ಕಾಂಗ್ರೆಸ್‌ನಿಂದ ಉಚಿತ ಯೋಜನೆಗಳ ನಾಟಕ
Team Udayavani, Mar 7, 2023, 2:33 PM IST
ಗುಂಡ್ಲುಪೇಟೆ: ತಾಲೂಕಿನ ಶಿವಪುರ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಉದ್ಘಾಟನೆ ಹಾಗೂ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರು ಭೂಮಿಪೂಜೆ ನೆರವೇರಿಸಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಕುರಿತು ನಾಟಕವಾ ಡುತ್ತಿದೆ. ಈ ಹಿಂದೆ 5 ವರ್ಷ ಆಡಳಿತ ನಡೆಸಿದ ವೇಳೆ ಇವು ಏಕೆ ನೆನಪಾಗಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದೂ ಉಚಿತ ಯೋಜನೆಗಳನ್ನು ಕೊಡಲು ಸಾಧ್ಯವಿಲ್ಲ ಎಂದು ಕುಟುಕಿದರು.
ಕ್ಷೇತ್ರದಲ್ಲಿ ಹಿಂದೆ ಆಡಳಿತ ನಡೆಸಿದವರು ಗಲಾಟೆ ಸೃಷ್ಟಿಸಿ ಪೊಲೀಸ್ ಠಾಣೆಯಲ್ಲಿ ರಾಜಕೀ ಯ ಮಾಡುತ್ತಿದ್ದರು. ತಮ್ಮ ಅವಧಿಯಲ್ಲಿ ಉತ್ತಮ ಕೆಲಸಗಳಾಗಿದ್ದು, ಕಾಡಂಚಿನ ಗ್ರಾಮಗಳಾದ ಮಂಗಲಕ್ಕೆ 50 ಲಕ್ಷ, ಏಲಚೆಟ್ಟಿಗೆ 25 ಲಕ್ಷ ರೂ, ಚಿಕ್ಕತುಪ್ಪೂರಿನಲ್ಲಿ ಬಸವ ಭವನ ನಿರ್ಮಾಣ, ಬೆರಟಹಳ್ಳಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ಸಾಕಷ್ಟು ಅನುದಾನ ಹಾಕಿ ಅಭಿವೃದ್ಧಿ ಮಾಡಲಾಗಿದೆ. ನಿಮ್ಮ ಅವಧಿಯಲ್ಲಿ ದೊಡ್ಡ ಲೀಡರ್‌ಗಳಿದ್ದರೂ ಯಾಕೆ ಇಷ್ಟೊಂದು ಪ್ರಮಾಣದ ಕೆಲಸ ಮಾಡಲಿಲ್ಲ ಎಂದು ವಿರೋಧ ಪಕ್ಷದವರನ್ನು ಟೀಕಿಸಿದರು.
ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ್, ಬಸವೇಶ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಪ್ರಣಯ್, ನಮೋ ಮಂಜು ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.