ಸಾಧನೆಗಾಗಿ ನಿರಂತರ ಚಿಂತನೆ ಅಗತ್ಯ
Team Udayavani, Nov 24, 2019, 3:00 AM IST
ಚಾಮರಾಜನಗರ: ವಿದ್ಯಾರ್ಥಿಗಳು ಸಾಧನೆ ಕುರಿತು ನಿರಂತರ ಚಿಂತನೆ ಇಟ್ಟುಕೊಂಡು ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್‌ಕುಮಾರ್ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾತಂಗ ಪರಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾತಂಗ ಸಮಾನ ಮನಸ್ಕರ ಪ್ರಗತಿಪರ ವೇದಿಕೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮತ್ತು ಸಾಂಸ್ಕೃತಿಕ ಶಿಬಿರ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಸಾಧನೆ ನಮಗೆ ಸ್ಫೂರ್ತಿ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಲ್ಲಿ ಸಾಮಾಜಿಕ ಅಪಮಾನ ಮೆಟ್ಟಿನಿಂತು ವಿಶ್ವಮಟ್ಟದ ಶ್ರೇಷ್ಠ ವ್ಯಕ್ತಿಯಾಗಿ ಬೆಳೆದರು. ಅವರ ಶ್ರೀರಕ್ಷೆ ನಮಗೆ ಇದೆ. ಅವರೇ ನಮಗೆ ಬೆಳಕಾಗಿದ್ದಾರೆ. ಅವರನ್ನು ಸ್ಫೂರ್ತಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಓದಿ ಸಾಧನೆ ಮಾಡಬೇಕು ಎಂದು ಹೇಳಿದರು.
ಋಣ ತೀರಿಸುವ ಕೆಲಸ ಮಾಡಿ: ಮಾತಂಗ ಪರಿವಾರ ಸಮುದಾಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಂಸ್ಕೃತಿಕ ಮಾರ್ಗದರ್ಶ ಕೊಡಲು ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಶತಶತಮಾನಗಳಿಂದ ದೌರ್ಜನ್ಯಕ್ಕೊಳಗಾಗಿ ಕಣ್ಣೀರಿಟ್ಟು ಹೋರಾಟ ನಡೆಸಿದ್ದರಿಂದ ಮೀಸಲಾತಿ ದೊರೆತಿದೆ. ಅಂಬೇಡ್ಕರ್ ಅವರು ಸಂವಿಧಾನ ಬದ್ಧವಾಗಿ ನೀಡಿರುವ ಸೌಲಭ್ಯಗಳಿಂದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರಿ ಅಧಿಕಾರಿಗಳು, ಅತ್ಯುತ್ತಮ ವ್ಯಕ್ತಿಗಳಾದ ಮೇಲೆ ಸಮಾಜದ ಹಿತದೃಷ್ಠಿಯಿಂದ ಕೆಲಸ ಮಾಡುವ ಮನಸ್ಸು ಬೆಳಸಿಕೊಳ್ಳಬೇಕು . ಅ ಮೂಲಕ ಅಂಬೇಡ್ಕರ್ ಅವರ ಋಣತೀರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ಕೆಟ್ಟ ಪರಿಸ್ಥಿತಿ ತೊಲಗಲಿ: ಜಿಲ್ಲೆಯಲ್ಲಿ ಇನ್ನೂ ಅಸ್ಪೃಶ್ಯತೆ ಆಚರಣೆಯಲ್ಲಿದೆ. ಅನೇಕ ದೇವಾಲಯಗಳಲ್ಲಿ ದಲಿತರಿಗೆ ಪ್ರವೇಶವಿಲ್ಲದಿರುವುದು ಕಾಣಿಸುತ್ತದೆ. ದೇವಾಲಯ ಪ್ರವೇಶ ಸಂದರ್ಭಗಳಲ್ಲಿ ದೌರ್ಜನ್ಯ ನಡೆದಿರುವ ನಿದರ್ಶನಗಳಿವೆ. ಇಂತಹ ಕೆಟ್ಟ ಪರಿಸ್ಥಿತಿ ತೊಲಗಬೇಕಿದೆ. ನಿಮಗೆ ಮಾರ್ಗದರ್ಶನ ನೀಡಲು ನಾವು ಸಿದ್ಧರಿದ್ದೇವೆ. ವಿದ್ಯಾರ್ಥಿಗಳು ನಮ್ಮ ಕಚೇರಿಗೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳು ಕುರಿತು ಮಾರ್ಗದರ್ಶನವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ಶಿಕ್ಷಣದ ಗುಣಮಟ್ಟ ಕುಸಿತ: ಮಾತಂಗ ಪರಿವಾರ ಕಾರ್ಯಾಧ್ಯಕ್ಷ ಅರಕಲವಾಡಿ ನಾಗೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ತಳವರ್ಗದ ಸಮುದಾಯಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಬದುಕು ಕಟ್ಟಿಕೊಳ್ಳುವುದು ದುಸ್ತರವಾಗಿದೆ. ವಿದ್ಯಾರ್ಥಿಗಳ ನಿರಂತರ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಮಾಡುವ ಉದ್ದೇಶದಿಂದ ಶೈಕ್ಷಣಿಕ, ಸಾಂಸ್ಕೃತಿಕ ಕುರಿತು ಅರಿವು ಮೂಡಿಸುವ ಸಲುವಾಗಿ ಮಾತಂಗ ಪರಿವಾರದ ವತಿಯಿಂದ 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮಾರಂಭದಲ್ಲಿ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಕೆ.ಸುರೇಶ್, ರಾಜ್ಯ ಲೆಕ್ಕಪತ್ರ ಇಲಾಖೆ ಜಂಟಿ ನಿರ್ದೇಶಕ ಡಾ.ಪಿ.ಎಲ್.ವೆಂಕಟೇಶ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಎಂ.ತಿರುಮಲೇಶ್, ಸಿಟಿಒ ಬಸವರಾಜು, ನಗರಸಭಾ ಸದಸ್ಯ ಮಹದೇವಯ್ಯ, ಮಾತಂಗ ಪರಿವಾರ ರಾಜ್ಯಾಧ್ಯಕ್ಷ ಜಿ.ಜಿ.ಬಸಪ್ಪ, ಉಪಾಧ್ಯಕ್ಷ ಡಾ.ಮುದ್ದಬಸವಯ್ಯ, ಖಜಾಂಚಿ ದೊಡ್ಡರಂಗಯ್ಯ ಇತರರು ಹಾಜರಿದ್ದರು.
ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ ಇಲ್ಲ. ಅವರಲ್ಲಿ ಮಾನವೀಯತೆ ಕಡಿಮೆಯಾಗುತ್ತಿದೆ. ಇಂತಹ ಸಮಯದಲ್ಲಿ ಏನು ಮಾಡುವುದು ಎಂಬ ಆತಂಕ ಸೃಷ್ಠಿಯಾಗಿದೆ. ಆದರಿಂದ ಪಿಯುಸಿ ವಿದ್ಯಾರ್ಥಿಗಳು ಪದವಿಯ ತನಕ ಎಲ್ಲೂ ದಾರಿ ತಪ್ಪದೇ ಎಚ್ಚರಿಕೆಯಿಂದ ಓದುವ ಪ್ರವೃತ್ತಿ ಬೆಳಸಿಕೊಳ್ಳಬೇಕು.
-ಮಲ್ಲಿಕಾರ್ಜುನ ಸ್ವಾಮಿ, ಮೈಸೂರು ರಂಗಯಣ ಜಂಟಿ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.