ಉಸ್ತುವಾರಿ ಸಚಿವರ ಬದಲಾವಣೆ ಕೂಗು ಮತ್ತಷ್ಟು ತೀವ್ರ


Team Udayavani, May 6, 2021, 3:24 PM IST

Change of Minister in charge

ಚಾಮರಾಜನಗರ: ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ತಡ ರಾತ್ರಿ ಸಂಭವಿಸಿದ ಆಕ್ಸಿಜನ್‌ ಕೊರತೆ ದುರಂತದ ಬಗ್ಗೆ ಜಿಲ್ಲಾಧಿಕಾರಿಯವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದಂತೆಯೇ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ಕುಮಾರ್‌ ಬಗ್ಗೆಯೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಬದಲಿಸಬೇಕೆಂಬ ಕೂಗು ಮೊದಲಿನಿಂದಲೂ ಇದ್ದು, ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಾದ ದುರಂತದ ಬಳಿಕ ಅವರ ಬದಲಾವಣೆಗೆ ಇನ್ನಷ್ಟು ಆಗ್ರಹಗಳು ವ್ಯಕ್ತವಾಗುತ್ತಿವೆ.

ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಜಿಲ್ಲೆಯಲ್ಲಿ 3 ದಿನಗಳ ಪ್ರವಾಸಕೈಗೊಂಡಿದ್ದು, ನಗರದಲ್ಲೇ ವಾಸ್ತವ್ಯ ಹೂಡಿದ್ದಾರೆ. ಉಸ್ತುವಾರಿ ಸಚಿವರು ಈ ರೀತಿಯ ಕಾಳಜಿಯನ್ನುಮೊದಲಿನಿಂದಲೂ ಅನುಸರಿಸಿದ್ದರೆ ಇಂಥದ್ದೊಂದು ದುರಂತವನ್ನು ತಪ್ಪಿಸಬಹುದಿತ್ತು ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿಬರುತ್ತಿದೆ.

ಸುರೇಶ್‌ಕುಮಾರ್‌ ತಮ್ಮ ವಾಕ್ಚಾತುರ್ಯದಿಂದ,ಸಜ್ಜನಿಕೆಯ ನಡವಳಿಕೆಯಿಂದ ಜನರ ಮನಗೆದ್ದಿದ್ದಾರೆ ನಿಜ. ಆದರೆ ಓರ್ವ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ, ಅಧಿಕಾರಿಗಳಿಂದ ಕೆಲಸ ತೆಗೆಯುವಲ್ಲಿ ಸಫ‌ಲರಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಸುರೇಶ್‌ಕುಮಾರ್‌ ಇಲ್ಲಿಯವರೆಗೆ ನೂರರ ಸನಿಹದವರೆಗೆ ಭೇಟಿ ಮಾಡಿರಬಹುದು. ಅವರ ಭೇಟಿಗಳ ಸಂಖ್ಯೆ ಹೆಚ್ಚಿರಬಹುದು ಆದರೆ, ಆ ಭೇಟಿಗಳಿಂದ ಸಮರ್ಥ ಫ‌ಲಿತಾಂಶ ಬಂದಿಲ್ಲ ಎಂಬ ಟೀಕೆಗಳಿವೆ.

ಜಿಲ್ಲಾ ವಕೀಲರ ಸಂಘದ ಒತ್ತಾಯ: ಕೆಲಮುಖಂಡರು ಪತ್ರಿಕಾಗೋಷ್ಠಿಗಳನ್ನೇ ನಡೆಸಿ ಸುರೇಶ್‌ಕುಮಾರ್‌ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲಾ ವಕೀಲರಸಂಘದ ಅಧ್ಯಕ್ಷರು ಪದಾಧಿಕಾರಿಗಳು ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿ, ಸುರೇಶ್‌ಕುಮಾರ್‌ ಅವರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಅವರು ವಿಫ‌ಲರಾಗಿದ್ದಾರೆ. ಆದ್ದರಿಂದ ಅವರನ್ನು ಉಸ್ತುವಾರಿಯಿಂದ ಬದಲಿಸಬೇಕೆಂದು ಒತ್ತಾಯಿಸಿದ್ದರು.

