ಹಾನಿಗೊಂಡ ಕುಟುಂಬಕ್ಕೆ ಆಹಾರ ಕಿಟ್
Team Udayavani, Aug 1, 2020, 9:51 AM IST
ಯಳಂದೂರು: ಈಚೆಗೆ ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಕಲಹದಿಂದ ಹಾನಿಗೊಳಗಾದ ಮನೆಗಳು ಹಾಗೂ ಗಾಯಗೊಂಡ ಕುಟುಂಬದವರಿಗೆ ವಾಲ್ಮೀಕಿ ಸಮಾಜ ಸೇವಾ ಸಮಿತಿಯಿಂದ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಂಗಸ್ವಾಮಿ ಮಾತನಾಡಿ, ಗ್ರಾಮದಲ್ಲಿ ನಡೆದ ಗಲಭೆಯಿಂದ ಕೆಲವರ ಮನೆಗಳಿಗೆ ಹಾನಿಯಾಗಿದೆ. ಕೆಲವರಿಗೆ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ. ಈ ಕುಟುಂಬಗಳು ಬಡ ಕುಟುಂಬಗ ಳಾಗಿವೆ ಹೀಗಾಗಿ ಆಹಾರ ಕಿಟ್‌ಗಳನ್ನು ವಿತರಿಸಲಾಗು ತ್ತಿದೆ. ಗ್ರಾಮದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಸಹಕರಿಸಬೇಕು.ಪೊಲೀಸರಿಗೆ ಸಹಕರಿಸಬೇಕು. ಈ ಸಂಬಂಧ ಬಂಧಿಸಿರುವ ವ್ಯಕ್ತಿಗಳನ್ನು ಕಾನೂನು ರೀತಿ ಕರೆತರಲು ಸಮಿತಿಯಿಂದ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಇದರಿಂದನೊಂದಿರುವ ಪರಿವಾರಗಳಿಗೆ ಸೂಕ್ತ ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಸಮಿತಿಯ ಕಂದಹಳ್ಳಿ ಮಹೇಶ್ ಮಾತನಾಡಿ, ಗ್ರಾಮದಲ್ಲಿ ನಡೆದ ಘಟನೆ ಆಕಸ್ಮಿಕವಾಗಿದೆ. ಇದರಲ್ಲಿ ಬಂಧಿಯಾಗಿರುವವರು ಅಮಾಯಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಿತಿಯ ವತಿಯಿಂದ ಮತ್ತಷ್ಟು ಅನುಕೂಲ ಮಾಡಿಕೊಡಲಾಗುವುದು ಎಂದರು.
ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜುನಾಯಕ್, ಪಪಂ ಮಾಜಿ ಉಪಾಧ್ಯಕ್ಷ ಭೀಮಪ್ಪ ಸದಸ್ಯ ವೈ.ವಿ. ಉಮಾಶಂಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.