ಪರೀಕ್ಷಾ ಪೇ ಚರ್ಚಾ ವೀಕ್ಷಿಸಿದ ಮಕ್ಕಳು
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಪ್ರಸಾರವನ್ನು ವಿದ್ಯಾರ್ಥಿಗಳು ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು.
Team Udayavani, Apr 2, 2022, 6:06 PM IST
ಚಾಮರಾಜನಗರ: ನವದೆಹಲಿಯ ತಾಳ್ಕಟೋರ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಪರೀಕ್ಷಾ ಪೇ ಚರ್ಚಾ ನೇರ ಸಂವಾದದ ಪ್ರಸಾರ ಕಾರ್ಯಕ್ರಮವನ್ನು ಜಿಲ್ಲೆಯ ಹೊಂಡರಬಾಳು ಜವಹರ ನವೋದಯ, ಮಾದಾಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಸೇರಿ ಇತರೆಡೆ ವಿದ್ಯಾರ್ಥಿಗಳು ವೀಕ್ಷಿಸಿದರು.
ವಿದ್ಯಾರ್ಥಿಗಳಲ್ಲಿ ಕಲಿಕಾ ಭಯ ಹೋಗಲಾಡಿಸಲು ಹಾಗೂ ಪರೀಕ್ಷಾ ಆತಂಕ ದೂರ ಮಾಡಿ ಒತ್ತಡ ರಹಿತ ವಾತಾವರಣ ನಿರ್ಮಿಸಲು ಪೂರಕವಾದ ನೇರ ಸಂವಾದದ ಪ್ರಸಾರವನ್ನು ಹೊಂಡರಬಾಳುವಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸಿದರು.
ಸಂವಾದದ ಪ್ರಸಾರ ವೀಕ್ಷಣೆಗೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ನಗರದ ಬಳಿಯಿರುವ ಮಾದಾಪುರದ ಕೇಂದ್ರೀಯ ವಿದ್ಯಾಲಯದಲ್ಲಿಯೂ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಪ್ರಸಾರವನ್ನು ವಿದ್ಯಾರ್ಥಿಗಳು ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು. 6 ರಿಂದ 11ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸೆಮಿನಾರ್ ಹಾಲ್‌ನಲ್ಲಿ ಹಾಗೂ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಲ್ಯಾಬ್‌ನಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸಂವಾದ ವೀಕ್ಷಿಸಿದರು.
ಹೊಂಡರಬಾಳು ಜವಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ವಿ.ಪ್ರಸಾದ್, ಮಾದಾಪುರದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ನಿರ್ಮಲಾಕುಮಾರಿ, ಶಿಕ್ಷಣ ಅಧಿಕಾರಿಗಳಾದ ಮಂಜುನಾಥ್, ಲಕ್ಷ್ಮೀಪತಿ, ಬೋಧಕರಾದ ಯಲ್ಲಪ್ಪ ಬೈಯಾಪುರ, ಕುರಿಯನ್ ಥಾಮಸ್ ಇತರರು ಹಾಜರಿದ್ದರು.
ಶ್ರೇಯಾಗೆ ನಿರಾಶೆ: ನಗರದ ಕೇಂದ್ರೀಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಅವರನ್ನು ಪ್ರಧಾನಿಗಳ ಜೊತೆ ಪರೀಕ್ಷಾ ಪೇ ಚರ್ಚಾ ವರ್ಚುವಲ್ ಸಂವಾದ ನಡೆಸಲು ಆಯ್ಕೆ ಮಾಡಲಾಗಿತ್ತು. ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಸುದ್ದಿಗೋಷ್ಠಿ ನಡೆಸಿ ಆಕೆಯ ಆಯ್ಕೆಯನ್ನು ಘೋಷಿಸಿದ್ದರು. ಆದರೆ, ಕೊನೆಯ ಹಂತದ ಪಟ್ಟಿಯಲ್ಲಿ ಆಕೆಯ ಹೆಸರನ್ನು ಕೈ ಬಿಡಲಾಗಿತ್ತು. ಹೀಗಾಗಿ ಆಕೆಗೆ ಪ್ರಧಾನಿಯವರ ಜೊತೆ ಸಂವಾದ ನಡೆಸಲು ಅವಕಾಶ
ದೊರಕಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.