ಚಾ.ನಗರ: 4 ಕ್ಷೇತ್ರ ಗೆಲ್ಲುವುದೇ ನಮ್ಮ ಗುರಿ
Team Udayavani, Feb 11, 2023, 1:19 PM IST
ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತಕ್ಕೆ ಇನ್ನು ಹೆಚ್ಚಿನ ಶಕ್ತಿಯನ್ನು ನೀಡುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಪ್ರಭಾರಿ ರಾಜೇಂದ್ರ ಹೇಳಿದರು.
ಗುರುವಾರ, ನಗರದ ನೂತನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರ ಅಧಿಕಾರ ಪದಗ್ರಹಣ ಸಮಾರಂಭ ಉದ್ಘಾಟಿಸಿ, ಬಿಜೆಪಿ ಬಾವುಟ ನೀಡುವ ಮೂಲಕ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಅವರು ಮಾತನಾಡಿದರು.
ನಾಲ್ಕು ಕ್ಷೇತ್ರ ನಮ್ಮ ಗುರಿ: ಜಿಲ್ಲೆಯಲ್ಲಿ ಪಕ್ಷದ ಸಂಘ ಟನೆ ಬಲವಾಗಿದೆ. ಕಳೆದ ಚುನಾವಣೆಯಲ್ಲಿ ಒಂದು ಕ್ಷೇತ್ರವನ್ನು ಗೆದ್ದು ಇನ್ನುಳಿದ ಕ್ಷೇತ್ರಗಳಲ್ಲಿ ಪ್ರಬಲ ಪೈ ಪೋಟಿಯನ್ನು ನೀಡಿ, ಕಡಿಮೆ ಮತಗಳ ಅಂತರದಲ್ಲಿ ಸೋತಿದ್ದೆವು. ಬಳಿಕ 2019ರ ಲೋಕಸಭಾ ಚುನಾವಣೆ ಯಲ್ಲಿ ನಮ್ಮ ಶಕ್ತಿಯನ್ನು ವೃದ್ಧಿಸಿಕೊಂಡು ಶ್ರೀನಿವಾಸ್ ಪ್ರಸಾದ್ ಅವರು ಗೆದ್ದು ಬಿಜೆಪಿ ಬಲವನ್ನು ಹೆಚ್ಚಿಸಿ ದ್ದಾರೆ. ಬಿಎಸ್ಪಿಯಿಂದ ಗೆಲುವು ಸಾಧಿಸಿ, ಬಿಜೆಪಿ ಸೇರಿದ ಎನ್.ಮಹೇಶ್ ನಮ್ಮೊಂದಿಗಿದ್ದಾರೆ. ನಂತರ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರವನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.
ಬಿಜೆಪಿಯಲ್ಲಿ ಅಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದು ಸಹ ವರದಾನವಾಗಿದೆ. ಬಿಜೆಪಿಯಲ್ಲಿ ಗೆಲ್ಲುವ ವಾತಾ ವರಣ ಇದ್ದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇವ ರೆಲ್ಲರು ಸಹ ಒಗ್ಗಟ್ಟಿನಿಂದ ಬಿಜೆಪಿಯನ್ನು ಗೆಲ್ಲಿಸುವ ಮನಸ್ಸು ಮಾಡಿದ್ದಾರೆ ಎಂದರು.
ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮನೆ ಮನೆಗೆ ತೆರಳಿ ಬಿಜೆಪಿ ಸಾಧನೆಯನ್ನು ತಿಳಿಸುವ ಮೂಲಕ ಇನ್ನುಳಿದ ಕೆಲವು ತಿಂಗಳಲ್ಲಿ ಸಂಘಟಿತ ಹೋರಾಟ ಮಾಡಬೇಕಾಗಿದೆ. ಅಧ್ಯಕ್ಷರಾಗಿದ್ದ ಸುಂದರ್ ಅವರು ಸಹ ಮೂರು ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ್ದಾರೆ. ಪಕ್ಷದ ವರಿಷ್ಠ ತೀರ್ಮಾ ನದಂತೆ ನಾರಾಯಣ್ ಪ್ರಸಾದ್ ನೇಮಕವಾಗಿದ್ದಾರೆ ಎಂದರು.
