ಜಾತ್ರೆ ಮುಗಿಯುತ್ತಿದಂತೆ ಅಭಿವೃದ್ಧಿ ಕಾಮಗಾರಿಗಳೂ ಸ್ಥಗಿತ

Team Udayavani, Apr 27, 2022, 3:36 PM IST

Untitled-1

ಯಳಂದೂರು: ತಾಲೂಕಿನ ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟದಲ್ಲಿ ದೇಗುಲದ ಜೀರ್ಣೋದ್ಧಾರ ಹಾಗೂ ದೊಡ್ಡ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡು, ನನೆಗುದಿಗೆ ಬೀಳುವ ಎಲ್ಲಾ ಲಕ್ಷಣಗಳು ಇವೆ.

ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ದೇಗುಲ ಆವರ ಣದಲ್ಲಿ ನಡೆಯುತ್ತಿರುವ ಸಾಮೂಹಿಕ ಶೌಚಗೃಹ, ಕಾಂಪೌಂಡ್‌ ಮೇಲೆ ಗೋಪುರ, ರಸ್ತೆ ಕಾಮಗಾರಿ, ತೇರು ನಿಲ್ಲಿಸುವ ಕಟ್ಟಡ, ದೇಗುಲದ ಬಾಗಿಲು ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಂಬಂಧಪಟ್ಟ ಲೋಕೋಪಯೋಗಿ, ಪುರಾತತ್ವ, ನಿರ್ಮಿತಿ ಕೇಂದ್ರದಿಂದ ನಡೆಯುತ್ತಿದ್ದು, ಜಾತ್ರೆ ಮುಗಿದ ಮೇಲೆ ಈ ಎಲ್ಲಾ ಕಾಮಗಾರಿಗಳು ಸ್ಥಗಿತಗೊಂಡಿವೆ.

ಪಿಡಬ್ಲ್ಯೂಡಿ ರಸ್ತೆ ಕಾಮಗಾರಿ ಸ್ಥಗಿತ: ಯಳಂದೂರು ಪಟ್ಟಣದಿಂದ ಬಿಳಿಗಿಗಿರಿರಂಗನಬೆಟ್ಟದವರೆಗಿನ 20.ಕಿ.ಮೀ. ದೂರದವರಗೆ 3.50 ಕೋಟಿ ರೂ.ನ ರಸ್ತೆ ಡಾಂಬರೀಕರಣ ಕಾಮಗಾರಿ ಅರಣ್ಯ ಪ್ರದೇಶ ಮಧ್ಯದಲ್ಲಿ ಅರ್ಧಕ್ಕೆ ನಿಂತಿದೆ.  ಡಾಂಬರೀಕರಣ ಮಾಡಿದ್ದರಿಂದ ರಸ್ತೆ ಎತ್ತರ ವಾಗಿದ್ದು, ಬದಿ ಯಲ್ಲಿ ಭಾರೀ ತಗ್ಗು ಉಂಟಾ ಗಿದೆ. ಇದಕ್ಕೆ ಮಣ್ಣೂ ಹಾಕಿಲ್ಲ. ಮೊದಲೇ ರಸ್ತೆ ಕಿರಿದಾಗಿದ್ದು ಎದುರಿನಿಂದ ವಾಹನ ಬಂದರೆ ಸೈಡ್‌ ಕೊಡಲು ಆಗುವುದಿಲ್ಲ. ಅಷ್ಟರ ಮಟ್ಟಿಗೆ ಕಡಿದಾದ ತಗ್ಗು ಉಂಟಾಗಿದೆ. ಒಂದು ವೇಳೆ ಯಾಮಾರಿ ಸೈಡಿಗೆ ಹೋದ್ರೆ ಆಯ ತಪ್ಪಿ ಬೀಳುವ ಅಪಾಯ ಹೆಚ್ಚಿದೆ. ರಸ್ತೆ ಬದಿಯಲ್ಲಿ ಯಾವುದೇ ಸೂಚನಾ ಫ‌ಲಕ ಇಲ್ಲದಿರುವುದು ಈ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಅರ್ಧಕ್ಕೆ ನಿಂತ ನೆಲಹಾಸು ಕಾಮಗಾರಿ: ಜಾತ್ರೆ ಒಳಗೆ ನೆಲಹಾಸು ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರೂ ಪೂರ್ಣಗೊಂಡಿಲ್ಲ. ಪುರಾತತ್ವ ಇಲಾಖೆಯ ಕೈಗೊಂಡಿರುವ ಕೆಲಸ ಇದಾಗಿದೆ. 1 ಕೋಟಿ ರೂ.ನಲ್ಲಿ ಮಾಡಲಾಗುತ್ತಿದೆ. ಶೇ.70 ಕಾಮಗಾರಿ ಮಾತ್ರ ನಡೆದಿದೆ.

