ಬಜೆಟ್‌ನಲ್ಲಿ ಚಾ.ನಗರ ರೈಲ್ವೆ ನಿರೀಕ್ಷೆ ಹುಸಿ


Team Udayavani, Feb 2, 2020, 3:00 AM IST

bajetnali

ಚಾಮರಾಜನಗರ: ಪ್ರತಿ ಬಾರಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಖಾತೆಯಿಂದ ಚಾಮರಾಜನಗರಕ್ಕೆ ಯಾವುದಾದರೂ ಹೊಸ ರೈಲು ಅಥವಾ ರೈಲ್ವೆ ಸ್ವಚ್ಛತಾ ಕಾರ್ಯಾಗಾರ ದೊರೆಯಬಹುದೆಂಬ ನಿರೀಕ್ಷೆ ಜಿಲ್ಲೆಯ ಜನರಲ್ಲಿರುತ್ತದೆ. ಆ ನಿರೀಕ್ಷೆ ಎಂದಿನಂತೆ ಈ ಬಾರಿಯೂ ಹುಸಿಯಾಗಿದೆ.

ಬೆಂಗಳೂರಿನ ಹೆಜ್ಜಾಲದಿಂದ, ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರ ತಲುಪುವ 129 ಕಿ.ಮೀ. ಉದ್ದದ, 1330 ಕೋಟಿ ರೂ. ವೆಚ್ಚದ ನೂತನ ರೈಲ್ವೆ ಮಾರ್ಗವನ್ನು ಕಳೆದ ಯುಪಿಎ ಸರ್ಕಾರದ ಅವಧಿಯಲ್ಲಿ, ಅಂದಿನ ರೈಲ್ವೆ ಸಚಿವ ಮಲ್ಲಿಕಾರ್ಜುನಖರ್ಗೆ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದರು. ಅದಕ್ಕಾಗಿ ಪ್ರಥಮ ಹಂತವಾಗಿ 10 ಕೋಟಿ ರೂ.ಗಳನ್ನೂ ನೀಡಿದ್ದರು. ಅದಾದ ಬಳಿಕ ಇದಕ್ಕೆ ಕೇಂದ್ರ ಅನುದಾನ ನೀಡಿರಲಿಲ್ಲ. ಈ ಬಾರಿ ಒಂದಷ್ಟು ಅನುದಾನದ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆಯ ಬಲೂನಿಗೆ ಕೇಂದ್ರ ಬಜೆಟ್‌ ಮುಳ್ಳು ಚುಚ್ಚಿದೆ.

ಈ ರೈಲ್ವೆ ಮಾರ್ಗ ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. ಹೀಗಾಗಿ ಮಂಡ್ಯ ಸಂಸದೆ ಸುಮಲತಾ ಕೂಡ ಕೆಲ ತಿಂಗಳ ಹಿಂದೆ ಈ ಯೋಜನೆ ಪುನಶ್ಚೇತನ ಕುರಿತು ರೈಲ್ವೆ ಅಧಿಕಾರಿಗಳ ಸಭೆ ನಡೆಸಿದ್ದರು. ಹೀಗಾಗಿ ಈ ಯೋಜನೆ ಪುನರ್‌ಚಾಲನೆಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಅನುದಾನ ದೊರೆಕಬಹುದೆಂಬ ನಿರೀಕ್ಷೆಗಳಿತ್ತು.

ಹೊಸ ರೈಲು ಇಲ್ಲ: ಚಾಮರಾಜನಗರವು ರಾಜ್ಯದ ಕೊನೆಯ ರೈಲ್ವೆ ನಿಲ್ದಾಣವಾಗಿದೆ. ಮೈಸೂರಿಗೆ ಬರುವ ಅನೇಕ ರೈಲುಗಳನ್ನು ಚಾಮರಾಜನಗರಕ್ಕೆ ವಿಸ್ತರಿಸಿದರೆ ಪ್ರಯಾಣಿಕರಿಗೆ ಬಹಳ ಅನುಕೂಲವಾಗುತ್ತಿತ್ತು. ಮುಖ್ಯವಾಗಿ ಹುಬ್ಬಳ್ಳಿ-ಧಾರವಾಡದಿಂದ ಮೈಸೂರಿಗೆ ಬರುವ, ಹಾಗೂ ಶಿವಮೊಗ್ಗದಿಂದ ಮೈಸೂರಿಗೆ ಬರುವ ರೈಲನ್ನು ಚಾಮರಾಜನಗರಕ್ಕೆ ವಿಸ್ತರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಸಹ ಮನವಿ ಸಲ್ಲಿಸಿದ್ದರು. ಈ ಬಜೆಟ್‌ನಲ್ಲಿ ಆ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ.

