Chamarajanagar: ಆನೆ ಕಳೆಬರ ಪತ್ತೆ- 7-8 ತಿಂಗಳ ಹಿಂದೆ ಸಾವು ಶಂಕೆ
Team Udayavani, Aug 30, 2024, 1:05 PM IST
ಯಳಂದೂರು (ಚಾಮರಾಜನಗರ): ಬಿ.ಆರ್.ಟಿ. ಹುಲಿರಾಯ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯದ ವಿಭಾಗದ ಆಳದ ಕೆರೆ ಬಳಿ ಗಂಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 27 ರಂದು ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಆನೆಯ ಕಳೆಬರ ಪತ್ತೆಯಾಗಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ 7-8 ತಿಂಗಳ ಹಿಂದೆಯೇ ಗಂಡಾನೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆನೆಯ 2 ದಂತಗಳು ಸುರಕ್ಷಿತವಾಗಿದ್ದು, ಅರಣ್ಯ ಇಲಾಖೆ ಇದನ್ನು ವಶಕ್ಕೆ ಪಡೆದುಕೊಂಡಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ. ಹಿರೇಲಾಲ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯದ ನಿರ್ದೇಶಕ ಶ್ರೀಪತಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ .ಸುರೇಶ್ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಡಾ. ವಾಸಿಮ್ ಮಿರ್ಜಾ ರವರು ನೇತೃತ್ವದ ತಂಡ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದು ಸುರಕ್ಷಿತವಾಗಿದ್ದ 2 ಆನೆ ದಂತಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.