ಕೊಳ್ಳೇಗಾಲ – ಹಸನೂರು ಘಾಟ್: ಅಪರಿಚಿತ ವಾಹನ ಢಿಕ್ಕಿ ಹೊಡೆದು ಜಿಂಕೆ ಸಾವು
Team Udayavani, Sep 4, 2020, 4:48 PM IST
ಹನೂರು (ಚಾಮರಾಜನಗರ): ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ – ಹಸನೂರು ಘಾಟ್ ಅಂತಾರಾಜ್ಯ ಹೆದ್ದಾರಿಯಲ್ಲಿ ಜರುಗಿದೆ.
ಕೊಳ್ಳೇಗಾಲ – ಹಸನೂರು ಘಾಟ್ ಅಂತಾರಾಜ್ಯ ಹೆದ್ದಾರಿಯ ಎಡೆಯಾರಹಳ್ಳಿ ಆನೆ ಕಾರಿಡಾರ್ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಪರಿಚಿತ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಜಿಂಕೆಯು ಸ್ಥಳದಲ್ಲಿಯೇ ರಕ್ತ ಕಾರಿ ಪ್ರಾಣ ಬಿಟ್ಟಿದೆ. ಇದನ್ನು ಗಮನಿಸಿದ ಕೂಡಲೇ ಸಾರ್ವಜನಿಕರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬಿಆರ್ ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ಬೈಲೂರು ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆಲ್ಮೆಟ್ ತಲೆಗಷ್ಟೇ ಅಲ್ಲ.. ಕ್ರಿಕೆಟ್ ಹೆಲ್ಮೆಟ್ ಹಿಂದೆ ಹಲವು ರೋಚಕ ಸಂಗತಿ
ಪರಿಸರ ಪ್ರೇಮಿ ಕೃಷ್ಣ ಆಕ್ರೋಶ: ಕೊಳ್ಳೇಗಾಲ – ಹಸನೂರು ಘಾಟ್ ರಸ್ತೆಯಬೋರೆದೊಡ್ಡಿ ಸಮೀಪದ 1.5ಕಿ.ಮೀ ರಸ್ತೆಯನ್ನು ಆನೆ ಕಾರಿಡಾರ್ ಎಂದು ಗುರುತಿಸಲಾಗಿದೆ. ಈ ಸ್ಥಳದಲ್ಲಿ ಆನೆ, ಹುಲಿ, ಚಿರತೆ, ಹುಲಿ ಸೇರಿದಂತೆ ವಿವಿಧ ಪ್ರಾಣಿಗಳು ರಸ್ತೆ ದಾಟುತ್ತಿರುತ್ತವೆ. ಈ ರಸ್ತೆಯಲ್ಲಿ ನಿಧಾನವಾಗಿ ಚಲಿಸುವಂತೆ ನಾಮಫಲಕಗಳನ್ನು ಆಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವನ್ಯಜೀವಿಗಳ ಸಂರಕ್ಷಣೆ ದೃಷ್ಠಿಯಿಂದ ಅರಣ್ಯ ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ 3-4 ಕಡೆ ತಾತ್ಕಾಲಿಕ ರಬ್ಬರ್ ರಸ್ತೆ ಡುಬ್ಬಗಳನ್ನು ಅಳವಡಿಸಲಾಗಿದೆ. ಆದರೆ ಕೆಲ ಕಿಡಿಗೇಡಿಗಳು ಅದನ್ನೂ ಸಹ ಹಾಳು ಮಾಡಿದ್ದಾರೆ. ಈ ರಸ್ತೆಯಲ್ಲಿ ಶಾಶ್ವತ ರಸ್ತೆ ಡುಬ್ಬಗಳನ್ನು ನಿರ್ಮಿಸಲು ಪಿಡಬ್ಲ್ಯೂಡಿ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ. ಆದುದರಿಂದ ವನ್ಯಜೀವಿಗಳ ಹಿತದೃಷ್ಠಿಯಿಂದ ಶೀಘ್ರವಾಗಿ ರಸ್ತೆ ಡುಬ್ಬಗಳನ್ನು ನಿರ್ಮಾಣ ಮಾಡಬೇಕು ಎಂದು ಪರಿಸರ ಪ್ರೇಮಿ ಕೃಷ್ಣ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.