ಚಾಮರಾಜನಗರ: 68 ಮಂದಿ ಗುಣಮುಖ: 55 ಹೊಸ ಪ್ರಕರಣಗಳು; ಇಬ್ಬರು ಸಾವು
Team Udayavani, Aug 14, 2020, 6:13 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ನಿಂದ ಇಬ್ಬರು ಮೃತಪಟ್ಟಿದ್ದು, 55 ಹೊಸ ಪ್ರಕರಣಗಳು ಪತ್ತೆಯಾಗಿವೆ. 68 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 1487ಕ್ಕೇರಿದೆ. ಇದರಲ್ಲಿ 1047 ಮಂದಿ ಗುಣಮುಖರಾಗಿದ್ದು, 410 ಸಕ್ರಿಯ ಪ್ರಕರಣಗಳಿವೆ. 20 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ 55 ವರ್ಷದ ವ್ಯಕ್ತಿ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದು, ಆ. 12ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಆ. 13ರಂದು ಮೃತಪಟ್ಟಿದ್ದಾರೆ.
ನಗರದ 65 ವರ್ಷದ ವೃದ್ಧರು ಜು.31ರಂದು ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ. 13ರಂದು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿಗೊಳಗಾಗಿ 30 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ 20 ಮಂದಿ ಹೋಂ ಐಸೋಲೇಷನ್‌ಗೊಳಪಟ್ಟಿದ್ದಾರೆ. ಒಟ್ಟು 134 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಶುಕ್ರವಾರ ಜಿಲ್ಲೆಯಲ್ಲಿ 810 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 778 ಮಾದರಿಗಳು ನೆಗೆಟಿವ್ ಫಲಿತಾಂಶ ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.