ನೀರು ಹರಿಸಲು ವಿಳಂಬ: ರೈತರ ಪ್ರತಿಭಟನೆ

ಎಲ್ಲಾ ಕೆರೆಗಳಿಗೆ ನೀರು ಹರಿಸಲು ಸರಿಯಾದ ಕ್ರಮ ಕೈಗೊಳ್ಳದ ಜಿಲ್ಲಾಡಳಿತ

Team Udayavani, Jun 28, 2019, 7:38 AM IST

CN-TDY-2..

ತಾಲೂಕಿನ ಅರಕಲವಾಡಿ ಕೆರೆ, ಸುವರ್ಣನಗರ ಕೆರೆಗಳಿಗೆ ಶೀಘ್ರ ಪೈಪ್‌ ಲೈನ್‌ ಅಳವಡಿಸಿ, ನೀರು ಹರಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಚಳವಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ಬೆಂಬಲ ನೀಡಿದರು.

ಚಾಮರಾಜನಗರ: ಹುತ್ತೂರು ಕೆರೆಯಿಂದ ತಾಲೂಕಿನ ಸುವರ್ಣನಗರ ಕೆರೆ ಹಾಗೂ ಅರಕಲವಾಡಿ ಕೆರೆಗಳಿಗೆ ಪೈಪ್‌ ಲೈನ್‌ ಮೂಲಕ ನೀರು ಹರಿಸಲು ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮ ವಿಳಂಬ ಮಾಡುತ್ತಿವೆ ಎಂದು ಆರೋಪಿಸಿ ಆ ಭಾಗದ ರೈತರು ಅರಕಲವಾಡಿ ಕೆರೆ ಅಂಗಳದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ರೈತ ಮುಖಂ ಡರು, ನಾಲ್ಕನೇ ಹಂತದ ಏತ ನೀರಾವರಿ ಯೋಜನೆಯಡಿಯಲ್ಲಿ ಹನ್ನೊಂದು ಕೆರೆಗಳಿಗೆ ನೀರು ಹರಿಸಲು ಕ್ರಿಯಾ ಯೋಜನೆ ರೂಪಿಸಿದ್ದು, ಅದರಂತೆ ಯೋಜನೆಯ ವ್ಯಾಪ್ತಿಯ ಎಲ್ಲಾ ಕೆರೆ ಗಳಿಗೆ ನೀರು ಹರಿಸಲು ಸರಿಯಾದ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತ ಸರಿಯಾದ ಕ್ರಮ ಕೈಗೊಂಡಿದ್ದರೆ ಇಷ್ಟೊತ್ತಿಗೆ ಯೋಜನೆ ಎಲ್ಲಾ ಕೆರೆಗಳಿಗೂ ನೀರು ಬಿಡಬಹು ದಾಗಿತ್ತು ಎಂದರು.

ರೈತರಿಗೆ ವಂಚನೆ: ಕಳೆದ 12 ವರ್ಷಗಳಿಂದ ಈ ಭಾಗದಲ್ಲಿ ಮಳೆ ಇಲ್ಲದೇ ಬರದಿಂದ ತತ್ತರಿಸಿದ್ದೇವೆ. ಕುಡಿ ಯುವ ನೀರಿಲ್ಲದೇ ಜನ ಜಾನುವಾರಿಗೆ ತೊಂದರೆಯಾಗಿದೆ. ಹುತ್ತೂರು ಕೆರೆ ಅಂಗಳದಿಂದ ನೀರು ಹರಿಸುವ ಯೋಜನೆಯನ್ನು ಗುಂಡ್ಲುಪೇಟೆ ಕ್ಷೇತ್ರದ ಶಾಸಕರು ಮುತುರ್ವಜಿ ವಹಿಸಿ ಬೇಗ ಕಾಮಗಾರಿಯನ್ನು ಪೂರ್ಣ ಮಾಡಿಕೊಂಡರು. ಆದರೆ ಚಾಮರಾಜ ನಗರ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವರ ವಿಳಂಬ ನೀತಿ ಹಾಗೂ ಕಾಮಗಾರಿಯ ಬಗ್ಗೆ ಅಧಿಕಾರಿ ಗಳಿಂದ ಸರಿಯಾದ ಮಾಹಿತಿ ಪಡೆದು ಕೊಳ್ಳಲು ವಿಫ‌ಲರಾದ ಕಾರಣ ಈ ಭಾಗದ ರೈತರು ಯೋಜನೆಯಿಂದ ವಂಚಿತರಾಗು ವಂತಾಗಿದೆ ಎಂದು ದೂರಿದರು.

