ಚಾ.ನಗರ ತಾಲೂಕಿನ ವಿವಿಧೆಡೆ ಸಿಇಒ ಭೇಟಿ: ಪರಿಶೀಲನೆ


Team Udayavani, Oct 31, 2022, 3:45 PM IST

tdy-8

ಚಾಮರಾಜನಗರ: ತಾಲೂಕಿನ ಹೊನ್ನಹಳ್ಳಿ ಹಾಗೂ ಅರಕಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಭೇಟಿ ನೀಡಿ ಪರಿಶೀಲಿಸಿದರು.

ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವಡ್ಗಲ್‌ಪುರ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೆಂಗು ಸಸಿ ನೆಡುವ ಕಾಮಗಾರಿ ವೀಕ್ಷಿಸಿದರು.

ನಂತರ ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಹಂತ-2ರಡಿ ಆಯ್ಕೆಯಾಗಿರುವ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಜಲ ಜೀವನ್‌ ಮಿಷನ್‌, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು ಸ್ವತ್ಛ ಭಾರತ್‌ ಮಿಷನ್‌ (ಗ್ರಾ) ಯೋಜನೆಗಳಡಿ ಪ್ರಗತಿ ಸಾಧಿಸಿರುವ ಬಗ್ಗೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮೂಲ ಸೌಲಭ್ಯಗಳ ಕುರಿತು ಚರ್ಚಿಸಿದರು.

ಅರಕಲವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಹೊರ ರೋಗಿಗಳ ವಿಭಾಗ, ಹೆರಿಗೆ ಕೊಠಡಿ ಮತ್ತು ಪುರುಷರ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಔಷಧ ದಾಸ್ತಾನು ಕೊಠಡಿಗೆ ಭೇಟಿ ನೀಡಿ ಅವಧಿ ಮುಗಿದಿರುವ ಔಷಧಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಇರುವ ಸ್ಥಳದಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಬಳಿಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್‌ ಮಿಷನ್‌ ಯೋಜನೆಯಡಿ ಅನುಷ್ಠಾನಗೊಳಿಸುತ್ತಿ ರುವ ನಳ ಸಂಪರ್ಕ ಕಾಮಗಾರಿ ಹಾಗೂ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜ ನೆಯಡಿ ಅನುಷ್ಠಾನಗೊಳಿಸಿರುವ ಸಿಮೆಂಟ್‌ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪರಿಶೀಲಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಸ್ನಾನಗೃಹ ಮತ್ತು ಶೌಚಾಲಯ, ವಿದ್ಯಾರ್ಥಿಗಳ ಕೊಠಡಿ, ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಗಳನ್ನು ಪರಿಶೀಲಿಸಿ ವಿದ್ಯಾ ರ್ಥಿಗಳ ಕೊಠಡಿಯಲ್ಲಿ ಹೆಚ್ಚಿನ ಬೆಳಕಿನ ವ್ಯವಸ್ಥೆ ಇಲ್ಲದೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಟ್ಯೂಬ್‌ಲೈಟ್‌ಗಳನ್ನು ಅಳವಡಿಸುವಂತೆ ಹಾಗೂ ವಾಷಿಂಗ್‌ ಮಿಷನ್‌ ಯಂತ್ರವನ್ನು ಚಾಲ್ತಿಯಲ್ಲಿಡಲು ಕ್ರಮವಹಿಸುವಂತೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಗ್ರಂಥಾಲಯದಲ್ಲಿ ಕಂಪ್ಯೂಟರ್‌ಗಳನ್ನು ಅಳವಡಿಸುವಂತೆ, ಕೊಠಡಿಯ ನೆಲಕ್ಕೆ ವೆಟ್ರಿಫೈಡ್‌ ಟೈಲ್ಸ್‌ ಗಳನ್ನು ಹಾಕಲು ಹಾಗೂ ಹೆಚ್ಚಿನ ಬೆಳಕಿನ ವ್ಯವಸ್ಥೆಗೆ ಟ್ಯೂಬ್‌ಲೈಟ್‌ಗಳನ್ನು ಅಳವಡಿಸುವಂತೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ವಾಗುವಂತಹ ಪುಸ್ತಕಗಳನ್ನು ಖರೀದಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಜಗದೀಶ್‌, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಷರೀಫ್, ಇತರರು ಇದ್ದರು.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.