ಅಂಗಡಿಗಳಲ್ಲಿ ಜನಸಂದಣಿಯಾಗದಂತೆ ನಿಗಾವಹಿಸಿ
Team Udayavani, May 21, 2021, 8:55 PM IST
ಚಾಮರಾಜನಗರ: ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಳಗಿನ ವೇಳೆ ದಿನಸಿ, ಹಣ್ಣು,ತರಕಾರಿ, ಖರೀದಿಗಾಗಿ ಅಂಗಡಿಗಳ ಮುಂದೆ ಜನ ಜಂಗುಳಿಯಾಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಅಧಿಕಾರಿಗಳ ಸಭೆ ನಡೆಸಿಮಾತನಾಡಿದ ಅವರು, ಸೋಂಕು ತಡೆಗಾಗಿ ಕೋವಿಡ್ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ರದಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.
ಸೋಮವಾರದಿಂದ ಬುಧವಾರದವರೆಗೆ ಬೆಳಗಿನ ಸಮಯದಲ್ಲಿಮಾತ್ರ ದಿನಸಿ ಇತರೆ ಅಂಗಡಿ ತೆರೆಯಲುಅನುಮತಿ ನೀಡಲಾಗಿದೆ. ಈ ಅವಧಿಯಲ್ಲಿ ಹೆಚ್ಚು ಜನಸಂದಣಿಯಾಗುತ್ತಿದ್ದು, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಅವಶ್ಯಕಕ್ರಮಗಳಿಗೆ ಮುಂದಾಗಬೇಕೆಂದು ತಿಳಿಸಿದರು.
ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಸೋಂಕು ಹರಡಲು ಕಾರಣವಾಗಲಿದೆ. ದಿನಸಿ ಅಂಗಡಿಗಳೇ ಇರಲಿ ತರಕಾರಿ, ಹಣ್ಣು ಮಾರಾಟಸ್ಥಳಗಳೇ ಇರಲಿ ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಹಕರಿಗೆಈ ಬಗ್ಗೆ ಜಾಗೃತಿ ಮೂಡಿಸಬೇಕು. ವರ್ತಕರು, ವ್ಯಾಪಾರಿಗಳಿಗೂ ಅಂತರದ ಮಹತ್ವದ ಬಗ್ಗೆ ತಿಳಿಸಿಕೊಡಬೇಕೆಂಕು ಎಂದು ಹೇಳಿದರು.
ಕೋವಿಡ್ ಕಾರಣದಿಂದ ತಾತ್ಕಾಲಿಕವಾಗಿ ಹೆಚ್ಚು ಜನರು ಸೇರುವಂತಹ ಸ್ಥಳವಾದಮಾರುಕಟ್ಟೆ ಅಂಗಡಿಗಳನ್ನು ವಿಶಾಲವಾದ ಸ್ಥಳಕ್ಕೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಜಾಗಗುರುತಿಸಿ ವರದಿ ನೀಡುವಂತೆ ನಗರಸಭೆಆಯುಕ್ತರಿಗೆ ಸೂಚನೆ ನೀಡಿದರು.ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಗ್ರಾಮಾಂತರ ಭಾಗಗಳಲ್ಲಿ ರ್ಯಾಟ್ ಮೂಲಕ ಸ್ಥಳದಲ್ಲಿಯೇ ಕೋವಿಡ್ ಪರೀಕ್ಷೆ ನಡೆಸಿ,ಸೋಂಕು ಹರಡದಂತೆ ನೋಡಿಕೊಳ್ಳಬೇಕು.ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳಕಾರ್ಯ ನಿರ್ವಹಣೆ, ಲಸಿಕಾಕರಣ ಮುಂದಿನ ಹಂತಗಳಲ್ಲಿ ಸಿದ್ಧಪಡಿಸಬೇಕಿರುವ ಕೋವಿಡ್‌ಕೇರ್ ಕೇಂದ್ರಗಳು ಹಾಗೂ ಇತರೆಮುಂಜಾಗ್ರತಾ ಕ್ರಮಗಳ ಕುರಿತು ಸಭೆಯಲ್ಲಿಚರ್ಚಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ,ಡಿವೈಎಸ್‌ಪಿ ಅನ್ಸರ್ ಅಲಿ, ಜಿಲ್ಲಾ ಸರ್ವಲೆನ್ಸ್‌ಅಧಿಕಾರಿ ಡಾ. ನಾಗರಾಜು, ಆರ್‌ಸಿಎಚ್‌ಅಧಿಕಾರಿ ಡಾ. ವಿಶ್ವೇಶ್ವರಯ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.