ಜನರು ಪ್ರಬುದ್ಧತೆಯಿಂದ ವರ್ತಿಸಿ: ಜಿಲ್ಲಾಧಿಕಾರಿ

Team Udayavani, Mar 23, 2021, 2:05 PM IST

ಜನರು ಪ್ರಬುದ್ಧತೆಯಿಂದ ವರ್ತಿಸಿ: ಜಿಲ್ಲಾಧಿಕಾರಿ

ಚಾಮರಾಜನಗರ: ಕೋವಿಡ್‌ ಪ್ರಕರಣಗಳು ಕರ್ನಾಟಕರಾಜ್ಯದ ಜಿಲ್ಲೆಗಳು ಹಾಗೂ ಗಡಿಭಾಗಕ್ಕೆ ಹೊಂದಿ ಕೊಂಡಿರುವ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿರುವ ಕಾರಣ ಚಾಮರಾಜನಗರ ಜಿಲ್ಲೆಯಲ್ಲೂ ಕೋವಿಡ್‌ ನಿಯಂತ್ರಣಕ್ಕಾಗಿ ಸರ್ಕಾರಹೊರಡಿಸಿರುವ ಮಾರ್ಗಸೂಚಿ ಹಾಗೂ ಸುತ್ತೋಲೆಗಳನ್ನುಜನರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ತಿಳಿಸಿದ್ದಾರೆ.

ಕೋವಿಡ್‌ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನರು ಸಾಕಷ್ಟುಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ವಿವಿಧ ಸಮಾರಂಭಗಳುಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚು ಸಾರ್ವಜನಿಕರುಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವಅಪಾಯವು ಹೆಚ್ಚಿರುತ್ತದೆ. ಹೀಗಾಗಿ ಕೋವಿಡ್‌ -19ಹರಡದಂತೆ ತಡೆಗಟ್ಟಲು ಸಾರ್ವಜನಿಕ, ರಾಜಕೀಯ,ಧಾರ್ಮಿಕ ಸಭೆ-ಸಮಾರಂಭ, ಮದುವೆ, ಜನ್ಮದಿನಆಚರಣೆ, ಶವ ಸಂಸ್ಕಾರ ಸೇರಿದಂತೆ ಪ್ರತಿಯೊಂದಕ್ಕೂ ಭಾಗವಹಿಸಲು ನಿರ್ದಿಷ್ಟ ಜನರ ಸಂಖ್ಯೆಯನ್ನು ನಿಗದಿಪಡಿಸಿಸರ್ಕಾರ ಸುತ್ತೋಲೆ ಹೊರಡಿಸಿದೆ.  ಜಿಲ್ಲೆಯಲ್ಲಿ ಯಾವುದೇಕಾರ್ಯಕ್ರಮ ಸಮಾರಂಭಕ್ಕೆ ಪೂರ್ವಭಾವಿಯಾಗಿ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದರು.

ಈಗಾಗಲೆ ಮೂಲೆಹೊಳೆ ಹಾಗೂ ಕೆಕ್ಕನಹಳ್ಳದಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದೆ. ಜಿಲ್ಲೆಯಿಂದ ಹೊರಹೋಗುವ ಹಾಗೂ ಹೊರ ರಾಜ್ಯಗಳಿಂದ ಬರುವ ವಾಹನಗಳುಹಾಗೂ ಸಾರ್ವಜನಿಕರ ಮೇಲೆ ನಿಗಾ ವಹಿಸುವ ಸಲುವಾಗಿ24×7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ಆರೋಗ್ಯಕಂದಾಯ ಹಾಗೂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು ಚೆಕ್‌ಪೋಸ್ಟ್‌ಗಳಿಗೆ ನಿಯೋಜಿಸಲಾಗಿದೆ.ಜ್ವರ, ಕೆಮ್ಮು, ನೆಗಡಿ, ಶೀತದಂತಹ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೆ ವೈದ್ಯರ ಸಲಹೆ ಪಡೆಯಬೇಕು.

ಲಸಿಕೆ: ರೋಗ ವ್ಯಾಪಿಸದಂತೆ ತಡೆಯುವ ಸಲುವಾಗಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59ವರ್ಷದೊಳಗಿನ ನಾಗರಿಕರಿಗೆ ಕೋವಿಡ್‌ ರೋಗ ನಿರೋಧಕ ಶಕ್ತಿ ಒದಗಿಸುವ ಲಸಿಕೆಯನ್ನು ಉಚಿತವಾಗಿ ನೀಡ ಲಾಗುತ್ತಿದೆ. ಅಲ್ಲದೆ ಎಲ್ಲ ವಯೋಮಾನದವರಿಗೆ ಕೋವಿಡ್‌ ಪರೀಕ್ಷೆಗಾಗಿ ಗಂಟಲು ಮಾದರಿ ದ್ರವ ಸಂಗ್ರಹಣಾಮಾಡುವ ಕೇಂದ್ರಗಳು ಇವೆ. ಜಿಲ್ಲೆಯ ಜನರು ಈಹಿಂದಿನಿಂದಲೂ ನೀಡುತ್ತಿರುವ ಸಹಕಾರವನ್ನುಮುಂದುವರಿಸುವ ಮುಖೇನ ಪ್ರಬುದ್ಧತೆ ತೋರಬೇಕು ಎಂದು ಜಿಲ್ಲಾಧಿಕಾರಿ ಡಾ| ರವಿ ಮನವಿ ಮಾಡಿದ್ದಾರೆ.

ನೆಗೆಟಿವ್‌ ವರದಿ ಕಡ್ಡಾಯ : ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ಕೇರಳರಾಜ್ಯದಲ್ಲಿ ಕೋವಿಡ್‌ ಪ್ರಕರಣ ಗಳ ಸಂಖ್ಯೆ ಏರುಗತಿಯಲ್ಲಿಇರುವುದರಿಂದ ಗಡಿ ಭಾಗದಪ್ರವೇಶ ಹಾಗೂ ನಿರ್ಗಮನಸ್ಥಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಜಿಲ್ಲೆಗೆ ಬರುವವರು. ಪ್ರವೇಶದ ಹಿಂದಿನ 72 ಗಂಟೆಗಳಅವಧಿಯಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಟ್ಟುನೆಗೆಟಿವ್‌ ವರದಿ ಹೊಂದಿದ್ದಲ್ಲಿ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಅದೇ ರೀತಿ ಕೇರಳ ರಾಜ್ಯಕ್ಕೆ ತೆರಳುವವರು ಸಹ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಮಾಡಿಸಬೇಕು. ಕೇರಳಕ್ಕೆ ಹೋಗಿ ಬರುವ ಅಗತ್ಯವಸ್ತುಗಳ ಸರಕು ಸಾಗಣೆಯ ವಾಹನ ಚಾಲಕರುಹಾಗೂ ಸಹಾಯಕರು 15 ದಿನಗಳಿಗೊಮ್ಮೆ ಆರ್‌ ಟಿಪಿಸಿಆರ್‌ ಪರೀಕ್ಷೆಗೆ ಒಳಪಟ್ಟು ವರದಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿಸದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.