ವಾಣಿಜ್ಯ ಸಂಕೀರ್ಣ ಕಟ್ಟಡ, ಬಸ್ ನಿಲ್ದಾಣ ಲೋಕಾರ್ಪಣೆ
Team Udayavani, Sep 8, 2020, 3:20 PM IST
ಚಾಮರಾಜನಗರ: ನಗರದಲ್ಲಿ ನಗರಸಭೆ ವತಿಯಿಂದ ಮುಖ್ಯಮಂತ್ರಿಗಳ ನಗರೋತ್ಥಾನ ವಿಶೇಷ ಅನುದಾನದಲ್ಲಿ 2.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ 2.50 ಕೋಟಿ ರೂ.ವೆಚ್ಚದಲ್ಲಿ ನವೀಕೃತ ಗೊಂಡಿರುವ ಖಾಸಗಿ ಬಸ್ ನಿಲ್ದಾಣ ಸೋಮವಾರ ಲೋಕಾರ್ಪಣೆಗೊಂಡಿತು.
ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್ ಹಾಗೂ ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಈ ಎರಡು ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲಾಡಳಿತ, ನಗಾರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸಲಾಗಿದ್ದು ಕಟ್ಟಡದಲ್ಲಿ ವಾಹನ ನಿಲುಗಡೆ ಸ್ಥಳ, ಉಗ್ರಾಣ ಕೊಠಡಿ, ಶಾಪಿಂಗ್ ಮಳಿಗೆ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಖಾಸಗಿ ಬಸ್ ನಿಲ್ದಾಣದಲ್ಲಿ ಏಕಕಾಲದಲ್ಲಿ 22 ಬಸ್ ಗಳು ನಿಲ್ಲುವ ವ್ಯವಸ್ಥೆ ಮಾಡಲಾಗಿದೆ. ನಾಗರಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರು, ನಗರಾಭಿವೃದ್ಧಿ ಹಾಗೂ ಇತರೆ ಯೋಜನೆಗಳ ಬಗ್ಗೆ ಹೆಚ್ಚು ಗಮನ ವಹಿಸಲಾಗಿದೆ. ಇನ್ನುಳಿದ ಹಲವು ಹಂತದ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಯುಡಿಜಿ ಹಾಗೂ ಇತರೆ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿ ಸುವ ಕಾರ್ಯ ನಿರ್ವಹಿಸಲಾಗುತ್ತದೆ ಎಂದರು.
ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ರೇಷ್ಮೆ ಹಾಗೂ ತೋಟಗಾರಿಗೆ ಇಲಾಖೆಯಿಂದ ರೈತರ ಸಮಸ್ಯೆಗಳನ್ನು ಅರಿತು ರೈತರಿಗೆ ಬೆಂಬಲ ಬೆಲೆ ಹಾಗೂ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಮುಖ್ಯ ಮಂತ್ರಿ ಅವರನ್ನು ಜಿಲ್ಲೆಗೆ ಕರೆತಂದು ಅಭಿವೃದ್ಧಿಗೆಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ಕುಡಿಯುವ ನೀರಿನ ಕೆಲಸವನ್ನು ಪೌರಾಡಳಿತ ಸಚಿವರು ಅದಷ್ಟು ಬೇಗ ಕಲ್ಪಿಸಬೇಕು ಎಂದರು.
ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ, ಶಾಸಕ ಸಿ.ಎಸ್. ನಿರಂಜನ್‌ಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ. ಶಾಂತಮೂರ್ತಿ, ಜಿ.ಪಂ. ಉಪಾಧ್ಯಕ್ಷೆ ಶಶಿಕಲಾ, ತಾ.ಪಂ. ಅಧ್ಯಕ್ಷೆ ಎಚ್.ಎಸ್. ಶೋಭಾ, ಉಪಾಧ್ಯಕ್ಷ ಕೆ. ರವೀಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಎಸ್ಪಿ ದಿವ್ಯಾ ಸಾರಾ ಥಾಮಸ್, ಜಿಪಂ ಸಿಇಒ ಭೋಯರ್ ಹರ್ಷಲ್ ರಾವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.