ಮನವಿಗೆ ಕೇಂದ್ರ ಸ್ಪಂದಿಸಿಲ್ಲ: ಚಾಮರಾಜನಗರದಿಂದ ನಂಜನಗೂಡಿಗೆ 35 ಕಿ.ಮೀ. ಅಂತರವಿದೆ. ಈ ಮಾರ್ಗದಲ್ಲಿ ಯಾವುದೇ ಕ್ರಾಸಿಂಗ್‌ ಪಾಯಿಂಟ್‌ ಇಲ್ಲ. ಹೀಗಾಗಿ ರೈಲು ತಡವಾಗಿ ಹೊರಟಾಗ, ರೈಲ್ವೆ ವ್ಯಾಗನ್‌ಗಳು ಸಂಚರಿಸಿದಾಗ ರೈಲುಗಳು ನಂಜನಗೂಡು ಅಥವಾ ನಗರದಲ್ಲೇ ತಡವಾಗಿ ಹೊರಡಬೇಕಾಗಿದೆ. ಕವಲಂದೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ,

ರೈಲ್ವೆ ಕ್ರಾಸಿಂಗ್‌ ಪಾಯಿಂಟ್‌ ಮಾಡಿದರೆ ಬಹಳ ಅನುಕೂಲವಾಗಲಿದೆ ಎಂದು ಹಿಂದಿನ ಸಂಸದ ಧ್ರುವನಾರಾಯಣ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಅದು ಸಹ ಈಡೇರಿಲ್ಲ. ಚಾಮರಾಜನಗರದಿಂದ ಮೈಸೂರಿಗೆ ಬೆಳಗ್ಗೆ 10.30ರ ನಂತರ ಮಧ್ಯಾಹ್ನ 3 ಗಂಟೆಯವರೆಗೆ ರೈಲು ಸಂಚಾರ ಇಲ್ಲ. ಈ ಅವಧಿಯಲ್ಲಿ ಇನ್ನೊಂದು ಹೆಚ್ಚುವರಿ ರೈಲನ್ನು ಓಡಿಸಬೇಕೆಂಬ ಬೇಡಿಕೆಗೂ ಕಿಮ್ಮತ್ತು ಸಿಕ್ಕಿಲ್ಲ.

ಸ್ವಚ್ಛತಾ ಘಟಕ ಸಹ ಇಲ್ಲ: ಮೈಸೂರಿನಲ್ಲಿರುವ ಸ್ವಚ್ಛತಾ ಘಟಕದಲ್ಲಿ ಈಗ ಹೆಚ್ಚು ಒತ್ತಡವಿದೆ. ಅನೇಕ ರೈಲುಗಳು ಅಲ್ಲೇ ನಿಲ್ಲಬೇಕಾಗಿದೆ. ಅದಕ್ಕೆ ಸ್ಥಳಾವಕಾಶವೂ ಇಲ್ಲದಂತಾಗಿದೆ. ಚಾ.ನಗರದಲ್ಲಿ ಸ್ವಚ್ಛತಾ ಘಟಕ ಸ್ಥಾಪಿಸಿದರೆ ಮೈಸೂರಿನಲ್ಲಿ ನಿಲ್ಲುವ ರೈಲುಗಳು ಚಾ.ನಗರಕ್ಕೆ ಬರುತ್ತವೆ. ಪ್ರಯಾಣಿಕರಿಗೂ ಇದರಿಂದ ಬಹಳ ಅನುಕೂಲವಾಗುತ್ತದೆ. ಅಲ್ಲದೇ ಇಲ್ಲಿನ ನಿಲ್ದಾಣದಲ್ಲಿ ರೈಲುಗಳೂ ತಂಗಲು ಅವಕಾಶವಾಗುತ್ತದೆ ಎಂಬ ಕಾರಣದಿಂದ ಚಾಮರಾಜನಗರದಲ್ಲಿ ರೈಲುಗಳ ಸ್ವಚ್ಛತಾ ಘಟಕ ಸ್ಥಾಪಿಸಬೇಕೆಂಬ ಬೇಡಿಕೆ ಇತ್ತು. ಅದು ಸಹ ಈಡೇರಿಲ್ಲ.

