ಚಾ.ನಗರ: 1ನೇ ಹಂತದ ಚುನಾವಣೆಯಲ್ಲಿ 3,079 ಅಭ್ಯರ್ಥಿಗಳು ಕಣಕ್ಕೆ


Team Udayavani, Dec 16, 2020, 3:36 PM IST

ಚಾ.ನಗರ: 1ನೇ ಹಂತದ ಚುನಾವಣೆಯಲ್ಲಿ 3,079 ಅಭ್ಯರ್ಥಿಗಳು ಕಣಕ್ಕೆ

ಚಾಮರಾಜನಗರ: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚಾಮ ರಾಜನಗರ ತಾಲೂಕಿನ 43 ಹಾಗೂ ಗುಂಡ್ಲುಪೇಟೆ ತಾಲೂಕಿನ 34 ಗ್ರಾಮ ಪಂಚಾಯಿತಿಗಳಿಗೆ ನಿಗದಿಯಾಗಿ ರುವ ಚುನಾವಣೆಗೆ ಅಂತಿಮವಾಗಿ 3,079 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 49, ಗುಂಡ್ಲುಪೇಟೆ ತಾಲೂಕಿ ನಲ್ಲಿ13 ಮಂದಿ ಸೇರಿದಂತೆ ಒಟ್ಟು62 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ. ಆರ್‌. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಅವರು, ಚಾಮರಾಜನಗರ ತಾಲೂಕಿನಲ್ಲಿ 742 ಸ್ಥಾನಗಳಿಗೆ ಈಗಾಗಲೇ49 ಮಂದಿ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ 693 ಸ್ಥಾನಗಳಿಗೆ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ 499 ಸ್ಥಾನಗಳಿದ್ದು ಈಗಾಗಲೇ 13 ಮಂದಿ ಅವಿರೋಧವಾಗಿ ಆಯ್ಕೆಯಾಗಿರುವ ಕಾರಣ 486 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟಾರೆ 1,179 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಅಂತಿಮವಾಗಿ ಚಾಮರಾಜನಗರ ತಾಲೂಕಿನಲ್ಲಿ1876, ಗುಂಡ್ಲುಪೇಟೆ ತಾಲೂಕಿ ನಲ್ಲಿ1203 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಮೊದಲ ಹಂತದ ಚುನಾವಣಾ ಮತದಾನವು ಡಿ. 22ರಂದು ನಡೆಯಲಿದೆ ಎಂದರು.

2ನೇ ಹಂತ: ಎರಡನೇ ಹಂತದಲ್ಲಿ ಯಳಂದೂರು ತಾಲೂಕಿನ 12, ಕೊಳ್ಳೇಗಾಲ ತಾಲೂಕಿನ 16, ಹನೂರು ತಾಲೂಕಿನ 24 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು 52 ಗ್ರಾಮ ಪಂಚಾಯಿತಿಗಳ 347 ಕ್ಷೇತ್ರಗಳ 916 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಡಿ. 14ರವರೆಗೆ ಎರಡನೇ ಹಂತದ ಚುನಾ ವಣೆಗೆ ಒಟ್ಟು 832 ನಾಮಪತ್ರಗಳು ಸಲ್ಲಿಕೆಯಾಗಿವೆ. ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ. 16 ಕಡೆಯದಿನವಾಗಿದೆ ಎಂದರು.

ಮತಗಟ್ಟೆ: ಜಿಲ್ಲೆಯ 129 ಗ್ರಾಮ ಪಂಚಾಯಿತಿಗಳ ಚುನಾವಣೆಗೆ 1046 ಮತಗಟ್ಟೆಗಳನ್ನು ಸ್ಥಾಪಿಸಲಾಗು ತ್ತಿದ್ದು, ಈ ಪೈಕಿ 263 ಸೂಕ್ಷ್ಮ ಹಾಗೂ 783 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ಸಿಬ್ಬಂದಿ ನೇಮಕಮಾಡಲಾಗಿದೆ. ಒಟ್ಟು 4608 ಮತಗಟ್ಟೆ ಸಿಬ್ಬಂದಿ ನಿಯೋಜಿಸಲಾಗಿದ್ದು, ತರಬೇತಿ ನೀಡಲಾಗಿದೆ. ಆಯೋಗದನಿರ್ದೇಶನದಂತೆ ಮತದಾನ ವೇಳೆ ಮತದಾರರ ಎಡಗೈಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಲಾಗುತ್ತದೆ ಎಂದರು.

