ವಿವಿಧ ಚೆಕ್‌ಪೋಸ್ಟ್ ತಪಾಸಣೆ ಪರಿಶೀಲಿಸಿದ ಡೀಸಿ
Team Udayavani, Aug 8, 2021, 4:45 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಜಾರಿಗೊಳಿಸಿರುವ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ವಿವಿಧ ಭಾಗಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.
ರವಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಗಡಿ ಭಾಗದ ಅರ್ಧನಾರೀಪುರ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿನ ತಪಾಸಣೆ ಕಾರ್ಯ ವೀಕ್ಷಿಸಿದರು.
ನಗರದ ಭುವನೇಶ್ವರಿ ವೃತ್ತ ಪಟ್ಟಣದ ಇತರೆ ರಸ್ತೆ ಮಾರ್ಗಗಳಲ್ಲಿ ಕರ್ಫ್ಯೂ ಪಾಲನೆ ಮಾಡಲಾಗುತ್ತಿರುವ ಬಗ್ಗೆ ವೀಕ್ಷಿಸಿದರು. ಯಳಂದೂರು ಪಟ್ಟಣದ ಬಸ್ ನಿಲ್ದಾಣ, ಇತರೆ ಪ್ರಮುಖವೃತ್ತಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಸ್ ನಿಲ್ದಾಣದಲ್ಲಿ ಬಸ್ ಚಾಲಕರು, ನಿರ್ವಾಹಕರೊಂದಿಗೆ ಮಾತನಾಡಿ, ಯಾವ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸುತ್ತಿವೆ? ಎಷ್ಟು ಬಸ್‌ಗಳು ಕಾರ್ಯಾಚರಣೆಯಲ್ಲಿವೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು. ಕೊಳ್ಳೇಗಾಲ ಪಟ್ಟಣದಲ್ಲಿಯೂ ಕರ್ಫ್ಯೂ ಪಾಲನೆ ಬಗ್ಗೆ ಪರಿಶೀಲಿಸಿದರು.
ಕರ್ಫ್ಯೂ ಅವಧಿಯಲ್ಲಿ ಅನುಸರಿಸಬೇಕಿರುವ ಕ್ರಮಗಳನ್ನುಉಲ್ಲಂಘಿಸದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಹನೂರು ಭಾಗದ ಗಡಿಯಲ್ಲಿರುವ ಅರ್ಧನಾರೀಪುರ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಎಷ್ಟು ವಾಹನಗಳು ಚೆಕ್ ಪೋಸ್ಟ್ ಮೂಲಕ ಸಂಚರಿಸುತ್ತಿವೆ? ಯಾವ ಯಾವ ಬಗೆಯ ವಾಹನಗಳು ಹಾದು ಹೋಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ದಾಖಲು ಮಾಡಿಕೊಳ್ಳ ಬೇಕು ಎಂದರು.
ಈ ವೇಳೆ ಎಸಿ ಡಾ. ಗಿರೀಶ್ ದಿಲೀಪ್‌ಬಡೋಲೆ,ಜಿಲ್ಲಾಆರೋಗ್ಯಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ, ಕೆ. ಇಬ್ರಾಹಿಂ, ತಹಶೀಲ್ದಾರರಾದ ಕೆ. ಕುನಾಲ್, ನಾಗರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
2 ಡೋಸ್‌ಲಸಿಕೆ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ ತಮಿಳುನಾಡಿನಿಂದ ಚಾ.ನಗರ ಜಿಲ್ಲೆಗೆ ಪ್ರವೇಶಿಸುವರು 2 ಡೋಸ್ ಕೋವಿಡ್ ಲಸಿಕೆ
ಪಡೆದಿದ್ದರೂ ಸಹ 72 ಗಂಟೆಯ ಒಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಇರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಈ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು. ನೆಗೆಟಿವ್ ವರದಿ ಪ್ರಮಾಣಪತ್ರ ನೀಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ವಾಪಸ್ಸುಕಳುಹಿಸಬೇಕೆಂದು ಜಿಲ್ಲಾಧಿಕಾರಿ ರವಿ ತಾಕೀತು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.