ಚಾಮರಾಜನಗರ ಜಿಲ್ಲೆ: 4 ಕೋವಿಡ್ 19 ದೃಢ
Team Udayavani, Jun 24, 2020, 5:33 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ನಾಲ್ಕು ಕೋವಿಡ್ -19 ಪ್ರಕರಣಗಳು ದೃಢಪಟ್ಟಿವೆ. ನಗರದ ಪೂರ್ವ ಪೊಲೀಸ್ ಠಾಣೆ ಪೇದೆ ಹಾಗೂ ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ಮೂವರಿಗೆ ಕೋವಿಡ್ 19 ಪಾಸಿಟಿವ್ ಆಗಿದೆ. ಜಿಲ್ಲೆಯಲ್ಲಿ ಒಟ್ಟು 8 ಕೋವಿಡ್ ಪ್ರಕರಣ ದಾಖಲಾಗಿವೆ. ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದಲ್ಲಿ ಒಟ್ಟು 5, ಭೂಮಾಪಕಿ, ಪೊಲೀಸ್ ಪೇದೆ ಸೇರಿದಂತೆ 7 ಸಕ್ರಿಯ ಪ್ರಕರಣ. ಓರ್ವ ಗುಣಮುಖನಾಗಿ ಮನೆಗೆ ಹಿಂದಿರುಗಿದ್ದಾನೆ.
ಗುಂಡ್ಲುಪೇಟೆ ಪಟ್ಟಣದ ಮಹದೇವಪ್ರಸಾದ್ ನಗರದ 45 ವರ್ಷ ಹಾಗೂ 55 ವರ್ಷದ ಮಹಿಳೆಯರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಡಾ. ರವಿ ತಿಳಿಸಿದರು. ಈ ಮಹಿಳೆಯರು ಶನಿವಾರ ಗುಂಡ್ಲುಪೇಟೆ ಆಸ್ಪತ್ರೆಗೆ ತಲೆನೋವು, ಮೈಕೈ ನೋವಿಗೆ ಚಿಕಿತ್ಸೆ ಪಡೆಯಲು ಹೋದಾಗ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಈಗಾಗಲೇ ಸೋಂಕಿತ 8311ರ ರೋಗಿಯಿಂದ ಸೋಂಕು ಹರಡಿರಬಹುದೆಂದು ತಿಳಿಸಿದರು.
ಪೂರ್ವ ಠಾಣೆ ಸೀಲ್‌ಡೌನ್: ನಗರದ ಪೂರ್ವ ಪೊಲೀಸ್ ಠಾಣೆ ಪೇದೆಗೆ ಕೋವಿಡ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೂರ್ವ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್‌ಡೌನ್ ಮಾಡಲಾಗಿದೆ. ಇದಲ್ಲದೇ ಗುಂಡ್ಲುಪೇಟೆಯ 8311ಸಂಖ್ಯೆಯ ರೋಗಿಯ ಪ್ರಾಥಮಿಕ ಸಂಪರ್ಕ ಹೊಂದಿದ್ದ ಇನ್ನೋರ್ವ ವ್ಯಕ್ತಿಗೂ ಕೋವಿಡ್ 19 ದೃಢಪಟ್ಟಿದೆ ಎಂದರು.
ತಲೆನೋವಾದ ಭೂ ಮಾಪಕಿ ಪ್ರಕರಣ: ಸೋಮವಾರ ದೃಢಪಟ್ಟ ನಗರದ ತಾಲೂಕು ಕಚೇರಿ ಭೂ ಮಾಪಕಿ ಅನೇಕ ಸ್ಥಳಗಳಲ್ಲಿ ಓಡಾಡಿದ್ದು, ಜಿಲ್ಲಾಡಳಿತಕ್ಕೆ ತಲೆ ನೋವಾಗಿದೆ. ಈ ಪ್ರಕರಣದಲ್ಲಿ 20 ಮಂದಿ ಪ್ರಾಥಮಿಕ ಸಂಪರ್ಕಿತರಿದ್ದಾರೆ. ಈಕೆಗೆ ಜ್ವರಕ್ಕೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಆ ಆಸ್ಪತ್ರೆಗೆ ನೋಟಿಸ್ ನೀಡಲಾಗುವುದು ಎಂದು ಡೀಸಿ ಡಾ.ರವಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.