ಪ್ರಸ್ತುತ ಆಕ್ಸಿಜನ್‌ ಕೊರತೆ ದುರಂತ ನಡೆದ ಬಳಿಕವಂತೂ ಅವರ ವಿರುದ್ಧ ಅನೇಕ ಟೀಕೆಗಳು ಕೇಳಿ ಬಂದಿವೆ. ಕೋವಿಡ್‌ ಎರಡನೇ ಅಲೆ ಆರಂಭವಾದ ಬಳಿಕ ಎರಡು ಬಾರಿ ಕ್ಲುಪ್ತ ಸಭೆಗಳನ್ನುನಡೆಸಿ ಹೋಗಿದ್ದು ಬಿಟ್ಟರೆ, ಇಲ್ಲಿನ ಆಸ್ಪತ್ರೆಗಳ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿ, ಆಕ್ಸಿಜನ್‌ ಪೂರೈಕೆ, ಹಾಸಿಗೆಗಳ ಲಭ್ಯತೆಗೆ ಕೈಗೊಳ್ಳಬೇಕಾದ ಕ್ರಮಗಳು ಇತ್ಯಾದಿಯ ಬಗ್ಗೆ ಕಾಳಜಿವಹಿಸಲಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ

ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರು ಫೇಸ್‌ಬುಕ್‌ನಲ್ಲಿ ಬಹಳ ಸಕ್ರಿಯರು. ಆಕ್ಸಿಜನ್‌ ದುರಂತದ ಬಗ್ಗೆ ಅದೇ ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬಂದವು. ಅವರು ಫೇಸ್‌ಬುಕ್‌ನಲ್ಲಿ ಸಕ್ರಿಯರಾಗಿರುತ್ತಾರೆ. ಆದರೆ ಆಕ್ಸಿಜನ್‌ ಕೊರತೆ ಅವರಿಗೆ ಗೊತ್ತಾಗಲಿಲ್ಲವೇ? ಎಂದು ಹಲವರು ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದಾರೆ. ಸುರೇಶ್‌ಕುಮಾರ್‌ ಅವರು ಕೋವಿಡ್‌ ವಿಷಯದಲ್ಲಿ ತಮ್ಮ ಶಾಸಕ ಕ್ಷೇತ್ರ ರಾಜಾಜಿನಗರದ ಬಗ್ಗೆ ತೆಗೆದುಕೊಂಡಷ್ಟು ಆಸಕ್ತಿಯನ್ನು ತಮ್ಮ ಉಸ್ತುವಾರಿ ಜಿಲ್ಲೆಯ ಬಗ್ಗೆ ವಹಿಸುತ್ತಿಲ್ಲ ಎಂಬ ಟೀಕೆಗಳು ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿದ್ದವು.