ನೈಪರ್‌ ಬರಲಿಲ್ಲ: ಚಾಮರಾಜನಗರದಲ್ಲಿ ರಾಷ್ಟ್ರೀಯ ಔಷಧ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು (ನೈಪರ್‌) ಬಜೆಟ್‌ನಲ್ಲಿ ಮಂಜೂರು ಮಾಡಿಕೊಡುವಂತೆ ಹಿಂದಿನ ಸಂಸದ ಆರ್‌. ಧ್ರುವನಾರಾಯಣ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಈ ಸಂಸ್ಥೆ ದೇಶದ 7 ರಾಜ್ಯಗಳಲ್ಲಿ ಸ್ಥಾಪಿತವಾಗಿದೆ. ಕರ್ನಾಟಕ ರಾಜ್ಯದಲ್ಲಿ ಮಾತ್ರ ಇಲ್ಲ. ಅಭಿವೃದ್ಧಿ ಹೊಂದುತ್ತಿರುವ ಚಾಮರಾಜನಗರ ಜಿಲ್ಲೆಗೆ ಈ ಸಂಸ್ಥೆಯನ್ನು ಕೇಂದ್ರ ಮಂಜೂರು ಮಾಡುವ ಆಸಕ್ತಿ ತೋರಿಲ್ಲ.

ಕವಲಂದೆ ಲೆವೆಲ್‌ ಕ್ರಾಸಿಂಗ್‌ ಮಿಸ್‌: ಚಾಮರಾಜನಗರದಿಂದ ನಂಜನಗೂಡಿಗೆ 35 ಕಿ.ಮೀ. ಅಂತರವಿದ್ದು, ಯಾವುದೇ ಕ್ರಾಸಿಂಗ್‌ ಪಾಯಿಂಟ್‌ ಇಲ್ಲ. ಹೀಗಾಗಿ ರೈಲು ತಡವಾಗಿ ಹೊರಟಾಗ, ರೈಲ್ವೆ ವ್ಯಾಗನ್‌ಗಳು ಸಂಚರಿಸಿದಾಗ ರೈಲುಗಳು ನಂಜನಗೂಡು ಅಥವಾ ನಗರದಲ್ಲೇ ತಡವಾಗಿ ಹೊರಡಬೇಕಾಗಿದೆ. ಕವಲಂದೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ರೈಲ್ವೆ ಕ್ರಾಸಿಂಗ್‌ ಪಾಯಿಂಟ್‌ ಮಾಡಿದರೆ ಬಹಳ ಅನುಕೂಲವಾಗುತ್ತಿತ್ತು.

ಚಾಮರಾಜನಗರದಿಂದ ಬೆಂಗಳೂರಿಗೆ ಸೀಮಿತವಾಗಿ ಎಕ್ಸ್‌ಪ್ರೆಸ್‌ ರೈಲೊಂದನ್ನು ಮಂಜೂರು ಮಾಡಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ರೈಲ್ವೆಯ ಈ ಬೇಡಿಕೆಗಳಲ್ಲಿ ಕೆಲವಾದರೂ ಜಾರಿಗೊಳ್ಳಬಹುದೆಂದು ಜಿಲ್ಲೆಯ ಸಾರ್ವಜನಿಕರು ಆಶಾಭಾವನೆ ಹೊಂದಿದ್ದರು. ಅದಾವುದೂ ಈಡೇರಿಲ್ಲ.

ಜಿಲ್ಲೆಯ ರೈಲ್ವೆಯನ್ನು ಬಿಜೆಪಿ ಸರ್ಕಾರ ಕಳೆದ ಅವಧಿಯಿಂದಲೂ ತೀವ್ರವಾಗಿ ಕಡೆಗಣಿಸಿದೆ. ಈ ಬಾರಿ ಅದರ ಮುಂದುವರಿಕೆಯಾಗಿದೆ ಅಷ್ಟೇ. ರಾಜ್ಯಕ್ಕೇ ಹೆಚ್ಚಿನ ಯೋಜನೆಗಳನ್ನು ನೀಡಿಲ್ಲ. ಇನ್ನು ಚಾಮರಾಜನಗರಕ್ಕೆ ಏನಾದರೂ ಅನುದಾನ ದೊರಕಬಹುದು ಎಂದು ನಿರೀಕ್ಷಿಸುವುದು ತಪ್ಪು.
-ಬಿ.ಕೆ. ರವಿಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ

ಇದೊಂದು ಸಮತೋಲನದ ಬಜೆಟ್‌ ಕೃಷಿಗೆ ಒತ್ತು ನೀಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಎಲ್ಲರಿಗೂ ಆದ್ಯತೆ ನೀಡುವ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ ಸ್ವಾಗತಾರ್ಹ.
-ಎನ್‌. ಜಿ. ಪ್ರಶಾಂತ್‌, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.