ನಿಮ್ಮೆಲ್ಲರ ಮಾರ್ಗದರ್ಶನ ಮುಖ್ಯ: ನೂತನ ಅಧ್ಯಕ್ಷ ಜಿ. ನಾರಾಯಣಪ್ರಸಾದ್ ಅಧಿಕಾರ ಸ್ವೀಕರಿಸಿ ಮಾತ ನಾಡಿ, ನಾವೆಲ್ಲರೂ ಒಗ್ಗಟ್ಟಿನಿಂದ ಜಿಲ್ಲೆಯಲ್ಲಿ ಬಿಜೆಪಿ ಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯ ನ್ಮುಖರಾಗೋಣ. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದಾಗಿ ವರಿಷ್ಠರು ಈ ಜವಾಬ್ದಾರಿಯನ್ನು ನೀಡಿದ್ದಾರೆ. ವಿಶ್ವದ ಲ್ಲಿಯೇ ನಂಬರ್ ಒನ್ ಪಕ್ಷದಲ್ಲಿ ಕಾರ್ಯಕರ್ತನಾಗಿರುವುದು ಹೆಮ್ಮೆ ಎನ್ನಿಸಿದೆ. ವಿಶ್ವ ಮಟ್ಟದಲ್ಲಿ ಮೋದಿ ಅವರ ಸಾಧನೆ ಮತ್ತು ಬಿಜೆಪಿ ಜನಪರ ಯೋಜನೆಗಳು ಪಕ್ಷವನ್ನು ಮತ್ತಷ್ಟು ಮುನ್ನಡೆಸುತ್ತದೆ. ಹೀಗಾಗಿ ನಾವೆಲ್ಲರು ಒಗ್ಗಟ್ಟಿನಿಂದ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಪಕ್ಷದ ಹಿರಿಯರು, ಕಿರಿಯರಾದ ನಿಮ್ಮೆಲ್ಲರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.
ನಿಗರ್ಮಿತ ಅಧ್ಯಕ್ಷ ಆರ್. ಸುಂದರ್ ಮಾತನಾಡಿ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಅಭಾರಿಯಾಗಿದ್ದೇನೆ. ಮೂರು ವರ್ಷಗಳ ಸೇವೆ ತೃಪ್ತಿ ತಂದಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ಕಾಡಾ ಅಧ್ಯಕ್ಷ ಜಿ. ನಿಜಗುಣ ರಾಜು, ಮಾಜಿ ಶಾಸಕಿ ಪರಿಮಳಾ ನಾಗಪ್ಪ,ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವ ಕುಮಾರ್, ಜಿ.ನಾಗಶ್ರೀ ಪ್ರತಾಪ್, ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ. ರಾಮ ಚಂದ್ರ, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ, ಬಿಜೆಪಿ ಉಪಾಧ್ಯಕ್ಷ ಪಿ. ವೃಷಭೇಂದ್ರಪ್ಪ, ಮಂಡಲದ ಅದ್ಯಕ್ಷ ರಾದ ನಾಗರಾಜು, ಬಸವಣ್ಣ, ಕೊಳ್ಳೇಗಾಲ ಲೋಕೇಶ್ ಇತರರು ಇದ್ದರು.
ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ : ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಮಾತನಾಡಿ, ದೇಶದ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜನಪ್ರಿಯತೆ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಡಳಿತ ನಮ್ಮೆಲ್ಲರಿಗೂ ಶ್ರೀರಕ್ಷೆಯಾಗಿದೆ. ಸಂಘಟನೆಯಲ್ಲಿ ಬಿಜೆಪಿ ಇತರೇ ಪಕ್ಷಗಳಿಗಿಂತ ಬಹಳ ಮುಂದೆ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹತಾಶೆಯಿಂದ ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ದಿಕ್ಕು ತಪ್ಪಿಸುತ್ತಿವೆ. ಇದ್ಯಾವುದಕ್ಕು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಧೃತಿಗೆಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.