ದಲಿತರನ್ನು ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್
ಪಕ್ಷ ಸಂಘಟಿಸಲು ಜಿಲ್ಲಾ ಪ್ರವಾಸ: ಛಲವಾದಿ ನಾರಾಯಣಸ್ವಾಮಿ
Team Udayavani, Aug 14, 2021, 2:43 PM IST
ಕೊಳ್ಳೇಗಾಲ: ಬಿಜೆಪಿ ಕೋಮುವಾದಿ ಪಕ್ಷ ಎಂದು ಕಾಂಗ್ರೆಸಿಗರು ಇಲ್ಲಸಲ್ಲದ ಅಪಪ್ರಚಾರದಿಂದಾಗಿ ದಲಿತರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಾರೆ. ಈ ಬಗ್ಗೆ ದಲಿತರ ಎಚ್ಚರವಹಿಸಬೇಕು ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ
ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಸತ್ಯಾಂಶ ತಿಳಿದು ಬಿಜೆಪಿಗೆ ಬರುತ್ತಿದ್ದಾರೆ. ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು. ಬಿಜೆಪಿ ದೇಶದ ಎಲ್ಲಾ ಸಮುದಾಯ ವಿಶ್ವಾಸ ಗಳಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಸಂಸತ್‌ನಲ್ಲಿ ಎಲ್ಲಾ ವರ್ಗದವರಿಗೆ ಸಚಿವ ಸ್ಥಾನ ಕಲ್ಪಿಸಿಕೊಟ್ಟು ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಇದನ್ನೂ ಓದಿ:ಹಿಂದೆಲ್ಲೂ ಹೇಳಿಕೊಳ್ಳದ ವಿಷಯಗಳಂದ್ರೆ..
ಕೋವಿಡ್ ಮೊದಲ ಮತ್ತು 2ನೇ ಅಲೆ ಇದ್ದರೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸಕೈಗೊಂಡು ಪಕ್ಷ ಸಂಘಟನೆಗೆ ಮಹತ್ವ ನೀಡಲಾಗಿದೆ. ಅದೇ ರೀತಿ ಮೂರನೇ ಅಲೆಯ ನಡುವೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗಿರುವುದಾಗಿ ಹೇಳಿದರು.
ಸೇರ್ಪಡೆ: ಬಿಎಸ್ಪಿಯಿಂದ ಗೆದ್ದಿರುವ ಶಾಸಕ ಎನ್.ಮಹೇಶ್ ಬಿಜೆಪಿಗೆ ಯಾವುದೇ ಷರತ್ತು ಇಲ್ಲದೆ ಸೇರ್ಪಡೆ ಯಾಗಿರುವುದನ್ನು ಸ್ವಾಗತಿಸಿದ ಅವರು, ಅವರ ಸೇರ್ಪಡೆಗೆ ಸಹಕರಿಸಿದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರನ್ನು ಅಭಿನಂದಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವೈ. ಸಂಪಂಗಿ, ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷ ಜಿ.ಎನ್.ನಂಜುಂಡಸ್ವಾಮಿ, ನಗರಸಭಾ ಉಪಾದ್ಯಕ್ಷೆಕವಿತ,ಕುಂತೂರು ಗ್ರಾಪಂ ಅಧ್ಯಕ್ಷ ಶಿವಣ್ಣ, ಮುಖಂಡರಾದ ಮಾಂಬಳ್ಳಿ ನಂಜುಂಡಸ್ವಾಮಿ, ದಿವಾಕರಬಾಬು, ರಾಚಯ್ಯ, ಮಾರಪ್ಪ, ಪ್ರಜ್ವಲ್, ಪ್ರಕಾಶ್, ಪದ್ಮಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.