ಸಾರ್ವಜನಿಕರ ಸಮಸ್ಯೆಗೆ ಡೀಸಿ ಸ್ಪಂದನೆ


Team Udayavani, Jul 21, 2019, 3:00 AM IST

sarvajanikara

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುತ್ತಿರುವ ದೇವಾಲಯ ಜೀರ್ಣೋದ್ಧಾರ ಕಾಮಗಾರಿ ಜಿಲ್ಲಾಧಿಕಾರಿಯವರ ತಪಾಸಣೆ ನಂತರ ಉತ್ತಮವಾಗಿ ನಡೆಯುತ್ತಿದ್ದು, ಡೀಸಿಯವರು ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಾರ್ವಜನಿಕ ಕುಂದುಕೊರತೆ ಕಾರ್ಯಕ್ರಮದಲ್ಲಿ ನಾಗರಿಕರು ಒತ್ತಾಯಿಸಿದರು.

ಜನರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ಕುಂದು ಕೊರತೆ ಆಲಿಕೆಯ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಒಟ್ಟು 29 ದೂರುಗಳು ದಾಖಲಾದವು.

ಕಾಮಗಾರಿ ವೀಕ್ಷಿಸಿ: ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಬಂಧ ಕರೆ ಮಾಡಿದ ಓರ್ವರು ಜಿಲ್ಲಾಧಿಕಾರಿಯವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ ಪರಿಣಾಮ ಈಗ ಉತ್ತಮ ಕೆಲಸವಾಗುತ್ತಿದೆ. ಪ್ರತಿ ತಿಂಗಳು ಇದೇ ರೀತಿಯಾಗಿ ಭೇಟಿ ನೀಡಿ ಕಾಮಗಾರಿ ವೀಕ್ಷಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ನಿರ್ವಹಣೆ ಸಂಬಂಧ ಗಮನ ಹರಿಸಲಾಗುತ್ತದೆ. ಕಳಪೆ ಕಾಮಗಾರಿ ನಿರ್ವಹಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಸೆಸ್ಕ್ ಮಾಹಿತಿ ನೀಡುತ್ತಿಲ್ಲ: ಕೊಳ್ಳೇಗಾಲದಿಂದ ಕರೆ ಮಾಡಿದ ಸ್ಥಳೀಯ ನಾಗರಿಕರೊಬ್ಬರು ಕೊಳ್ಳೇಗಾಲ ಪಟ್ಟಣದ ಸೆಸ್ಕ್ ಕಚೇರಿಯಲ್ಲಿ ನಡೆಸಲಾಗುವ ಜನಸಂಪರ್ಕ ಸಭೆ ಬಗ್ಗೆ ಮಾಹಿತಿ ನೀಡಲಾಗುತ್ತಿಲ್ಲ. ಅಧಿಕ ಭದ್ರತಾ ಠೇವಣಿ ಬಗ್ಗೆ ಸರಿಯಾದ ಮನವರಿಕೆ ಮಾಡಿಕೊಡಲಾಗುತ್ತಿಲ್ಲ.

ಜನಸಂಪರ್ಕ ಸಭೆಯಲ್ಲಿ ಬಂದ ಸಮಸ್ಯೆ ದೂರುಗಳನ್ನು ಹೇಗೆ ಬಗೆಹರಿಸಲಾಗಿದೆ ಎಂಬ ಬಗ್ಗೆ ವಿವರ ಲಭ್ಯವಾಗುತ್ತಿಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸರಿಯಾದ ವಿಧಾನವನ್ನು ಪಾಲಿಸಲು ಸೂಚನೆ ನೀಡಲಾಗುವುದು ಎಂದರು.

