ಧ್ರುವ ಹ್ಯಾಟ್ರಿಕ್‌ ಗೆಲುವಿಗೆ ಸಹಕರಿಸಿ


Team Udayavani, Apr 3, 2019, 3:00 AM IST

dhruva

ಕೊಳ್ಳೇಗಾಲ: ನಗರದ ಮುಜರಾಯಿ ಇಲಾಖೆಗೆ ಸೇರಿದ ಮರಳೇಶ್ವರ ದೇವಾಲಯದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಂಸದ ಆರ್‌.ಧ್ರುವನಾರಾಯಣ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್‌ ಕಾರ್ಯಕರ್ತರ ನೇತೃತ್ವದಲ್ಲಿ ಮರಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾರ್ಯಕರ್ತರು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಆರ್‌.ಧ್ರುವನಾರಾಯಣ ಹ್ಯಾಟ್ರಿಕ್‌ ಗೆಲುವು ಸಾಧಿಸುವಂತೆ ಜೈಕಾರ ಹಾಕುತ್ತಾ ದೇವಸ್ಥಾನದಿಂದ ಮುಖ್ಯ ರಸ್ತೆಯ ಮೂಲಕ ಮನೆ ಮನೆಗೆ ತೆರಳಿ ಕರ ಪತ್ರವನ್ನು ವಿತರಿಸಿ ಮತಯಾಚನೆ ಮಾಡಿದರು.

ಮೈತ್ರಿ ಅಭ್ಯರ್ಥಿಗೆ ಮತ ನೀಡಿ: ಇದೇ ಸಂದರ್ಭದಲ್ಲಿ ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ಬಿಜೆಪಿಯಂತಹ ಕೋಮುವಾದಿ ಪಕ್ಷ ಮತ್ತು ಸುಳ್ಳಿನ ಸರದಾರ ಪ್ರಧಾನಿ ನರೇಂದ್ರಮೋದಿ ಮಾತಿಗೆ ಮರುಳಾಗದೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತವನ್ನು ದೊರಕಿಸಿಕೊಟ್ಟು ಹ್ಯಾಟ್ರಿಕ್‌ ಗೆಲುವಿಗೆ ಸಹಕಾರಿಯಾಗಬೇಕೆಂದು ಮನವಿ ಮಾಡಿದರು.

ಹಸ್ತಕ್ಕೆ ಮತ ಹಾಕಿ: ಕಾರ್ಯಕರ್ತರು ಈ ಹಿಂದೆ ಕೇಂದ್ರದಲ್ಲಿ ಆಳ್ವಿಕೆ ನಡೆಸಿದ ಯುಪಿಎ ಸರ್ಕಾರದ ಆಡಳಿತ ವೈಖರಿ ಮತ್ತು ರಾಜ್ಯ ಸಂಮಿಶ್ರ ಸರ್ಕಾರದಲ್ಲಿ ಜನಪರ ಕೆಲಸವಾಗುತ್ತಿರುವ ಅಭಿವೃದ್ಧಿಯ ಬಗ್ಗೆ ಮತದಾರರಿಗೆ ತಿಳಿವಳಿಕೆ ನೀಡಬೇಕು ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಕಾಂಗ್ರೆಸ್‌ ಹಸ್ತದ ಗುರುತಿಗೆ ಮತ ದೊರಕಿಸಿಕೊಡಬೇಕು ಎಂದರು.

ಕೋಮುವಾದಿ ಪಕ್ಷಕ್ಕೆ ಸೇರಲ್ಲ: ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧ್ರುವನಾರಾಯಣ, ಚುನಾವಣಾ ಪ್ರಚಾರವನ್ನು ಮಾಜಿ ಸಂಸದರು ಶಾಸಕರು ಮಾಜಿ ಶಾಸಕರು ಜಿಪಂ ತಾಪಂ, ಗ್ರಾಪಂ ಮತ್ತು ನಗರಸಭೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಪಕ್ಷದಿಂದ ಅಸಮಾಧಾನಗೊಂಡಿರುವ ಕಿನಕಹಳ್ಳಿ ರಾಚಯ್ಯ,

ಡಿಎನ್‌ ನಟರಾಜು, ಪಕ್ಷ ತೊರೆದು ಬಿಜೆಪಿಗೆ ಸೇರುತ್ತಾರೆ ಎಂದು ವದಂತಿ ಇದ್ದು ಅವರು ಪಕ್ಷ ಬಿಡದಂತೆ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಮನವೊಲಿಸುವ ಪ್ರಯತ್ನ ಮಾಡಿದ್ದು ಅವರು ಜ್ಯಾತ್ಯತೀತ ಕಾಂಗ್ರೆಸ್‌ಪಕ್ಷ ಬಿಟ್ಟು ಕೋಮುವಾದಿ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮನೆ ಮನೆಗೆ ತೆರಳಿ ಮತಯಾಚನೆ: ನಗರದ 31 ವಾರ್ಡ್‌ಗಳಿದ್ದು ಎಲ್ಲಾ ವಾರ್ಡ್‌ಗಳಲ್ಲಿ ಮಾಜಿ ಶಾಸಕರಾದ ಎಸ್‌.ಜಯಣ್ಣ, ಎಸ್‌.ಬಾಲರಾಜು, ಎ.ಆರ್‌.ಕೃಷ್ಣಮೂರ್ತಿ ನೇತೃತ್ವದಲ್ಲಿ ಪ್ರತಿ ದಿನ 3 ರಿಂದ 4 ವಾರ್ಡ್‌ಗಳಲ್ಲಿ ಮತ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿಪರ ಮತಯಾಚನೆ ಮಾಡುವರು ಎಂದು ಹೇಳಿದರು. ಮರಳೇಶ್ವರ ದೇವಾಲಯದಿಂದ ಸಮಂತಗೆರೆ ಬಡಾವಣೆವರೆಗೆ ಪಾದಯಾತ್ರೆ ಮಾಡಿದ ಸಂಸದರು ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಕಾಂಗ್ರೆಸ್‌ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕರಾದ ಎಸ್‌.ಜಯಣ್ಣ, ಎಸ್‌.ಬಾಲರಾಜು, ಎ.ಆರ್‌.ಕೃಷ್ಣಮೂರ್ತಿ, ನಗರಸಭಾ ಸದಸ್ಯರಾದ ಶಾಂತರಾಜು, ರಾಘವೇಂದ್ರ, ಮಂಜುನಾಥ, ಸುರೇಶ್‌, ಮಾಜಿ ಸದಸ್ಯರಾದ ಹರ್ಷ, ಮಲ್ಲಿಕಾರ್ಜುನ, ಸೆಸ್ಕ್ ಮಾಜಿ ನಿದೇರ್ಶಕ ಡಿ.ಸಿದ್ದರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ತೋಟೆಶ್‌, ಮುಖಂಡರಾದ ಕೊಪ್ಪಳಿ ಮಹದೇವನಾಯಕ, ಕರವೇ ಅಧ್ಯಕ್ಷ ಮತೀನ್‌, ಗೌರಾವಾಧ್ಯಕ್ಷ ಪ್ರಭಾಕರ್‌ ಮತ್ತು ಮುಖಂಡರು ಇತರರು ಇದ್ದರು.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.