27ಕ್ಕೆ ಚಾ.ನಗರ ದಸರಾಕ್ಕೆ ಅದ್ಧೂರಿ ಚಾಲನೆ
Team Udayavani, Sep 25, 2022, 1:31 PM IST
ಚಾಮರಾಜನಗರ: ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಕಾರ್ಯ ಕ್ರಮವು ಸೆ. 27ರಿಂದ 30ರವರೆಗೆ ನಡೆಯಲಿದ್ದು, 27ರಂದು ಉದ್ಘಾಟನೆ ನಡೆಯಲಿದೆ.
ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ ಕುಮಾರ್, ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ನಗರಸಭೆಯ 21ನೇ ವಾರ್ಡ್ ಸದಸ್ಯ ಸುದರ್ಶನಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ: ಸೆ. 27ರಂದು ಬೆಳಗ್ಗೆ 10.15 ಕ್ಕೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 11 ಕ್ಕೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣ ಹಾಗೂ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ.
ಬೆಳಗ್ಗೆ 11 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಚಿತ್ರಕಲಾ ಪ್ರದರ್ಶನ ನಡೆಯಲಿದೆ. ಮಧ್ಯಾಹ್ನ 2.30 ಕ್ಕೆ ನಗರದ ಜಿಲ್ಲಾಡಳಿತ ಭವನದಿಂದ ವಿವಿಧ ಕಲಾತಂಡಗಳು ಮತ್ತು ಇಲಾಖೆಗಳಿಂದ ಸ್ತಬ್ದ ಚಿತ್ರಗಳ ಮೆರವಣಿಗೆ ಆರಂಭವಾಗಲಿದೆ. ಸಂಜೆ 5.30 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ.
28ಕ್ಕೆ ಮಹಿಳಾ ದಸರಾ ಕಾರ್ಯಕ್ರಮ: ಸೆ. 28ರಂದು ಬೆಳಗ್ಗೆ 6.30 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಮ್ಯಾರಥಾನ್, ಬೆಳಗ್ಗೆ 7.30 ಕ್ಕೆ ಮಹಿಳಾ ದಸರಾ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 11 ರಿಂದ ಸಂಜೆ 6 ಗಂಟೆಯವರೆ ನಗರದ ಜೆ.ಎಚ್. ಪಟೇಲ್ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜರುಗಲಿವೆ.
ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮ ರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆ ಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
29ಕ್ಕೆ ರೈತ ದಸರಾ ಕಾರ್ಯಕ್ರಮ : ಸೆ.29ರಂದು ಬೆಳಗ್ಗೆ 9 ಕ್ಕೆ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ರೈತ ದಸರಾ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. 10 ಕ್ಕೆ ಚಾಮರಾಜೇಶ್ವರ ದೇವಸ್ಥಾನದಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ರೈತರ ದಸರಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. 11 ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೈತ ದಸರಾ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11 ರಿಂದ ಸಂಜೆ 6 ಕ್ಕೆ ಜೆ.ಎಚ್. ಪಟೇಲ್ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯಲಿವೆ. ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಸೆ. 30ರಂದು ಬೆಳಗ್ಗೆ 11 ರಿಂದ ಸಂಜೆ 6ಕ್ಕೆ ಜೆ.ಎಚ್. ಪಟೇಲ್ ಸಭಾಂಗಣ ಹಾಗೂ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯಲಿವೆ. ಸಂಜೆ 4ರಿಂದ ರಾತ್ರಿ 9.45ರವರೆಗೆ ಚಾಮರಾಜೇಶ್ವರ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ 2022ನೇ ಸಾಲಿನ ದಸರಾ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.