ಮಕ್ಕಳ ಅಂತ್ಯ ಸಂಸ್ಕಾರದಲ್ಲಿ ಡೀಸಿ, ಶಾಸಕ ಭಾಗಿ


Team Udayavani, Oct 15, 2019, 3:00 AM IST

makkalla

ಹನೂರು: ಧಾರಾಕಾರ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಮೂವರು ಮಕ್ಕಳು ಮೃತಪಟ್ಟಿದ್ದ ರಾಮೇಗೌಡನದೊಡ್ಡಿ ಗ್ರಾಮಕ್ಕೆ ಶಾಸಕ ನರೇಂದ್ರ, ಜಿಲ್ಲಾಧಿಕಾರಿ ಕಾವೇರಿ ಮತ್ತು ವಿವಿಧ ಇಲಾಖಾ ಅಧಿಕಾರಿಗಳು ತೆರಳಿ ಘಟನೆ ಸಂಬಂಧ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಾಲೂಕಿನ ರಾಮೇಗೌಡನದೊಡ್ಡಿಯಲ್ಲಿ ಜಮೀನಿಗೆ ತೆರಳುತ್ತಿದ್ದ ಅನುಪಮ(5), ನಿಖಿತಾ(6) ಮತ್ತು ಪ್ರಣಿತ (5) ಮೂವರು ಮಕ್ಕಳು ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಭಾನುವಾರ ಮೃತಪಟ್ಟಿದ್ದರು.

ಶಾಸಕ, ಜಿಲ್ಲಾಧಿಕಾರಿ ಭೇಟಿ: ಘಟನೆ ಹಿನ್ನೆಲೆ ಶಾಸಕ ನರೇಂದ್ರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಣಪ್ಪ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್‌, ತಹಶೀಲ್ದಾರ್‌ ನಾಗರಾಜು ಭೇಟಿ ನೀಡಿ ಘಟನೆ ಬಗ್ಗೆ ಮೃತ ಮಕ್ಕಳ ಪೋಷಕರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆದರು. ಇದೇ ವೇಳೆ ಶಾಸಕ ನರೇಂದ್ರ ವೈಯಕ್ತಿಕ ಸಹಾಯ ಧನ ನೀಡಿ ಈ ಹಣವನ್ನು ಇಂದಿನ ಅಂತ್ಯಸಂಸ್ಕಾರ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಿ, ಪ್ರಕೃತಿ ವಿಕೋಪ ನಿಧಿಯಡಿ ತಲಾ 5 ಲಕ್ಷರೂ.ಗಳ ಪರಿಹಾರ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಸೇತುವೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ: ಪರಿಹಾರ ಹಣಕ್ಕಾಗಿ ಅಗತ್ಯವಾದ ದಾಖಲಾತಿಗಳನ್ನು ಕೂಡಲೇ ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಮುಂದಿನ ಒಂದು ವಾರದೊಳಗಾಗಿ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೆ ಘಟನೆ ನಡೆದ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಿದಲ್ಲಿ ಸೇತುವೆ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ತಿಳಿಸಿದರು.

ಸ್ಮಶಾನ, ಬಸ್‌ಗಾಗಿ ಜಿಲ್ಲಾಧಿಕಾರಿಗೆ ಮನವಿ: ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ ಗ್ರಾಮಸ್ಥರು ಗ್ರಾಮಕ್ಕೆ ಬೆಳಗ್ಗೆ 9 ಗಂಟೆಗೆ ಬಸ್‌ ನಿಯೋಜನೆ ಮಾಡಿಕೊಡಬೇಕು. ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ನೀಡಬೇಕು ಮತ್ತು ಪೊನ್ನಾಚಿ ಆರೋಗ್ಯ ಕೇಂದ್ರಕ್ಕೆ ಶುಶ್ರೂಷಕಿಯರನ್ನು ನೇಮಕ ಮಾಡಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸರ್ಕಾರಿ ಜಾಗವನ್ನು ಗುರುತಿಸಿ ಸ್ಮಶಾನ ನೀಡಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಮತ್ತು ಗ್ರಾಮಕ್ಕೆ ಅವಶ್ಯಕವಾದ ಬಸ್‌ ಸೇವೆ ಮತ್ತು ಆರೋಗ್ಯ ಕೇಂದ್ರಕ್ಕೆ ಶುಶ್ರೂಷಕಿಯರನ್ನು ನಿಯೋಜಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಭರವಸೆ ನೀಡಿದರು.

ಮುಗಿಲು ಮುಟ್ಟಿದ ಆಕ್ರಂದನ: ಕಾಡಂಚಿನ ಕುಗ್ರಾಮದಲ್ಲಿ ಒಂದೇ ದಿನ 3 ಮಕ್ಕಳು ನೀರು ಪಾಲಾದ ಘಟನೆಯಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಮ.ಬೆಟ್ಟ ವೈದ್ಯಾಧಿಕಾರಿ ರಾಜೇಶ್‌ ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಿದರು. ಮಧ್ಯಾಹ್ನ 1 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಿತು. ಅಂತ್ಯಸಂಸ್ಕರಾದ ವೇಳೆ ಮೃತ ಮಕ್ಕಳ ಪೋಷಕರು, ಕುಟುಂಬಸ್ಥರು, ಸಂಬಂಧಿಕರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಟಾಪ್ ನ್ಯೂಸ್

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ

Karkala: ಗ್ರಾಹಕನ ಸೋಗಿನಲ್ಲಿ ಜ್ಯುವೆಲರಿ ಶಾಪ್‌ಗೆ ಬಂದು ಒಡವೆ ಕದ್ದು ಪರಾರಿಯಾದ ಕಳ್ಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.