ಬಿಳಿಗಿರಿರಂಗನಾಥ ದೇಗುಲದ ಅರ್ಚಕರು ನೌಕರರು ಸೇರಿ 17 ಮಂದಿಗೆ ಕೋವಿಡ್: ದೇವಸ್ಥಾನಕ್ಕೆ ಬೀಗ

Team Udayavani, Apr 8, 2021, 8:14 PM IST

sdftergtr

ಚಾಮರಾಜನಗರ ಜಿಲ್ಲೆ : ತಾಲೂಕಿನ ಬಿಳಿಗಿರಿರಂಗನಬೆಟ್ಟದ ಐತಿಹಾಸಿಕ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಅರ್ಚಕರೂ ಸೇರಿದಂತೆ ಒಟ್ಟು 17 ಮಂದಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಗುರುವಾರ ದೇಗುಲವನ್ನು ಬಂದ್ ಮಾಡಲಾಗಿದೆ.

ಏ. 2 ರಂದು ದೇಗುಲದ ಮಹಾಸಂಪ್ರೋಕ್ಷಣೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ರವಿ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಹೀಗಾಗಿ ಅರ್ಚಕರು ಪರೀಕ್ಷೆ ಮಾಡಿಸಿದಾಗ ಏ. 6 ರಂದು ದೇಗುಲದ ಅರ್ಚಕ ಸೇರಿದಂತೆ ಇವರ ಕುಟುಂಬದ ಒಟ್ಟು ನಾಲ್ವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಇದಾದ ಬಳಿಕ ದೇಗುಲವನ್ನು ಸ್ಯಾನಿಟೈಸ್ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರೂ ಸೇರಿದಂತೆ ಎಲ್ಲ  34 ಸಿಬ್ಬಂದಿಗೂ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ ಮತ್ತೆ 13 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಬಿಳಿಗಿರಿರಂಗನಾಥಸ್ವಾಮಿ ದೇಗುಲಕ್ಕೆ ಪೂಜೆ ಅರ್ಚಕರಿಗೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗುರುವಾರ ದೇಗುಲವನ್ನು ಬಂದ್ ಮಾಡಲಾಗಿದೆ. ಎಲ್ಲರೂ ಕೂಡ ಹೋಂ ಐಸೋಲೇಷನ್ ನಲ್ಲಿದ್ದಾರೆ.

ದೇಗುಲ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಕಡಿಮೆ ಇತ್ತು. ಇದರ ಅರಿವಿಲ್ಲದೆ ದರ್ಶನಕ್ಕೆ ಬಂದಿದ್ದ ಕೆಲ ಭಕ್ತರು ದೇಗುಲ ಬಂದ್ ಆಗಿದ್ದರಿಂದ ದರ್ಶನವಿಲ್ಲದೆ ಹಿಂದಿರುಗಿದರು.

ದೇವಸ್ಥಾನದಲ್ಲಿ ಪೂಜೆ ಮಾಡುವ ಅರ್ಚಕರಿಗೆ ಕೋವಿಡ್ ಕಾಣಿಸಿಕೊಂಡಿದೆ. ದೇಗುಲದ ಅರ್ಚಕರು ಹಾಗೂ ಸಿಬ್ಬಂಧಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 13 ಜನರಿಗೆ ಪಾಸಿಟಿವ್ ಬಂದಿದೆ. ಹಾಗಾಗಿ ತಾತ್ಕಾಲಿಕವಾಗಿ ದೇಗುಲವನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ಉಪವಿಭಾಗಾಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ಇಒ ಮೋಹನ್‌ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.