಸಿ ಮಾತನಾಡಿ, ಮೈಸೂರು ವಿ.ವಿ ವ್ಯಾಪ್ತಿಯ ಮಂಡ್ಯ, ಹಾಸನ, ಚಾ.ನಗರ ಸ್ನಾತಕೋತ್ತರ ಕೇಂದ್ರಗಳಲ್ಲಿ ಪ್ರತಿವರ್ಷ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಸುವರ್ಣದೀಪ್ತಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸುವರ್ಣದೀಪ್ತಿ ಎಂದರೇ ಚಿನ್ನದ ಬೆಳಕು ಎಂದರ್ಥ.

ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪಠ್ಯೇತರ ಚಟುವಟಿಕೆಗಳ ಜೊತೆಗೆ ಸಮಾಜದ ಒಳಿತಿಗಾಗಿ ಚಿನ್ನದ ಬೆಳಕು ಚೆಲ್ಲುವಂತಾಗಬೇಕು. ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ವಿಶ್ವವಿದ್ಯಾಲಯಗಳು ವೇದಿಕೆಯಾಗಬೇಕು ಎಂದರು.

ಅಂಬೇಡ್ಕರ್‌ ಜ್ಞಾನದ ಸಂಕೇತ: ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ ಜ್ಞಾನದ ಸಂಕೇತ. ಇಡೀ ವಿಶ್ವವೇ ಅಂಬೇಡ್ಕರ್‌ ಜನ್ಮದಿನವನ್ನು ವಿಶ್ವಜ್ಞಾನ ದಿನವನ್ನಾಗಿ ಆಚರಿಸುತ್ತಿದೆ. ಸರ್ವ ಸಮುದಾಯಗಳ ಹಿತ ಬಯಸಿದ ಅಂಬೇಡ್ಕರ್‌ ಜ್ಞಾನದ ಹಾದಿಯಲ್ಲಿ ನಾವೆಲ್ಲಾ ಸಾಗಬೇಕು. ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಅಂಬೇಡ್ಕರ್‌ ಹೆಸರಿನಲ್ಲಿ ಸ್ಥಾಪಿತವಾದ ವಿವಿ ಸ್ನಾತಕೋತ್ತರದ ಕೇಂದ್ರ ಎಂಬ ಹೆಗ್ಗಳಿಕೆ ಈ ಕೇಂದ್ರದ್ದು. ಇಲ್ಲಿ ಶೇ.54ರಷ್ಟು ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿರುವುದು ಹಾಗೂ ವಿದ್ಯಾರ್ಥಿನಿಲಯ ಆರಂಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದಿಂದ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಒಂದು ವಾರಗಳ ಕಾಲ ನಡೆದ ಸುವರ್ಣದೀಪ್ತಿ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿವಿಧ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪೊ›.ಆರ್‌.ಮಹೇಶ್‌, ಮೈಸೂರು ವಿ.ವಿ. ಸಿಂಡಿಕೇಟ್‌ ಸದಸ್ಯ ಪ್ರದೀಪ್‌ಕುಮಾರ್‌ ದೀಕ್ಷಿತ್‌, ವಿಚಾರವಾದಿ ನಂಜನಗೂಡಿನ ಮಲ್ಕುಂಡಿ ಮಹದೇವಸ್ವಾಮಿ ಮಾತನಾಡಿದರು. ವಿವಿ ವಿಶೇಷ ಕರ್ತವ್ಯಾಧಿಕಾರಿ ಚೇತನ್‌ಕುಮಾರ್‌, ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಪರಮಶಿವಯ್ಯ ಇದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.