ಸ್ಪಷ್ಟ ಭರವಸೆ ನೀಡಲು ಜಿಲ್ಲಾಡಳಿತಕ್ಕೆ ರೈತರ ಆಗ್ರಹ: ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರೀತಿ ರಾಜಕೀಯ ಇಲ್ಲ. ಎಲ್ಲರು ಸಹ ರೈತರಾಗಿದ್ದು, ಜಿಲ್ಲಾಡಳಿತ ಕೂಡಲೇ ನಮ್ಮ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು. ಸೂಕ್ತ ಭರವಸೆ ನೀಡುವವರೆಗೆ ನಾವು ಸ್ಥಳ ಬಿಟ್ಟು ಕದಡುವುದಿಲ್ಲ. ಧರಣಿಯನ್ನು ಮುಂದು ವರಿಸಲು ಸಿದ್ದ ಎಂದು ಸ್ಥಳಕ್ಕಾಗಮಿಸಿದ್ದ ನೀರಾವರಿ ನಿಗಮದ ಅಧಿಕಾರಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳು ಸ್ಥಳಕ್ಕಾ ಗಮಿಸಿ, ಶೀಘ್ರ ಪೈಪ್‌ಲೈನ್‌ ಕಾಮಗಾರಿ ಯನ್ನು ಪೂರ್ಣ ಮಾಡಿ, ಕೆರೆಗೆ ನೀರು ಹರಿಸುವ ಸ್ಪಷ್ಟ ಭರವಸೆಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ನಿಜಗುಣರಾಜು, ನಾಗಶ್ರೀಪ್ರತಾಪ್‌, ಜಿ.ಪಂ. ಮಾಜಿ ಅಧ್ಯಕ್ಷ ಎಂ ರಾಮಚಂದ್ರ, ಯಣಗುಂಬ ಪುಟ್ಟಸ್ವಾಮಿ, ಲಿಂಗಪ್ಪ, ಯರಗನಹಳ್ಳಿ ಶಿವಕುಮಾರ್‌, ಮಹೇಶ್‌ ಸೇರಿದಂತೆ ರೈತರು ಭಾಗವಹಿಸಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಧರಣಿಯಲ್ಲಿ ಭಾಗಿ:

ತಾಲೂಕಿನ ಅರಕಲವಾಡಿ ಕೆರೆ, ಸುವರ್ಣನಗರ ಕೆರೆಗಳಿಗೆ ಶೀಘ್ರ ಪೈಪ್‌ ಲೈನ್‌ ಅಳವಡಿಸಿ, ಹುತ್ತೂರು ಕೆರೆಯಿಂದ ನೀರು ಹರಿಸಬೇಕೆಂದು ಆಗ್ರಹಿಸಿ ರೈತರು ಆರಂಭಿಸಿರುವ ಚಳವಳಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಕೆ.ಆರ್‌. ಮಲ್ಲಿಕಾರ್ಜುನಪ್ಪ ಧರಣಿಯಲ್ಲಿ ಭಾಗವಹಿಸುವ ಮೂಲಕ ಬೆಂಬಲ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟರ ವೈಫ‌ಲ್ಯ ಇಲ್ಲಿ ಎದ್ದು ಕಾಣುತ್ತಿದೆ. ಕಳೆದ 4 ತಿಂಗಳ ಹಿಂದೆಯೇ ಪೈಪ್‌ ಲೈನ್‌ ಕಾಮಗಾರಿ ಪೂರ್ಣ ಗೊಳ್ಳಬೇಕಾಗಿತ್ತು. ಜೂನ್‌ ಪೂರ್ಣವಾಗುತ್ತಿದ್ದರೂ ಪೈಪ್‌ಲೈನ್‌ ಕಾಮಗಾರಿ ಆರಂಭವಾಗಿಲ್ಲ. ಇನ್ನು ಈ ಕೆರೆಗಳಿಗೆ ನೀರು ಹರಿಸುವುದು ಯಾವಾಗ ಎಂದು ಪ್ರಶ್ನೆ ಮಾಡಿದರು. ಪುಟ್ಟರಂಗಶೆಟ್ಟರು ಯೋಜನೆಯನ್ನು ಜಾರಿ ಮಾಡಲು ವಿಫ‌ಲರಾಗಿರುವುದು ಬಹಿರಂಗವಾದ ಸತ್ಯವಾಗಿದೆ. ಇನ್ನಾದರೂ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಈ ಭಾಗದ ರೈತರು ಹಾಗು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೆರೆಯನ್ನು ತುಂಬಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.