ಬಿಜೆಪಿ, ಆರ್ ಎಸ್ಎಸ್ ನವರೇ ಒಂಥರ ಉಗ್ರಗಾಮಿಗಳು: ಸಿಎಂ
Team Udayavani, Jan 10, 2018, 1:19 PM IST
ಚಾಮರಾಜನಗರ: ಬಿಜೆಪಿ, ಬಜರಂಗದಳ, ಆರೆಸ್ಸೆಸ್ಸನವರೇ ಒಂಥರ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತೀವ್ರ ವಾಗ್ದಾಳಿ ನಡೆಸುವ ಮೂಲಕ ವಿವಾದದ ಕಿಡಿಹೊತ್ತಿಸಿದ್ದಾರೆ.
ಚಾಮರಾಜನಗರದ ನಾಗವಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಸರಿ ಪಡೆ ನಾಯಕರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಖಾಸಗಿ ವಾಹಿನಿಗಳು ವರದಿ ಮಾಡಿವೆ.
ಆರ್ ಎಸ್ಎಸ್ ಆಗಲಿ, ಪಿಎಫ್ಐ ಆಗಲಿ ಯಾವುದೇ ಸಂಘಟನೆಯಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಜಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ಪಿಎಫ್ಐ ಸಂಘಟನೆ ಸದಸ್ಯರ ಹೆಸರನ್ನು ಉಲ್ಲೇಖಿಸಿದೆ. ಪಿಎಫ್ ಐ ಸಂಘಟನೆಯನ್ನು ನಿಷೇಧಿಸುತ್ತೀರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡುವ ಭರದಲ್ಲಿ ಅಲ್ರಿ..ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರು ಕೂಡಾ ಒಂಥರ ಉಗ್ರಗಾಮಿಗಳೇ ಎಂದು ಹೇಳುವ ಮೂಲಕ ಪರೋಕ್ಷವಾಗಿ ಈ ಸಂಘಟನೆಗಳನ್ನೂ ನಿಷೇಧಿಸಬೇಕಲ್ಲಾ ಎಂಬುದಾಗಿ ಪ್ರಶ್ನಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.