ಗಡಿ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ: ಕಾರ್ಯಕರ್ತರಿಂದ ಧರಣಿ
Team Udayavani, May 28, 2023, 3:23 PM IST
ಯಳಂದೂರು: ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ 4 ಸ್ಥಾನಗಳ ಪೈಕಿ 3 ರಲ್ಲಿ ಜಯಗಳಿಸಿದೆ. ಆದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಅನ್ಯಾಯವಾಗಿದ್ದು ಇಲ್ಲಿನ ಜನರ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ ಎಂದು ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಶನಿವಾರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪಪಂ ಸದಸ್ಯ ಮಹೇಶ್ ಮಾತನಾಡಿ, ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಇಲ್ಲಿನ ಅಭ್ಯರ್ಥಿಗಳಲ್ಲಿ ನಾಲ್ಕು ಬಾರಿ ಜಯಗಳಿಸಿರುವ ಚಾಮರಾಜನಗರದ ಶಾಸಕ ಸಿ. ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನವನ್ನು ನೀಡುವ ಭರವಸೆ ಇತ್ತು. ಆದರೆ ಇವರಿಗೆ ಉಪಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಕೊಳ್ಳೇಗಾಲದಲ್ಲಿ ಎ.ಆರ್. ಕೃಷ್ಣಮೂರ್ತಿ ಹಾಗೂ ಗುಂಡ್ಲುಪೇಟೆಯಲ್ಲಿ ಗಣೇಶ್ ಪ್ರಸಾದ್ ಕೂಡ ಜಯಗಳಿಸಿದ್ದಾರೆ. ಇವರನ್ನೂ ಕಡೆಗಣಿಸಲಾಗಿದೆ ಎಂದರು.
ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿ, ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮುದಾಯದ ಪ್ರಬಲ ನಾಯಕರಾಗಿದ್ದು, ರಾಜ್ಯದ ಏಕೈಕ ಶಾಸಕರಾಗಿದ್ದಾರೆ. ಈ ಹಿಂದೆ ಪುಟ್ಟರಂಗಶೆಟ್ಟಿ ಸಚಿವರಾಗಿದ್ದರು. ಈ ಬಾರಿಯೂ ಇವರಿಗೆ ಸಚಿವ ಸ್ಥಾನ ಲಭಿಸುವ ಭರವಸೆ ಇತ್ತು. ಆದರೆ ಇದು ಹುಸಿಯಾಗಿದ್ದು ಈ ಬಗ್ಗೆ ಸಂಬಂಧಪಟ್ಟವರು ಕ್ರಮ ವಹಿಸಬೇಕು ಎಂದರು.
ಪಪಂ ಸದಸ್ಯ ವೈ.ಜಿ. ರಂಗನಾಥ ಮಾತನಾಡಿ, ಸಿ.ಪುಟ್ಟರಂಗಶೆಟ್ಟಿರವರ ಹೆಸರು ಸಚಿವರ ಅಂತಿಮ ಪಟ್ಟಿಯಲ್ಲಿತ್ತು. ಆದರೆ ಮಧ್ಯರಾತ್ರಿ ಏಕಾಏಕಿ ಇವರ ಹೆಸರು ತೆಗೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇವರಿಗೆ ಸಚಿವ ಸ್ಥಾನವನ್ನು ನೀಡಲು ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ರಮ ವಹಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಮತ್ತಷ್ಟು ತೀವೃಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಿಜ್ವಾನ್, ಮಾರನಾಯಕ, ಲಿಂಗರಾಜು, ಮಲ್ಲು, ರಾಜಶೇಖರ್, ಗ್ರಾಪಂ ಸದಸ್ಯ ಸ್ವಾಮಿ, ಪುಟ್ಟ, ಕೆ. ವೆಂಕಟೇಶ್, ಎ. ವೆಂಕಟೇಶ್, ಇಬ್ರಾಹಿಂ, ಮಹದೇವ ಶೆಟ್ಟಿ, ಗೋವಿಂದಶೆಟ್ಟಿ, ಕುಮಾರ, ರಂಗಸ್ವಾಮಿ, ನಿಂಗರಾಜು, ರಾಜಶೇಖರ್, ಗೋವಿಂದನಾಯಕ, ಕಾಮಶೆಟ್ಟಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.