ಸೌಲಭ್ಯ ಕಲ್ಪಿಸಿ: ಚಾಮರಾಜನಗರದಿಂದ ಕರೆ ಮಾಡಿದ ಸ್ಥಳಿಯರೊಬ್ಬರು 10 ನೇ ವಾರ್ಡ್‌ ಕರಿನಂಜನಪುರದಲ್ಲಿ ಮೂಲ ಸೌಕರ್ಯಗಳಿಲ್ಲದೆ ಪರಿತಪಿಸುವಂತಾಗಿದೆ. ರಸ್ತೆ, ಕುಡಿಯುವ ನೀರು ಸೌಲಭ್ಯಕ್ಕೆ ಈ ಹಿಂದೆಯೂ ಮನವಿ ಮಾಡಲಾಗಿದೆ ಎಂಬುದನ್ನು ಗಮನಕ್ಕೆ ತಂದರು. ಕೂಡಲೇ ಸಭೆಯಲ್ಲಿದ್ದ ಪೌರಾಯುಕ್ತರಿಗೆ ತಕ್ಷಣವೇ ಈ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಂತೆಮರಹಳ್ಳಿಯಿಂದ ಕರೆ ಮಾಡಿದ ಸ್ಥಳೀಯರೊಬ್ಬರು ಗ್ರಾಮ ಠಾಣೆ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳು ಸರಿಯಾಗಿ ಲಭ್ಯವಾಗುತ್ತಿಲ್ಲ. ಇದರಿಂದ ತೊಂದರೆ ಅನುಭವಿಸುವಂತಾಗಿದೆ ಎಂಬುದನ್ನು ಗಮನಕ್ಕೆ ತಂದರು. ಜಿಲ್ಲಾಧಿಕಾರಿಯವರು ಉತ್ತರಿಸಿ ಈ ಬಗ್ಗೆ ಪರಿಶೀಲಿಸಲು ತಿಳಿಸಲಾಗುವುದು ಎಂದರು.

ಅಪರಿಪೂರ್ಣ ಮಾಹಿತಿ: ನಗರದಿಂದ ಕರೆ ಮಾಡಿದ ಮತ್ತೋರ್ವರು ಖಾಸಗಿಯಾಗಿ ಮನೆ ಪಾಠ ಮಾಡುವವರ ಸಂಬಂಧ ತಾವು ಕೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ‌ು ನೀಡಿರುವ ಮಾಹಿತಿ ಪರಿಪೂರ್ಣವಾಗಿಲ್ಲ. ಈ ಬಗ್ಗೆ ಸರಿಯಾದ ಮಾಹಿತಿ ನೀಡಲು ಸೂಚಿಸಬೇಕಿದೆ ಎಂದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಈ ಬಗ್ಗೆ ಗಮನಕ್ಕೆ ತರುವುದಾಗಿ ತಿಳಿಸಿದರು.

ಪಿಜಿ ಪಾಳ್ಯ ಗ್ರಾಮದಿಂದ ಸ್ಥಳೀಯರೊಬ್ಬರು ಕರೆಮಾಡಿ ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಆಹಾರ ವಿತರಣೆ ಮಾಡುತ್ತಿಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡುತ್ತೇನೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ಉಪವಿಭಾಗಾಧಿಕಾರಿ ನಿಖೀತಾ ಚಿನ್ನಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ದೂರುಗಳ ಸರಮಾಲೆ: ಗ್ರಾಪಂ ಕಾರ್ಯನಿರ್ವಹಣೆ, ಕುಡಿಯುವ ನೀರು, ಕರಿಕಲ್ಲುಗಳ ಲಾರಿ ಸಂಚಾರದಿಂದ ಆಗುತ್ತಿರುವ ತೊಂದರೆ, ನಗರ ಸಂಚಾರ ಸುಧಾರಣೆ, ಒತ್ತುವರಿ ತೆರವು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಸ್ಯೆಗಳು ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಕೇಳಿಬಂದವು. ಒಂದು ತಾಸಿನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಸಮಸ್ಯೆಗಳ ಕುರಿತು ದೂರುಗಳು ಬಂದವು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.