ನಿರ್ಬಂಧ: ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷರಹಿತವಾಗಿ ನಡೆಯುವುದರಿಂದ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ರಾಜಕೀಯ ಮುಖಂಡರ ಭಾವಚಿತ್ರವನ್ನು ಉಪಯೋಗಿಸಿ, ಅಭ್ಯರ್ಥಿಗಳು ಪ್ರಚಾರ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. ರಾಜಕೀಯ ಪಕ್ಷ ಗಳು ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಕುರಿತು ಯಾವುದೇ ಪ್ರಚಾರ ಕೈಗೊಳ್ಳುವಂತಿಲ್ಲ. ಅಭ್ಯರ್ಥಿಗಳ ಕುರಿತು ಪಕ್ಷದ ಹೆಸರನ್ನು ಬಳಸಿ ಮತಕೋರುವಂತಿಲ್ಲ ಎಂದರು.

ಅಭ್ಯರ್ಥಿಯು ಮುದ್ರಿಸಿರುವ ಕರಪತ್ರ, ಪೋಸ್ಟರ್‌ ಅಥವಾ ಇನ್ನಾವುದೇ ಪ್ರಚಾರ ಸಾಮಗ್ರಿಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ,ರಾಜಕೀಯ ಮುಖಂಡರ ಭಾವಚಿತ್ರ ಬಳಸಿದ್ದಲ್ಲಿ ಅಂತಹ ಪ್ರಚಾರ ಸಾಮಗ್ರಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭೆಗಳಲ್ಲಿರಾಜಕೀಯ ವ್ಯಕ್ತಿಗಳು ಭಾಗವಹಿಸಿ, ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ನೀಡುವಂತಿಲ್ಲ ಎಂದರು.

ಮದ್ಯ ಬಂದ್‌: ಮತದಾನ ಮುಕ್ತಾಯಕ್ಕೆ 48 ಗಂಟೆಗಳ ಮುಂಚೆ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಲಾಗುತ್ತದೆ. ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ನಾಲ್‌ರೋಡ್‌ ಮತ್ತು ಪಾಲಾರ್‌ನಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು. ಜಿಲ್ಲಾ ಪಂಚಾಯ್ತಿ ಸಿಇಒ ಹರ್ಷಲ್‌ ಬೋಯರ್‌ ನಾರಾಯಣ್‌ ರಾವ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಪ್ರತಿ ಮತಗಟ್ಟೆಗೂರಕ್ಷಣಾ ಕಿಟ್‌ :  ಕೋವಿಡ್‌-19ರ ಹಿನ್ನೆಲೆಯಲ್ಲಿ ಚುನಾವಣೆ ವೇಳೆ ಮುನ್ನೆಚ್ಚರಿಕೆಕ್ರಮಗಳನ್ನು ತೆಗದುಕೊಳ್ಳಲಾಗಿದೆ. ಪ್ರತಿ ಮತಗಟ್ಟೆಗೂ ರಕ್ಷಣಾಕಿಟ್‌ಗಳನ್ನು ಆಯೋಗವು ಒದಗಿಸುತ್ತಿದ್ದು, ಪ್ರತಿ ಕಿಟ್‌ನಲ್ಲಿ ಫೇಸ್‌ ಮಾಸ್ಕ್,ಕೈಗವಸು, ಫೇಸ್‌ಶೀಲ್ಡ್‌, ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನರ್‌ಗಳು ಇರುತ್ತವೆ.ಕೋವಿಡ್‌ ಸೋಂಕಿತರಿಗಾಗಿ ಮತದಾನದಂದು ಅಗತ್ಯಕೋವಿಡ್‌ ಮುನ್ನೆಚ್ಚರಿಕೆಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರವಿ ತಿಳಿಸಿದರು.

ಅಭ್ಯರ್ಥಿ ಜತೆ 5 ಮಂದಿ ಮಾತ್ರ ಪ್ರಚಾರಕ್ಕೆ :  ಅಭ್ಯರ್ಥಿಗಳು ಗರಿಷ್ಠ5 ಜನ ಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮನೆಮನೆಗೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದಕರಪತ್ರಗಳನ್ನು ಹಂಚಬಹುದು. ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಯನ್ನು ಬಳಸಿಜಾಹೀರಾತು ನೀಡುವಂತಿಲ್ಲ. ಅನಧಿಕೃತವಾಗಿ ಕರಪತ್ರಗಳನ್ನು ಮುದ್ರಿಸಿ ಪ್ರಚಾರ ಮಾಡುವುದುಕಂಡುಬಂದಲ್ಲಿ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರವಿ ಎಚ್ಚರಿಸಿದರು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.