Chamarajanagara; ಹೆಲ್ಮೆಟ್ ಖರೀದಿಸಿ ತಂದರೆ ಮಾತ್ರ ಬೈಕ್ ವಾಪಸ್!
Team Udayavani, Aug 14, 2024, 4:59 AM IST
ಚಾಮರಾಜನಗರ: ಹೆಲ್ಮೆಟ್ ಧರಿಸದಿದ್ದರೆ ಬೈಕ್ ಸವಾರರಿಗೆ ದಂಡ ವಿಧಿಸುವುದು ಸಾಮಾನ್ಯ. ಆದರೆ ಚಾಮರಾಜನಗರ ಎಸ್ಪಿ ಡಾ| ಕವಿತಾ ಅವರು ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುತ್ತಿದ್ದ ಸವಾರರ ಬೈಕ್ ವಶಪಡಿಸಿಕೊಂಡು ಹೆಲ್ಮೆಟ್ ಖರೀದಿಸಿ ತಂದು ತೋರಿಸಿ, ನಿಮ್ಮ ಬೈಕ್ ತೆಗೆದುಕೊಂಡು ಹೋಗಿ ಹೇಳುವ ಮೂಲಕ ವಿನೂತನ ಕಾರ್ಯಾಚರಣೆ ನಡೆಸಿದರು.
ಹೆಲ್ಮೆಟ್ ರಹಿತ ಚಾಲನೆ ಎಷ್ಟು ಅಪಾಯಕಾರಿ ಎಂದು ಮನದಟ್ಟು ಮಾಡಿಸಲು, ರಸ್ತೆ ಅಪಘಾತದಲ್ಲಿ ಬಿದ್ದು ಹೆಲ್ಮೆಟ್ ಧರಿಸದೇ ಮೃತಪಟ್ಟವರ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಪ್ರದರ್ಶಿಸಿದರು. ಕಳೆದ ಜುಲೈಯಲ್ಲಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ 15 ಮಂದಿ ಬೈಕ್ ಸವಾರರು ಯಾರೂ ಹೆಲ್ಮೆಟ್ ಧರಿಸಿರಲಿಲ್ಲ. ತಲೆಗೆ ಮಾತ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.