26ಕ್ಕೆ ಮೈಸೂರಿನಲ್ಲಿ ರಾಜ್ಯಮಟ್ಟದ ಬೌದ್ಧ ಮಹಾ ಸಮ್ಮೇಳನ
Team Udayavani, Feb 23, 2023, 3:21 PM IST
ಚಾಮರಾಜನಗರ: ಭಾರತೀಯ ಬೌದ್ಧ ಮಹಾಸಭಾ ರಾಜ್ಯ ಶಾಖೆ, ಮೈಸೂರು ಜಿಲ್ಲಾ ಶಾಖೆ ವತಿಯಿಂದ ಫೆ. 26 ರಂದು ಭಾನುವಾರ ಮೈಸೂರಿನಲ್ಲಿ ರಾಜ್ಯ ಮಟ್ಟದ ಬೌದ್ಧ ಮಹಾ ಸಮ್ಮೇಳನವನ್ನು ಅಯೋಜಿಸಲಾಗಿದೆ ಎಂದು ಭಾರತೀಯ ಬೌದ್ದ ಮಹಾಸಭಾ ರಾಜ್ಯ ಉಪಾಧ್ಯಕ್ಷ ಮಹೇಂದ್ರ ಮಾಂಕಾಳೆ ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 26ರಂದು ಬೆಳಿಗ್ಗೆ 9.30ಕ್ಕೆ ಮೈಸೂರು ಪುರಭವನದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಡಾ. ಅಂಬೇಡ್ಕರ್ ಅವರ ಮೊಮ್ಮಗ, ಡಾ. ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಮಾಲಾರ್ಪಣೆ ಮಾಡಲಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯದ ಸಮತಾ ಸೈನಿಕ ದಳದವರಿಂದ ಎಸ್.ಕೆ. ಭಂಡಾರೆ, ಅಶೋಕ್ ಕದಮ್, ಡಿ.ಎನ್. ಆಚಾರ್ಯ, ಜಗನ್ನಾಥ್ ಕಾಂಬಳೆ ಹಾಗೂ ಬಿಕ್ಕು ಸಂಘದ ನೇತೃತ್ವದಲ್ಲಿ ದಮ್ಮ ನಡಿಗೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಭಿಕ್ಕು ಸಂಘದ ಸಾನ್ನಿಧ್ಯದಲ್ಲಿ ತಿಸರಣ-ಪಂಚಶೀಲ ಸ್ವೀಕಾರ-ಮೈತ್ರಿಧ್ಯಾನ ನಡೆಯಲಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ದ ಮಹಾಸಭಾ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬುದ್ಧ ದಮ್ಮ ಕೃತಿಗಳ ಬಿಡುಗಡೆ ನಡೆಯಲಿದೆ ಎಂದರು.
ಬೃಹತ್ ಸಮಾವೇಶ ಯೋಜನೆ: ಮೈಸೂರಿನಲ್ಲಿ ಪ್ರಥಮ ಬಾರಿಗೆ ಬಾಬಾ ಸಾಹೇಬ್ ಅಂಬೇಡ್ಕರì ವರು ಸಂಸ್ಥಾಪಿತ ಭಾರತೀಯ ಬೌದ್ಧ ಮಹಾಸಭಾದ ರಾಜ್ಯ ಶಾಖೆ, ಮೈಸೂರು ಜಿಲ್ಲಾ ಶಾಖೆ, ಮತ್ತು ಬೌದ್ದ ಸಂಘಟನೆಗಳ ಸಹಕಾರದೊಂದಿಗೆ ಹಾಗೂ ಎಲ್ಲಾ ಪ್ರಗತಿಪರ ಸಂಘಟನೆಗಳ ಸಹಯೋಗ ದೊಂದಿಗೆ ಈ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ 25 ಸಾವಿರ ಜನರು ಸೇರುವ ನಿರೀಕ್ಷೆಯಿದೆ. ಭಾರತ ಬುದ್ಧನನಾಡು ಈ ನಾಡಿನಲ್ಲಿ ಬುದ್ಧ ಸಂದೇಶವನ್ನು ಪುನಶ್ಚೇತನಗೊಳಿಸುವುದು ಈ ಸಮ್ಮೇಳನ ಉದ್ದೇಶವಾಗಿದೆ. ಈ ಸಮ್ಮೇಳನಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಮನವಿ ಮಾಡಿದರು.
ಜಿಲ್ಲೆಯಿಂದ 5 ಸಾವಿರ ಜನರು ಭಾಗಿ: ಭಾರತೀಯ ಬೌದ್ದ ಮಹಾಸಭಾ ಜಿಲ್ಲಾಧ್ಯಕ್ಷ ಆರ್. ಬಸವರಾಜು ಮಾತನಾಡಿ, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಬೌದ್ದ ಮಹಾಸಮ್ಮೇಳನಕ್ಕೆ ಜಿಲ್ಲೆಯಿಂದ 5 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದರು.
ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಭಾರತೀಯ ಬೌದ್ದ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದರಾಜು, ಪ್ರಗತಿಪರ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಸಿ.ಎಂ. ಕೃಷ್ಣಮೂರ್ತಿ, ಮುಖಂಡ ಜಿ.ಎಂ.ಗಾಡ್ಕರ್, ದೊಡ್ಡರಾಯಪೇಟೆ ಮಹೇಶ್ ಹಾಜರಿದ್ದರು. ಈ ಸಂದರ್ಭದಲ್ಲಿ ಸಮ್ಮೇಳನದ ವ್ಯವಸ್ಥೆಗಳಿಗಾಗಿ ದಲಿತ ಮಹಾಸಭಾ ಉಪಾಧ್ಯಕ್ಷ ವೆಂಕಟರಮಣಸ್ವಾಮಿ 50 ಸಾವಿರ ರೂ. ನಗದು ಹಣವನ್ನು ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜು ಅವರಿಗೆ ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.