ಅತ್ಯಾಚಾರ ಎಸಗಿ ಮಗಳು ಗರ್ಭಿಣಿ: ಕಾಮುಕ ತಂದೆಗೆ ಜೀವಿತಾವಧಿ ಕಠಿಣ ಶಿಕ್ಷೆ
Team Udayavani, Jul 24, 2023, 8:31 PM IST
ಚಾಮರಾಜನಗರ: ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಜೀವಿತಾವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಜಿಲ್ಲೆಯ ಗ್ರಾಮವೊಂದರ 48 ವರ್ಷದ ವ್ಯಕ್ತಿ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ 2022ರ ಡಿ. 5ರಂದು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿತ್ತು. ನಗರದ ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ನಿಶಾರಾಣಿ ಅವರು ಅಪರಾಧಿಗೆ ಆತ ಜೀವಂತ ಇರುವವರೆಗೂ ಕಠಿಣ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ್ದಾರೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 6 ಲಕ್ಷ ರೂ.ಗಳ ಹಣವನ್ನು 30 ದಿನಗಳ ಒಳಗೆ ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಬೇಕೆಂದು ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು. ತಂದೆಯೇ ಅಪರಾಧಿಯಾಗಿರುವುದರಿಂದ ನೊಂದ ಬಾಲಕಿಯ ಗೌಪ್ಯತೆಯನ್ನು ಕಾಪಾಡುವ ಸಲುವಾಗಿ ಪ್ರಕರಣದ ಸಂಖ್ಯೆ, ದಿನಾಂಕ, ಪೊಲೀಸ್ ಠಾಣೆಯ ಹೆಸರು ಹಾಗೂ ಇತರ ಮಾಹಿತಿಯನ್ನು ತಿಳಿಸಲಾಗಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.