ಜಲ ಸಂರಕ್ಷಣೆ ಆಂದೋಲನ ಪರಿಣಾಮಕಾರಿಯಾಗಿ ಕೈಗೊಳ್ಳಿ

Team Udayavani, Jul 11, 2019, 3:00 AM IST

jala-sam

ಚಾಮರಾಜನಗರ: ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಜಲಶಕ್ತಿ ಅಭಿಯಾನದ ನೋಡಲ್‌ ಅಧಿಕಾರಿಯಾಗಿರುವ ಕೇಂದ್ರ ಸರ್ಕಾರದ ದೂರ ಸಂಪರ್ಕ ಸಚಿವಾಲಯದ ಆರ್ಥಿಕ ಸಲಹೆಗಾರ ಅಮಿತ್‌ ರೇ ನೇತೃತ್ವದ ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿ ನೀರಿನ ಸಂರಕ್ಷಣೆ ಕುರಿತು ಪರಿಶೀಲನೆ ನಡೆಸಿತು.

ಎರಡು ದಿನಗಳಿಂದ ಜಿಲ್ಲೆಯಲ್ಲಿ ಪರಿಶೀಲನೆ: ಭಾರತ ಸರ್ಕಾರವು ಜಲ ಭದ್ರತೆಗಾಗಿ ಜಲಶಕ್ತಿ ಅಭಿಯಾನ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಜು. 1 ರಿಂದ 15 ರವರೆಗೆ ಹಾಗೂ ಅಕ್ಟೋಬರ್‌ 2 ರಿಂದ ನವೆಂಬರ್‌ 30 ರವರೆಗೆ ಹಮ್ಮಿಕೊಂಡಿದೆ. ರಾಜ್ಯದ ಹಲವು ಭಾಗಗಳಲ್ಲಿ ನೀರಿನ ತೀವ್ರ ಕೊರತೆಯಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅಮಿತ್‌ ರೇ ನೇತೃತ್ವದಲ್ಲಿ ಜಲಶಕ್ತಿ ಅಭಿಯಾನ ಹಾಗೂ ತಂಡದವರು ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ನೀರಿನ ಸಂರಕ್ಷಣೆ ಹಾಗೂ ಪೂರೈಕೆ ಸಂಬಂಧ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಅಧ್ಯಕ್ಷತೆ: ಪೂರ್ವಭಾವಿಯಾಗಿ ಸೋಮವಾ ಕಾವೇರಿ ಅವರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಿ ಗುಂಡ್ಲುಪೇಟೆ ತಾಲೂಕಿಗೆ ಕ್ಷೇತ್ರ ಭೇಟಿಯನ್ನು ಕೈಗೊಂಡರು.

ಟ್ರಂಚ್‌, ಬಂಡ್‌ಗಳ ಪರಿಶೀಲನೆ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಕೃಷಿ ಹೊಂಡಗಳು, ಸಾಂಸ್ಕೃತಿಕ ಕಲ್ಯಾಣಿ ಪುನರುಜ್ಜೀವನ ಕುರಿತು ಪರಿಶೀಲನೆ ನಡೆಸಿದರು. ಹಂಗಳಾಪುರ ಗ್ರಾಮದಲ್ಲಿನ ಕೆರೆಗಳ ವೀಕ್ಷಣೆ, ಪುತ್ತನಪುರ ಗ್ರಾಮದಲ್ಲಿರುವ ಟ್ರಂಚ್‌ ಮತ್ತು ಬಂಡ್‌ಗಳ ಪರಿಶೀಲನೆ ನಡೆಸಿದರು.

ಏತ ನೀರಾವರಿ ವೀಕ್ಷಣೆ: ಕೂತನೂರು ಗ್ರಾಮದಲ್ಲಿನ ಚೆಕ್‌ಡ್ಯಾಂಗಳ ವೀಕ್ಷಿಸಿದರು. ಬಳಿಕ ಗುಂಡ್ಲುಪೇಟೆ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಮಳೆ ನೀರು ಕೋಯ್ಲು ವೀಕ್ಷಣೆ ಕೈಗೊಂಡರು. ಕೊಳವೆ ಬಾವಿಗಳ ಅಧ್ಯಯ ನಡೆಸಿ ಅಂತರ್ಜಲ ಮಟ್ಟ ಪರಿಶೀಲಿಸಿ ಹುತ್ತೂರು ಕೆರೆಯ ಏತನೀರಾವರಿ ಯೋಜನೆಯನ್ನು ವೀಕ್ಷಿಸಿದರು.

ತೆರಕಣಾಂಬಿ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ, ಅಣ್ಣೂರು ಕೆರೆ ವೀಕ್ಷಣೆ ಮಾಡಿದರು. ಗೋಪಾಲಪುರ ಗ್ರಾಮದ ರಸ್ತೆ ಬದಿಗಳಲ್ಲಿ ನೆಟ್ಟಿರುವ ಸಸಿಗಳ ಪರಿಶೀಲನೆ ಕೈಗೊಂಡರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.