ಚಿಕಿತ್ಸೆ ಫಲಸದೆ ಮಹಿಳೆ ಸಾವು ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ಧಾಂದಲೆ
Team Udayavani, May 13, 2021, 5:24 PM IST
ಗುಂಡ್ಲುಪೇಟೆ ( ಚಾ.ನಗರ ಜಿಲ್ಲೆ): ಕೋವಿಡ್ ಸೋಂಕಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ(ಮೇ. 13) ನಡೆದಿದೆ.
ಪಟ್ಟಣದ ನಿವಾಸಿ 52 ವರ್ಷದ ಮಹಿಳೆಯೊಬ್ಬರು ಕೋವಿಡ್ ನಿಂದ ಬುಧವಾರ ತಡ ರಾತ್ರಿ ಮೃತರಾದರು. ಈ ಹಿನ್ನೆಲೆ ಸಂಬಂಧಿಕರು ಸರಿಯಾದ ಚಿಕಿತ್ಸೆ ನೀಡಿಲ್ಲ, ಆಕ್ಸಿಜನ್ ವ್ಯವಸ್ಥೆ ಮಾಡಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಗಿರೀಶ್ ಎಂಬಾತ ಆಕ್ಸಿಜನ್ ಸಿಲಿಂಡರ್ ನಿಂದ ಹಲ್ಲೆಗೆ ಯತ್ನಿಸಿ ಆಸ್ಪತ್ರೆಯ ಕಿಟಕಿಯ ಗಾಜನ್ನು ಒಡೆದು ಹಾಕಿ ಗಲಾಟೆ ಮಾಡಿದ್ದು, ಕಿಟಕಿಗೆ ಹೊಡೆದ ರಭಸಕ್ಕೆ ಗಿರೀಶ್ ಗೆ ಕೈಗೆ ಗಾಜು ಚುಚ್ಚಿ ತೀವ್ರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರಕ್ಕೆ ಕರೆದೋಯ್ಯಲಾಗಿದೆ ಎಂದು ತಿಳಿದು ಬಂದಿದೆ.
(ಆಸ್ಪತ್ರೆಯ ಗಾಜು ಒಡೆದಿರುವುದು)
ಕರ್ತವ್ಯದಿಂದ ಹೊರ ನಡೆದ ಆಸ್ಪತ್ರೆ ಸಿಬ್ಬಂದಿ:
ಘಟನೆಯಿಂದ ವೈದ್ಯರು ಆಸ್ಪತ್ರೆಯ ಸಿಬ್ಬಂದಿ ಆತಂಕಗೊಂಡು ಕರ್ತವ್ಯ ನಿರ್ವಹಿಸುವುದಿಲ್ಲ. ನಾವು ಅವರನ್ನು ಆದಷ್ಟು ಉಳಿಸಿಕೊಳ್ಳುವ ಯತ್ನ ಮಾಡಿದ್ದೇವೆ. ಆದರೆ ಇದನ್ನು ತಿಳಿಯದೆ ನಮ್ಮ ಮೇಲೆ ಹಲ್ಲೆ ಮಾಡಲು ಮುಂದಾದರೆ ಹೇಗೆ ನಮಗೆ ರಕ್ಷಣೆ ಇಲ್ಲದ ಮೇಲೆ ಏಕೆ ಕರ್ತವ್ಯ ನಿರ್ವಹಿಸಬೇಕು ಎಂದು ಆಸ್ಪತ್ರೆಯಿಂದ ಹೊರ ನಡೆದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರವಿಶಂಕರ್, ಪೊಲೀಸ್ ಇನ್ಸ್‍ಪೆಕ್ಟರ್ ಮಹದೇವಸ್ವಾಮಿ, ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಆಸ್ಪತ್ರೆಯ ಸಿಬ್ಬಂದಿಗಳನ್ನು ಸಮಾಧಾನಪಡಿಸಿದರು. ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ ಹಿನ್ನೆಲೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಘಟನೆ ನಂತರ ಮಹಿಳೆ ಮೃತ ದೇಹವನ್ನು ಅವರ ಜಮೀನಿಗೆ ರವಾನಿಸಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ರವಿಶಂಕರ್, ಆಸ್ಪತ್ರೆಯ ಸಿಬ್ಬಂದಿ ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಜನರ ಪ್ರಾಣ ಉಳಿಸಲು ಹೋರಾಡುತ್ತಿದ್ದಾರೆ. ಒತ್ತಡದ ನಡುವೆ ಕಾರ್ಯ ನಿರ್ವಹಿಸುವ ಅವರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು. ಹಾಗೆಯೇ ಕುಟುಂಬಸ್ಥರನ್ನು ಕಳೆದುಕೊಂಡವರಿಗೆ ಅತಿಯಾದ ನೋವಿರುತ್ತದೆ. ಆ ಸಂದರ್ಭದಲ್ಲಿ ಯಾರೂ ಉದ್ರಿಕ್ತರಾಗಿ ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಬಾರದು ಎಂದು ತಿಳಿ ಹೇಳಿದರು.
ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಮುಂದಾಗಿ ಕಿಟಕಿ ಗಾಜುಗಳನ್ನು ಹೊಡೆದು ಹಾಕಿದ ವ್ಯಕ್ತಿ ಕೈಗೆ ತೀವ್ರತರವಾದ ಗಾಯವಾಗಿದ್ದು, ಸದ್ಯ ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳು ದೂರು ನೀಡಿಲ್ಲ. ದೂರು ನೀಡಿದರೆ ದಾಖಲಿಸಿ ಕ್ರಮ ವಹಿಸಲಾಗುವುದು.
– ಜೆ.ರಾಜೇಂದ್ರ, ಸಬ್ ಇನ್ಸ್ಪೆಕ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.