ಮಳೆಗೆ ನೆನೆಯುತ್ತಿರುವ “ಬಿಳಿಗಿರಿ ರಂಗನಾಥ’

Team Udayavani, Jun 9, 2019, 3:00 AM IST

malege

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಬಿಳಿಗಿರಿರಂಗನಬೆಟ್ಟದಲ್ಲಿರುವ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು ಇತ್ತೀಚಿಗೆ ಸುರಿದ ಮಳೆಯಿಂದ ದೇಗುಲದ ಮಾಳಿಗೆ ಸೋರುತ್ತಿದೆ.

ಆಮೆಗತಿ ಕಾಮಗಾರಿ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಸ್ಥಾನ ಶಿಥಿಲಗೊಂಡಿರುವ ನೆಪವೊಡ್ಡಿ 2017 ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆ ವತಿಯಿಂದ 2.40 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ಆರಂಭಿಸಲಾಗಿತ್ತು. ಶಿವಮೊಗ್ಗದ ಪರಂಪರಾ ಕನ್ಸ್‌ಸ್ಟ್ರಕ್ಷನ್‌ ವತಿಯಿಂದ ಕಾಮಗಾರಿ ಆರಂಭಿಸಲಾಗಿತ್ತು. 20 ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈಗಾಗಲೇ ಶೇ.80 ಕಾಮಗಾರಿ ಮುಗಿಸಲಾಗಿದೆ ಎಂದು ಇಲಾಖೆ ಹೇಳುತ್ತಿದೆ. ಆದರೆ ಕಾಮಗಾರಿ ಇನ್ನೂ ಅಪೂರ್ಣವಾಗಿದ್ದು 2 ವರ್ಷ ಮುಗಿದಿದ್ದರೂ ಪೂರ್ಣಗೊಂಡಿಲ್ಲ.

ಚಾವಣಿ ಸೋರುತ್ತಿದೆ: ದೇಗುಲದ ಚಾವಣಿ ಇತ್ತೀಚೆಗೆ ಸುರಿದ ಮಳೆಯಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದ ದೇಗುಲದ ತುಂಬೆಲ್ಲಾ ನೀರು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ ಕಾಮಗಾರಿ ಕಳೆದ 5-6 ತಿಂಗಳಿನಿಂದಲೂ ನಿಂತು ಹೋಗಿದೆ. ಇದಕ್ಕೆ ಅನುದಾನದ ಕೊರತೆ ಇರುವುದೇ ಕಾರಣ ಎಂಬ ನೆಪವನ್ನು ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಭಕ್ತರ ಪರದಾಟ: ದೇಗುಲ ಜೀರ್ಣೋದ್ಧಾರ ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗದಲ್ಲಿ ಬಾಲಾಲಯ ಮಾಡಿ ಮರದಿಂದ ದೇವರ ಮೂರ್ತಿಯನ್ನು ಕೆತ್ತಿ ಇದಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಈ ಸ್ಥಳ ಕಿರಿದಾಗಿದೆ. ಆದರೂ, ಶನಿವಾರ ಹಾಗೂ ರಜಾ ದಿನಗಳಂದು ಭಕ್ತರ ದಂಡು ಆಗಮಿಸುತ್ತದೆ. ಕಿಷ್ಕಿಂದೆಯಂತಿರುವ ಈ ಸ್ಥಳದಲ್ಲಿ ಕಾಲಿಡಲೂ ಪರದಾಡುವ ಪರಿಸ್ಥಿತಿಯಿದೆ. ದೇವಸ್ಥಾನ ಜೀರ್ಣೋದ್ಧಾರ ಮಾಡಬೇಕಾದ ಇಲಾಖೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಅವ್ಯವಸ್ಥೆಗೆ ಕಾರಣವೆಂದು ದೇಗುಲದ ಮಾಜಿ ಧರ್ಮದರ್ಶಿ ಎನ್‌.ದೊರೆಸ್ವಾಮಿ ಆರೋಪಿಸಿದ್ದಾರೆ.

ಶಾಸಕರ ನಿರ್ಲಕ್ಷ್ಯ: ಸ್ಥಳೀಯ ಶಾಸಕ ಎನ್‌.ಮಹೇಶ್‌ ಆರಂಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಶೀಘ್ರ ಆರಂಭಿಸಿ ಪೂರ್ಣಗೊಳಿಸುವ ಭರವಸೆಯನ್ನು ಇಲ್ಲಿ ನಡೆದ ಅನೇಕ ಸಭೆ ಸಮಾರಂಭಗಳಲ್ಲಿ ನೀಡಿದ್ದರು. ಅಲ್ಲದೆ, ರಥ ಪುನರ್‌ ನಿರ್ಮಿಸುವ ಕೆಲಸಕ್ಕೂ ಚುರುಕು ನೀಡಲಾಗುವುದು ಎಂದಿದ್ದರು. ಆದರೆ ಇನ್ನೂ, ಭರವಸೆ ಈಡೇರಿಲ್ಲ. ಇವರ ನಿರ್ಲಕ್ಷ್ಯವೂ ಕಾಮಗಾರಿ ವಿಳಂಬವಾಗಲು ಕಾರಣ ಎಂಬುದು ಕಾಂತರಾಜು ಸೇರಿದಂತೆ ಹಲವು ಭಕ್ತರ ಆರೋಪವಾಗಿದೆ.

ಶೀಘ್ರ ಕ್ರಮ ವಹಿಸುತ್ತೇನೆ: ದೇವಸ್ಥಾನದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮೇಲ್ಛಾವಣಿ ಸೋರುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪತ್ರ ರವಾನಿಸಲಾಗಿದೆ. ಆದಷ್ಟು ಬೇಗ ಇದನ್ನು ದುರಸ್ತಿಗೊಳಿಸಿ ದೇಗುಲದ ಉದ್ಘಾಟನೆಗೆ ಕ್ರಮ ವಹಿಸಲಾಗುವುದು ಎಂಬ ಭರವಸೆ ಇದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್‌ ಪ್ರಸಾದ್‌ “ಉದಯವಾಣಿ’ಗೆ ಮಾಹಿತಿ ನೀಡಿದರು.

ತೇರಿನ ಕೆಲಸವೂ ಆರಂಭಗೊಂಡಿಲ್ಲ: ಬಿಳಿಗಿರಿ ರಂಗನಾಥನ ರಥ ಬೀದಿಯಲ್ಲಿನ ದೊಡ್ಡ ತೇರು ಶಿಥಿಲಗೊಂಡಿದೆ. ಇದನ್ನು ದುರಸ್ತಿ ಮಾಡಲು ಈಗಾಗಲೇ 1 ಕೋಟಿ. ರೂ. ಬಿಡುಗಡೆಯಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಈ ಕಾಮಗಾರಿಗೂ ಚಾಲನೆ ನೀಡಿದ್ದರು. ಆದರೆ, ಇದು ಇನ್ನೂ ಆರಂಭಗೊಂಡಿಲ್ಲ. ಕಳೆದ 3 ವರ್ಷಗಳಿಂದಲೂ ರಥೋತ್ಸವವೇ ನಡೆದಿಲ್ಲ. ಇದಕ್ಕೂ ಗ್ರಹಣ ಹಿಡಿದಿದೆ ಎಂಬುದು ಭಕ್ತರ ದೂರು.

* ಫೈರೋಜ್‌ಖಾನ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.