ಸಮಾನತೆಗೆ ಶ್ರಮಿಸಿದ ಉಪಾಧ್ಯಾಯರು
Team Udayavani, Sep 26, 2021, 1:34 PM IST
ಚಾಮರಾಜನಗರ: ದೇಶದಲ್ಲಿದ್ದ ಬಡವರು, ಶೋಷಿತರು ಹಾಗೂ ನಿರ್ಗತಿಕರನ್ನು ಮುಂಚೂಣಿಗೆ ತಂದು ಸಾಮಾಜಿಕ ಸಮಾನತೆಗೆ ಶ್ರಮಿಸಿದವರಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಪ್ರಮುಖರಾಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ್ ತಿಳಿಸಿದರು.
ತಾಲೂಕಿನ ಮರಿಯಾಲದ ಮುರುಘ ರಾಜೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮರಿಯಾಲದ ಮುರುಘ ರಾಜೇಂದ್ರ ಪದವಿ ಪೂರ್ವ ಕಾಲೇಜು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಹಾಗೂ ಪಂಡಿತ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಫಿಟ್ ಇಂಡಿಯಾ ಫ್ರೀಡಂ ರನ್‌ಗೆ ಚಾಲನೆ ನೀಡಿ ಮಾತನಾಡಿದರು.
ಯಾವುದೇ ವ್ಯವಸ್ಥೆ ಸೂಸೂತ್ರವಾಗಿ ನಡೆಯಲು ಕಾನೂನಿನ ಅಗತ್ಯವಿದೆ. ಹಿಂದೆ ಬಸವಣ್ಣನವರ ವಚನಗಳು ಅಲಿಖೀತ ಕಾನೂನಾಗಿದ್ದವು, ನಂತರ ಅಂಬೇಡ್ಕರ್ ಅವರು ಬರವಣಿಗೆ ಮೂಲಕ ಕಾನೂನಿಗೆ ಒಂದು ರೂಪ ನೀಡಿದರು ಎಂದರು.
ಉಪನ್ಯಾಸಕ ಎನ್. ಸುರೇಶ್ ಋಗ್ವೇದಿ ಮಾತನಾಡಿ, ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿ ಸಿದ ದೀನ್ ದಯಾಳ್ ಉಪಾಧ್ಯಾಯ ಶ್ರೇಷ್ಠ ಚಿಂತಕರು, ಸಾಮಾಜಿಕ, ಅರ್ಥಿಕ, ರಾಜಕೀಯ ಚಿಂತನೆ ಗಳು ಇಂದಿಗೂ ಪ್ರಸ್ತುತವಾಗಿದೆ. ಅವರು ಭಾರತೀಯ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ ಎಂದರು.
ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಾಚಾರ್ಯ ಮಹದೇವಸ್ವಾಮಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾಧಿಕಾರಿ ರಾಜೇಶ್ ಕಾರಂತ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.