ಬಿಳಿಗಿರಿರಂಗನಬೆಟ್ಟಕ್ಕೆ ಭಕ್ತರ ಆಗಮನ
Team Udayavani, Jul 6, 2021, 12:05 PM IST
ಯಳಂದೂರು: ಪುರಾಣ ಪ್ರಸಿದ್ಧ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇಗುಲದಲ್ಲಿ ಸೋಮವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕೋವಿಡ್ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ದೇವಸ್ಥಾನದ ಗರುಡಗಂಬದ ಹತ್ತಿರ ಇದಕ್ಕಾಗಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಸಾಮಾಜಿಕ ಅಂತರಕಾಯ್ದುಕೊಂಡು ಸಾರ್ವಜನಿಕರು ದೇವರ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿತ್ತು. ಪ್ರತಿ ಭಕ್ತರಿಗೂ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಸ್ಯಾನಿಟೈಜರ್ ಮಾಡಿ ಒಳಕ್ಕೆ ಬಿಡಲಾಯಿತು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕೆಂಬ ನಿಯಮವನ್ನು ಭಕ್ತರು ಪಾಲಿಸಿದರು. ಆದರೆ ಯಾವುದೇ ತೀರ್ಥಪ್ರಸಾದ, ಸೇವೆಗಳು ಇರಲಿಲ್ಲ.ಕೆಸ್ಸಾರ್ಟಿಸಿ ವತಿಯಿಂದ ಬೆಟ್ಟಕ್ಕೆ ಕೇವಲ ಒಂದು ಬಸ್ ಬಿಡಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆ ಇಳಿಮುಖವಾಗಿತ್ತು. ಖಾಸಗಿ ವಾಹನಗಳಲ್ಲಿ
ಗೋಪಾಲನ ದರ್ಶನ ಪಡೆದ ಭಕ್ತರು :
ಗುಂಡ್ಲುಪೇಟೆ: ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಸೋಮವಾರ ಬಾಗಿಲು ತೆರೆದಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಂದಿ ಭಕ್ತಾದಿಗಳು ಗೋಪಾಲನ ದರ್ಶನ ಪಡೆದರು. ದೇವಸ್ಥಾನದಲ್ಲಿ ಪೂಜೆಗೆ ಮಾತ್ರ ಅವಕಾಶ ನೀಡಲಾಗಿತ್ತು.
ಭಕ್ತಾದಧಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಮೊದಲ ದಿನವಾದ ಹಿನ್ನೆಲೆ ತಹಶೀಲ್ದಾರ್ ರವಿಶಂಕರ್ ಬೆಟ್ಟಕ್ಕೆ ಭೇಟಿ ನೀಡಿರು. ಸಿದ್ಧತೆ ಪರಿಶೀಲಿಸಿ ಕೋವಿಡ್ ಮಾರ್ಗಸೂಚಿಯಂತೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.ಭಕ್ತಾಧಿಗಳ ಸಂಖ್ಯೆಗೆ ಅನುಗುಣವಾಗಿ ಕೆಎಸ್‌ಆರ್‌ಟಿಸಿಯಿಂದ ಬಸ್ ಬಿಡಲಾಗಿತ್ತು.ಸುಮಾರು200ಕ್ಕೂ ಅಧಿಕ ಮಂದಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿದ್ದರು.
ಬಂಡೀಪುರ ಸಫಾರಿ: ಬಂಡೀಪುರ ಅಭಯಾರಣ್ಯದ ಸಫಾರಿಗೆ ಹೋಗುವವರ ಸಂಖ್ಯೆಯುಕೂಡ ಹೆಚ್ಚಿದೆ. ಸೋಮವಾರ100ಕ್ಕೂ ಅಧಿಕ ಮಂದಿ ಆಗಮಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.