ಕೊರೊನಾ: ತರಕಾರಿ ಖರೀದಿಸುವವರೇ ಇಲ್ಲ


Team Udayavani, Mar 19, 2020, 3:00 AM IST

corona-tarakari

ಗುಂಡ್ಲುಪೇಟೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೇರಳದ ವ್ಯಾಪಾರಿಗಳು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆಗಮಿಸದ ಪರಿಣಾಮ, ತರಕಾರಿ ಖರೀದಿಸುವವರೇ ಇಲ್ಲದಂತಾಗಿದೆ. ಅಲ್ಲದೆ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ.

ಕಳೆದ ವಾರದವರೆಗೂ ಪಟ್ಟಣದ ಮಾರುಕಟ್ಟೆ ಹಾಗೂ ತೆರಕಣಾಂಬಿಯ ಹರಾಜು ಕಟ್ಟೆಗಳಿಂದ ನಿತ್ಯ ನೂರಾರು ಲಾರಿಗಳಲ್ಲಿ ಕೇರಳ ಮತ್ತು ತಮಿಳುನಾಡಿಗೆ ತರಕಾರಿ ಹೋಗುತ್ತಿತ್ತು. ಕೊರೊನಾ ಭೀತಿಯಿಂದ ಎರಡೂ ರಾಜ್ಯಗಳಿಂದ ಖರೀದಿದಾರರು ಆಗಮಿಸದ ಹಿನ್ನೆಲೆಯಲ್ಲಿ ತರಕಾರಿ ಬೆಳೆದಿರುವ ರೈತರು ಹಾಗೂ ರೈತರಿಂದ ಪಡೆದು ಮಾರಾಟ ಮಾಡುವ ದಲ್ಲಾಳಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಬೆರಳೆಣಿಕೆ ಸಂಖ್ಯೆಯಲ್ಲಿ ಖರೀದಿ: ಕಳೆದ ವಾರದವರೆಗೂ ಸಾಮಾನ್ಯವಾಗಿದ್ದ ಮಾರುಕಟ್ಟೆಗೆ ನಿತ್ಯ ನೂರಾರು ವ್ಯಾಪಾರಿಗಳು, ತಮ್ಮ ಟೆಂಪೋಗಳಲ್ಲಿ ಬಂದು ತರಕಾರಿ ಖರೀದಿಸುತ್ತಿದ್ದರು. ಆದರೆ, ಕೇರಳದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಯಾರೂ ಆಗಮಿಸುತ್ತಿಲ್ಲ. ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ಖರೀದಿದಾರರು ಬರುತ್ತಿದ್ದರೆ, ತಮಿಳುನಾಡಿನಲ್ಲಿ ತರಕಾರಿ ಬೆಳೆ ಚೆನ್ನಾಗಿ ಬಂದಿರುವುದರಿಂದ ಅಲ್ಲಿಂದಲೂ ವ್ಯಾಪಾರಿಗಳೂ ಬರುತ್ತಿಲ್ಲ. ಇದರಿಂದ ತರಕಾರಿಗಳ ಬೆಲೆ ಕುಸಿತಕ್ಕೆ ಕಾರಣವಾಗಿದೆ.

ಮಾರಾಟವಾಗುವುದು ಕಷ್ಟ: ಕಳೆದ ವಾರದವರೆಗೂ ಕಿಲೋಗೆ 18 ರೂ. ಇದ್ದ ಬೀನ್ಸ್‌, ಬದನೆ ಹಾಗೂ ಹೂ ಕೋಸು ಈಗ 2 ರೂ.ಗೆ ಇಳಿದಿದೆ. 35 ರೂ. ಇದ್ದ ಮೆಣಸಿಕಾಯಿ 5ಕ್ಕೆ, 15-20ಕ್ಕೆ ಮಾರಾಟವಾಗುತ್ತಿದ್ದ ಟೊಮೆಟೊ 6ಕ್ಕೆ ಮಾರಾಟವಾಗುವುದು ಕಷ್ಟವಾಗಿದೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.

ಉತ್ಪಾದನಾ ವೆಚ್ಚ ಹಾಗೂ ಕಾರ್ಮಿಕರ ಕೂಲಿಯೂ ದೊರಕದ ರೈತರು ತಮ್ಮ ತರಕಾರಿ ಬೆಳೆಯನ್ನು ಅಡ್ಡಾದಿಡ್ಡಿ ಬೆಲೆಗೆ ಮಾರಾಟ ಮಾಡುವಂತಾಗಿದ್ದರೆ, ಇನ್ನೂ ಕೆಲವರು ರಸ್ತೆ ಬದಿಗಳಲ್ಲಿ ಟೊಮೊಟೊ, ಕೋಸು ಮತ್ತಿತರೆ ತರಕಾರಿಯನ್ನು ಜಾನುವಾರುಗಳು ತಿನ್ನಲಿ ಎಂದು ಸುರಿದು ಹೋಗುತ್ತಿದ್ದಾರೆ.

ತರಕಾರಿಗೆ ಬೇಡಿಕೆ ಕಡಿಮೆ: ಕೇರಳದ ಕೋಳಿ ವ್ಯಾಪಾರಿಗಳು ಭಾರೀ ಪ್ರಮಾಣದಲ್ಲಿ ತರಕಾರಿ ಖರೀದಿಸಿ, 1 ಕಿಲೋ ಕೋಳಿ ಮಾಂಸದ ಜತೆಗೆ 2 ಕಿಲೋ ತರಕಾರಿ ಉಚಿತವಾಗಿ ಹಂಚುತ್ತಿದ್ದರು. ಕೊರೊನ ತಡೆಗೆ ಸರ್ಕಾರ ಕೋಳಿ ಮಾಂಸ ಮಾರಾಟದ ಮೇಲೆ ನಿರ್ಬಂಧ ವಿಧಿಸಿದ್ದರಿಂದ ಕೇರಳದಲ್ಲಿಯೂ ವ್ಯಾಪಾರ ನಿಂತಿದೆ. ಇದರಿಂದ ತರಕಾರಿಗೆ ಬೇಡಿಕೆ ಕಡಿಮೆಯಾಗಿದೆ ಎಂದು ಸುಲ್ತಾನ್‌ ಭತ್ತೇರಿಯ ವ್ಯಾಪಾರಿಗಳು ತಿಳಿಸಿದ್ದಾರೆ.

ಕೇರಳ, ತ.ನಾಡಿನಿಂದ ಖರೀದಿಸುವವರಿಲ್ಲದೆ ಎಲ್ಲಾ ತರಕಾರಿ ಬೆಲೆ ಕುಸಿತವಾಗುತ್ತಿದೆ. ಮುಂದಿನ ದಿನಗಳಲ್ಲಿ ಚೇತರಿಕೆ ಕಾಣಲಿದೆ. ಇದನ್ನು ಕಾದು ನೋಡಬೇಕಾಗಿದೆ.
-ನಾಗೇಂದ್ರ, ಎಪಿಎಂಸಿ ಕಾರ್ಯದರ್ಶಿ

* ಸೋಮಶೇಖರ್‌

ಟಾಪ್ ನ್ಯೂಸ್

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.