ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ
Team Udayavani, Jan 24, 2020, 11:49 AM IST
ಗುಂಡ್ಲುಪೇಟೆ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎಲ್ಲರಲ್ಲಿಯೂ ಅರಿವು ಮೂಡಿಸಲಾಗುತ್ತಿದೆ ಎಂದು ತೆರಕಣಾಂಬಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಮತಾ ಹೇಳಿದರು.
ತಾಲೂಕಿನ ತೆರಕಣಾಂಬಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಗುರುವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕಾದ ಹೊಣೆ ಎಲ್ಲರ ಮೇಲಿದೆ. ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಜತೆಗೆ ಅವರ ಹಕ್ಕುಗಳನ್ನು ಗೌರವಿಸಬೇಕು. ಬಾಲ್ಯವಿವಾಹ ತಡೆಗಟ್ಟಲು ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡುವ ಪಾಲಕರು, ಕಲ್ಯಾಣ ಮಂಟಪದ ಮಾಲೀಕರು ಹಾಗೂ ಪುರೋಹಿತರ ವಿರುದ್ಧವೂ ಪ್ರಕರಣ ದಾಖಲಿಸಿ, ಶಿಕ್ಷೆ ವಿಧಿಸಲಾಗುವುದು. ಆದ್ದರಿಂದ ಈ ಬಗ್ಗೆ ಜಾಥಾದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಂತೆಯ ಆವರಣದಲ್ಲಿ ಮಳಿಗೆ ತೆರೆದು ಬಾಲ ಹಕ್ಕುಗಳ ಬಗ್ಗೆ ಕರಪತ್ರ ವಿತರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಗ್ರಾಪಂ ಕಾರ್ಯದರ್ಶಿ ಜಿ.ಶಿಲ್ಪಾ, ಬಾಲ ನ್ಯಾಯ ಮಂಡಲಿ ಸದಸ್ಯ ಸುರೇಶ್, ಮಕ್ಕಳ ರಕ್ಷಣಾ ಘಟಕದ ಶ್ರೀನಾಗು, ಅಶೋಕ್, ಮಕ್ಕಳ ಸಹಾಯವಾಣಿಯ ಮಹೇಶ್, ಸುಮಿತ್ರಾ, ಸರ್ಕಾರಿ ಕಿರಿಯ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಟಿ.ಪಿ.ಸುಬ್ರಹ್ಮಣ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.