ಎಲ್ಲವೂ ಸರಿ ಇದೆ ಎಂಬುದನ್ನು ನಂಬಿದ ಸಚಿವರು

ಸಚಿವರು ಜಿಲ್ಲೆಗೆ ಬಂದಾಗ ಜಿಲ್ಲಾಧಿಕಾರಿ ಡಾ.ರವಿ ಅವರು ನೀಡುವ ಎಲ್ಲವೂ ಸರಿಯಾಗಿದೆ ಎಂಬ ಮಾಹಿತಿಗಳನ್ನೇ ನಂಬಿದರು. ಆಕ್ಸಿಜನ್‌ಕೊರತೆ ವಿಷಯದಲ್ಲೂ ಇದೇ ದುರಂತಕ್ಕೆ ಕಾರಣವಾಯಿತು ಎನ್ನಲಾಗುತ್ತಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಕ್ಸಿಜನ್‌ ಕೊರತೆ ತೀವ್ರವಾಗಿತ್ತು. ಆದರೆ ಜಿಲ್ಲಾಧಿಕಾರಿಯವರು ಮಾತ್ರ ಹಾಸಿಗೆಗಳಿಗೆ ಕೊರತೆಯಿಲ್ಲ, ಆಕ್ಸಿಜನ್‌ಗೆ ಕೊರತೆಯಿಲ್ಲ ಎಂದೇ ಹೇಳುತ್ತಿದ್ದರು. ಸುದ್ದಿಗೋಷ್ಠಿಗಳಲ್ಲೂ ಆಲ್‌ ಈಸ್‌ ವೆಲ್‌ ಎಂಬುದೇ ಅವರ ಧ್ಯೇಯ ವಾಕ್ಯವಾಗಿತ್ತು. ಇದೇ ಮಾಹಿತಿಯನ್ನೇ ಉಸ್ತುವಾರಿ ಸಚಿವರಿಗೂ ಕೊಡುತ್ತಿದ್ದರು. ಹೀಗಾಗಿ ಸಮಸ್ಯೆಗಳ ತೀವ್ರತೆ ಸುರೇಶ್‌ಕುಮಾರ್‌ ಅವರಿಗೆ ಅರಿವಾಗಲಿಲ್ಲ. ಅದನ್ನು ಪರಿಹರಿಸಲು ಕ್ರಮವನ್ನೂ ಕೈಗೊಳ್ಳಲಾಗಲಿಲ್ಲ. ಹೀಗಾಗಿ ಆಕ್ಸಿಜನ್‌ ಕೊರತೆ ಇರುವ ಭೀಕರ ಸಮಸ್ಯೆಯೊಂದು ಅವರು ಗಮನಕ್ಕೆ ಬರಲಿಲ್ಲ.

ಸ್ವಪಕ್ಷದವರ ಅಸಮಾಧಾನ

ಸುರೇಶ್‌ಕುಮಾರ್‌ ಕಾರ್ಯವೈಖರಿಯ ಬಗ್ಗೆ ಜಿಲ್ಲೆಯ ಬಿಜೆಪಿ ವಲಯದಲ್ಲೇ ಅಸಮಾಧಾನಗಳಿವೆ. ಸ್ಥಳೀಯ ಬಿಜೆಪಿ ಮುಖಂಡರನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಪ್ರಮುಖ ಮುಖಂಡರು, ಕಾರ್ಯಕರ್ತರನ್ನು ಪರಿಗಣಿಸಿಲ್ಲ ಎಂಬ ಅತೃಪ್ತಿ ಅನೇಕ ಮುಖಂಡರಲ್ಲಿದೆ. ಪಕ್ಷದ ಮುಖಂಡರೇ ಅವರನ್ನು ಜಿಲ್ಲಾ ಉಸ್ತುವಾರಿಯಿಂದ ಬದಲಿಸಬೇಕೆಂದು ವರಿಷ್ಠರಲ್ಲಿ ಒತ್ತಾಯ ಮಾಡಿದ್ದೂ ಇದೆ. ಈ ಬಗ್ಗೆ ಬಹಿರಂಗವಾಗಿ ಮಾತನಾಡಲಾಗದೇ, ಪಕ್ಷದ ಘಟಕಗಳಲ್ಲಿ, ಪರಸ್ಪರ ಅಸಮಾಧಾನ ಹಂಚಿಕೊಂಡಿದ್ದಾರೆ

ಸಚಿವ ಅಶೋಕ್‌ ಹೇಳಿಕೆ ಹಂಚಿಕೊಂಡು ಸಂತಸ

ಕೆಲವು ತಿಂಗಳ ಹಿಂದೆ ಚಾಮರಾಜನಗರಕ್ಕೂಎಸ್‌.ಟಿ. ಸೋಮಶೇಖರ್‌ ಅವರನ್ನೇ ಉಸ್ತುವಾರಿ ಸಚಿವರಾಗಿ ನೇಮಿಸಬೇಕೆಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಮದ್ದೂರಿನ ಸಭೆಯೊಂದರಲ್ಲಿ ಹೇಳಿದ್ದರು. ಆ ಪತ್ರಿಕೆಯ ಕಟಿಂಗ್‌ ಅನ್ನು ಜಿಲ್ಲೆಯ ಬಿಜೆಪಿಯ ಹಲವು ಪದಾಧಿಕಾರಿಗಳು ಗ್ರೂಪ್‌ಗಳಲ್ಲಿ, ವೈಯಕ್ತಿಕವಾಗಿ ಹಂಚಿಕೊಂಡು ಸಂಭ್ರಮಿಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.