ಉಳಿದದ್ದು ಬೇಗ ಪೂರ್ಣಗೊಳಿಸಬೇಕೆಂಬ ಉಸ್ತುವಾರಿ ಸಚಿವರ ಸೂಚನೆಗೂ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ಇದರಿಂದ ದೇಗುಲ ಪ್ರದಕ್ಷಿಣೆ ಹಾಕುವ ಭಕ್ತರಿಗೆ ತೊಂದರೆಯಾಗಿದೆ. ವೃದ್ಧರು, ಮಕ್ಕಳು, ಮಹಿಳೆಯರು ಹೆಚ್ಚು ತೊಂದರೆ ಅನುಭವಿಸುವ ಆತಂಕವಿದೆ. ಜೊತೆಗೆ ಉತ್ಸವಾದಿ ದೇವತಾ ಕಾರ್ಯಗಳ ಸಮಯದಲ್ಲಿ ಭಾರವನ್ನು ಹೊತ್ತು ಪ್ರದಕ್ಷಿಣೆ ಹಾಕುವುದಕ್ಕೂ ತೊಡಕಾಗಿದೆ.

ದೇಗುಲ ಆವರಣದಲ್ಲಿ ನಡೆಯುತ್ತಿರುವ ನೆಲಹಾಸು, ಶೌಚಗೃಹ ಕಾಮಗಾರಿ ಅದಷ್ಟು ಬೇಗ ಮಾಡುವಂತೆ ಸಂಬಂಧಪಟ್ಟ ಪುರಾತತ್ವ ಇಲಾಖೆ, ನಿರ್ಮಿತಿ, ಕೇಂದ್ರ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು. – ಮೋಹನ್‌ಕುಮಾರ್‌, ಇಒ ಬಿಳಿಗಿರಿರಂಗನಾಥಸ್ವಾಮಿ ಬೆಟ್ಟ.

ತಾಲೂಕಿನ ಬಿಳಿಗಿರಿರಂಗನಬೆಟ್ಟದಿಂದ ಯಳಂದೂರು ಪಟ್ಟಣಕ್ಕೆ ಸಂಪರ್ಕ ರಸ್ತೆಯ ಡಾಂಬರೀಕರಣ ಕಾಮಗಾರಿಯು ಅರ್ಧಕ್ಕೆ ನಿಂತಿದೆ. ಇಲ್ಲಿನ ಗುತ್ತಿಗೆದಾರ ಬೇರೆ ಕಾಮಗಾರಿ ಮಾಡುತ್ತಿದ್ದಾನೆ. ಈ ಬಗ್ಗೆ ಸಂಬಂಧಪಟ್ಟ ಜೆಇಗೆ ಸೂಚಿಸಿ ಬಾಕಿ ಕಾಮಗಾರಿ ಪೂರ್ಣ ಗೊಳಿಸಲಾಗುವುದು. – ರಾಮಸ್ವಾಮಿ, ಎಇಇ, ಲೋಕೋಪಯೋಗಿ ಇಲಾಖೆ ಕೊಳ್ಳೇಗಾಲ.

-ಫೈರೋಜ್‌ ಖಾನ್

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.