ಮಾದಪ್ಪನ ದರ್ಶನ ಪಡೆದ ಭಕ್ತರು
Team Udayavani, Jun 9, 2020, 5:49 AM IST
ಹನೂರು: ಲಾಕ್‌ಡೌನ್ ಹಿನ್ನೆಲೆ ಎರಡೂವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಲೆ ಮಹದೇಶ್ವರನ ದರ್ಶನ ಸೋಮವಾರ ದಿಂದ ಮುಂಜಾಗ್ರತಾ ಕ್ರಮ ಗಳೊಂದಿಗೆ ಪುನಾರಂಭವಾಗಿದೆ. ರಾಜಗೋಪುರದ ಆವರಣದಲ್ಲಿ ಭೌತಿಕ ಅಂತರ ಕಾಯ್ದುಕೊಂಡು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆವರಣದಲ್ಲಿಯೇ ಭಕ್ತಾದಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ನೀಡಿದ ಬಳಿಕ ಮಾದಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
7 ಸಾವಿರಕ್ಕೂ ಅಧಿಕ ಭಕ್ತರು: ಮಾದಪ್ಪನ ದರ್ಶನಕ್ಕಾಗಿ ಜಿಲ್ಲೆ ಸೇರಿದಂತೆ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ವಿವಿಧ ಜಿಲ್ಲೆ ಗಳಿಂದ ಭಕ್ತಾದಿಗಳು ಆಗಮಿಸಿದ್ದರು. ರಾತ್ರಿ 7 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. 8 ಗಂಟೆವರೆಗೆ ಲಘು ಉಪಾಹಾರ ನೀಡಲಾಯಿತು.
ಜಿಲ್ಲಾಧಿಕಾರಿ ಪರಿಶೀಲನೆ: ಮಾದಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದು ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಇದೇ ವೇಳೆ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮತ್ತು ಇನ್ನಿತರ ಕಾರ್ಯಗಳ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರಿಗೆ ಅಗತ್ಯ ಸೂಚನೆ ನೀಡಿದರು. ಪ್ರಾಧಿಕಾರದ ತಾಂತ್ರಿಕ ಸಲಹೆಗಾರ ಕುಮಾರ್, ಅಧೀಕ್ಷಕ ಬಸವರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.