ಚಾಮರಾಜನಗರ: ಸಾಲ ಬಾಧೆ ತಾಳದೆ ರೈತ ಆತ್ಮಹತ್ಯೆ
Team Udayavani, Jan 9, 2021, 8:11 PM IST
ಚಾಮರಾಜನಗರ: ಸಾಲ ಬಾಧೆ ತಾಳಲಾರದೇ ರೈತರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜ್ಯೋತಿಗೌಡನಪುರದಲ್ಲಿ ಶನಿವಾರ ನಡೆದಿದೆ.
ಗ್ರಾಮದ ರೈತ ಪುಟ್ಟಣ್ಣ (40) ಮೃತಪಟ್ಟವರು. ಕಳೆದ ಎರಡು ಮೂರು ವರ್ಷಗಳಿಂದ ವಿವಿಧ ಬೆಳೆಗಳನ್ನು ಬೆಳೆಯುವ ಸಲುವಾಗಿ ಪುಟ್ಟಣ್ಣ 7-8 ಲಕ್ಷ ರೂ. ಖಾಸಗಿ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಸಾಲ ತೀರಿಸಲು ತಮ್ಮ ಜಮೀನನ್ನು ಭೋಗ್ಯಕ್ಕೆ ಹಾಕಿದ್ದು, ಅರ್ಧ ಎಕರೆ ಜಮೀನನ್ನು ಗುತ್ತಿಗೆಗೆ ಪಡೆದು ಭತ್ತ ಬೆಳೆದಿದ್ದರು. ಈ ಬಾರಿ ಭತ್ತಕ್ಕೆ ದರ ಸಿಗಲಿಲ್ಲ. ಇನ್ನೂ 3 ಲಕ್ಷ ರೂ. ಸಾಲ ಇತ್ತು. ಸಾಲಗಾರರು ಸಾಲ ಮರುಪಾವತಿಸುವಂತೆ ಒತ್ತಡ ಹೇರಿದ್ದರು. ಭೋಗ್ಯಕ್ಕೆ ಹಾಕಿದ ಜಮೀನು ವಾಪಸ್ ಪಡೆಯಲು ಸಾಧ್ಯವಾಗುವುದಿಲ್ಲ. ಈಗಿನ ಸಾಲವನ್ನೂ ತೀರಿಸಲಾಗುತ್ತಿಲ್ಲ ಎಂದು ಪುಟ್ಟಣ್ಣ ತೀವ್ರ ಹತಾಶೆಗೊಂಡಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಇಂಡೊನೇಷ್ಯಾ : ಟೇಕಾಫ್ ಆದ ಕೆಲಸಮಯದಲ್ಲೇ 62 ಪ್ರಯಾಣಿಕರನ್ನು ಹೊತ್ತ ವಿಮಾನ ನಾಪತ್ತೆ
ಶನಿವಾರ ಮಧ್ಯಾಹ್ನ ಜಮೀನಿಗೆ ತೆರಳಿ, ತಾವು ಭತ್ತ ಬೆಳೆದಿದ್ದ ಜಾಗದಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟಣ್ಣ ಅವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಸಂಬಂಧ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಲಾವಾದಿಂದ ಜಗತ್ತಿನ ಮೊಟ್ಟ ಮೊದಲ ಕಸ್ಟಮೈಸೇಬಲ್ ಸ್ಮಾರ್ಟ್ ಪೋನ್ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.