ಕುಟುಂಬದ ಔನ್ನತ್ಯಕ್ಕಾಗಿ ದೇವೆಗೌಡರ ರಾಜಕಾರಣ


Team Udayavani, Mar 1, 2019, 7:13 AM IST

kutumba.jpg

ಗುಂಡ್ಲುಪೇಟೆ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬದ ಸದಸ್ಯರು  ತಮ್ಮ ಕುಟುಂಬದ ಔನ್ನತ್ಯಕ್ಕಾಗಿ ಮಾತ್ರ ರಾಜಕಾರಣ ಮಾಡುತ್ತಿದ್ದಾರೆಯೇ ಹೊರತು ರೈತರ ಮೇಲಿನ ಕಾಳಜಿಯಿಂದಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ತೀವ್ರ ವಾಗ್ಧಾಳಿ ನಡೆಸಿದರು.

ಪಟ್ಟಣದ ಊಟಿ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ನಡೆದ ಯುವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಈಗ ಹಾಸನ, ಮಂಡ್ಯದಲ್ಲಿ ಯಾವ ಮೊಮ್ಮಗನನ್ನು ನಿಲ್ಲಿಸಬೇಕು ಎಂಬ ಯೋಚನೆಯಲ್ಲಿರುವ ದೇವೇಗೌಡರು, ಚುನಾವಣಾ ಆಯೋಗದ ನಿಯಮವಿಲ್ಲದಿದ್ದರೆ ತಮ್ಮ ಮರಿ ಮಕ್ಕಳನ್ನು ಕೂಡಾ ಚುನಾವಣೆಗೆ ನಿಲ್ಲಿಸುತ್ತಿದ್ದರು ಎಂದು ಟೀಕಿಸಿದರು.

ದೇಶಭಕ್ತ ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂಬ ಕನಸು ದೇಶದೆಲ್ಲೆಡೆ ಇದೆ. ಆದರೆ ಮೋದಿ ಅವರನ್ನು ಹೊರತುಪಡಿಸಿ ಮಾಯಾವತಿ, ಮಮತಾ ಬ್ಯಾನರ್ಜಿ ಪ್ರಧಾನಿ ಆಗಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಆಧ್ಯಾತ್ಮಕ್ಕಾಗಿ ಹೆಸರು ಪಡೆದ ಈ ದೇಶದ ಮಣ್ಣಿನ ಗುಣ, ಇತಿಹಾಸ, ಸಂಸ್ಕೃತಿಯ ಅರಿವೇ ಇಲ್ಲದ ರಾಹುಲ್‌ ಗಾಂಧಿ ಈ ದೇಶದ ಪ್ರಧಾನಿ ಆಗುವುದು ಸರೀನಾ? ಅಥವಾ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಪ್ಪು ಚುಕ್ಕೆ ಇಲ್ಲದೇ ಅಧಿಕಾರ ನಡೆಸಿದ ಮೋದಿ ಪ್ರಧಾನಿ ಆಗುವುದು ಸರಿಯೇ ಎಂದು ಸಭಿಕರನ್ನು ಪ್ರಶ್ನಿಸಿದರು.

ಸಾಲ ಮನ್ನಾಕ್ಕೆ ಬಿಎಸ್‌ವೈ ಕಾರಣ: ರಾಜ್ಯದ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿಕೊಂಡು ರಾಜ್ಯ ಸುತ್ತುತ್ತಿದ್ದ ಸಿಎಂ ಕುಮಾರಸ್ವಾಮಿಗೆ ಮನ್ನಾ ಮಾಡದಿದ್ದರೆ ಓಡಾಡಲು ಬಿಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಗಟ್ಟಿಧ್ವನಿಯಲ್ಲಿ ಹೇಳಿದ್ದರಿಂದಲೇ ಸರ್ಕಾರ ರೈತರ ಸಾಲಮನ್ನಾ ಮಾಡಿತು ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ತಂದೆಯನ್ನು ಸಮರ್ಥಿಸಿಕೊಂಡರಲ್ಲದೇ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರೈತರ ಕಾಳಜಿಯಿಂದ ಸಾಲಮನ್ನಾ ಮಾಡುವ ವ್ಯಕ್ತಿಯೇ ಅಲ್ಲ ಎಂದು ಟೀಕಿಸಿದರು. 

ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಈ ಭಾರಿ ಸಂಸತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕಿದೆ. ಅಭ್ಯರ್ಥಿ ಅವರು, ಇವರು ಎನ್ನದೆ ಮೋದಿ, ಬಿಎಸ್‌ವೈ ಅವರನ್ನೇ ಅಭ್ಯರ್ಥಿ ಎಂದು ಗೆಲ್ಲಿಸಿ ಎಂದು ಮನವಿ ಮಾಡಿದರು. ಲೋಕಸಭೆ ಕ್ಷೇತ್ರದ ಬಿಜೆಪಿ ಉಸ್ತುವಾರಿ ಎಂ.ರಾಜೇಂದ್ರ, ಶಾಸಕ ನಿರಂಜನ್‌ಕುಮಾರ್‌, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ರಮೇಶಗೌಡ, ಮಂಡಲ ಬಿಜೆಪಿ ಅಧ್ಯಕ್ಷ ಎನ್‌.ಮಲ್ಲೇಶ್‌ ಮಾತನಾಡಿದರು.

ಪುರಸಭೆ ಅಧ್ಯಕ್ಷ ಪಿ.ಗಿರೀಶ್‌, ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸುರೇಶಬಾಬು, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಪಿ.ಸುನೀಲ್‌, ವಕೀಲ ಅರುಣಕುಮಾರ್‌, ಬಿಜೆಪಿ ಮುಖಂಡ ಡಾ.ಮೋಹನ್‌, ಪುರಸಭೆ ಸದಸ್ಯ ಎಸ್‌.ಗೋವಿಂದರಾಜನ್‌, ಬಿಜೆಪಿ ಮುಖಂಡರಾದ ಎಚ್‌.ಎಸ್‌.ಸೋಮಶೇಖರ್‌, ರೈತ ಮುಖಂಡ ಕೆ.ಆರ್‌.ಲೋಕೇಶ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಚ್‌.ಎಂ.ಮಹೇಶ್‌, ಒಕ್ಕಲಿಗ ಮುಖಂಡ ಆಲತ್ತೂರು ರಾಜೇಶ್‌, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಣಯ್‌, ತಾಲೂಕು ಅಧ್ಯಕ್ಷ ಬಿ.ಎಂ.ನಂದೀಶ್‌, ಗ್ರಾಪಂ ಸದಸ್ಯ ಕಲ್ಲಹಳ್ಳಿ ಮಹೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.