Hanur: ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಸಭೆ ನಡೆಸಿದ ಉಸ್ತುವಾರಿ ಸಚಿವ ಕೆ. ವೆಂಕಟೇಶ್
Team Udayavani, Jul 24, 2023, 1:10 PM IST
ಹನೂರು: ಶ್ರೀ ಕ್ಷೇತ್ರಕ್ಕೆ ಮುಂದಿನ ತಿಂಗಳಲ್ಲಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೆ ಸಭೆ ನಡೆಸಲಿದ್ದಾರೆ ಎಂದು ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಉಸ್ತುವಾರಿ ಸಚಿವ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಶಾಸಕರು, ಗುತ್ತಿಗೆದಾರರು ಮತ್ತು ವಿವಿಧ ಇಲಾಖಾ ಅಧಿಕಾರಿಗಳ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಶ್ರೀ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿ-ಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಶೀಘ್ರವಾಗಿ ಕಾಮಗಾರಿ ಮುಕ್ತಾಯಗೊಳಿಸಬೇಕು. ಮುಕ್ತಾಯದ ಹಂತದಲ್ಲಿರುವ ಕಾಮಗಾರಿಗಳನ್ನು ಬೇಗ ಮುಕ್ತಾಯಗೊಳಿಸಿ, ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಯಾವ ಕಾರಣಕ್ಕೆ ಸ್ಥಗತವಾಗಿದೆ? ಇರುವ ತೊಡಕುಗಳು ಏನು ಎಂಬುದರ ಬಗ್ಗೆ ಗಮನಹರಿಸಿ ಶಿಘ್ರ ಬಗೆಹರಿಸಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಗತ್ಯ ಕ್ರಮವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಸುದ್ದಿಗೋಷ್ಠಿ: ಪ್ರಾಧಿಕಾರದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ವೆಂಕಟೇಶ್ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಬರುವಂತಹ ಭಕ್ತಾದಿಗಳಿಗೆ ಅಗತ್ಯ ಮೂಲ ಸೌರ‍್ಯ ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮಒದಲ ಸಭೆ ನಡೆಸಿದ್ದು ಮುಂದಿನ ದಿನಗಳಲ್ಲಿ ವಿವರವಾಗಿ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡು ಸೌರ‍್ಯಗನ್ನು ಒದಗಿಸುವುದಾಗಿ ತಿಳಿಸಿದರು.
ಇನ್ನು ದಈಪದಗಿರಿ ಒಡ್ಡು ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿರುವ 108 ಅಡಿ ಎತ್ತರದ ಮಹದೇಶ್ವರರ ಪ್ರತಿಮೆಯ ಸ್ಥಳದ ಬಗ್ಗೆ ಮಾತನಾಡಿ ಹಿಂದೆ ಯಾವ ರೀತಿ ಮಾಡಿದ್ದಾರೋ ಗೊತ್ತಿಲ್ಲ, ಈ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ್ದು ಗುತ್ತಿಗೆದಾರರು ಮುಂದಿನ 3 ತಿಂಗಳುಗಳಲ್ಲಿ ಅ ಅಂತಸ್ತಿನಲ್ಲಿ ಮ್ಯೂಸಿಯಂ ಕಾಮಗಾರಿಯನ್ನು ಮುಕ್ತಾಯಗೊಳಿಸುವುದಾಗಿ ತಿಳಿಸಿದ್ದು, ಬಾಕಿ ಉಳಿದಿರುವ ಕೆಲಸಗಳನ್ನೂ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು. ಹಿರಿಯ ನಾಗರೀಕರಿಗೆ ನೇರ ದರ್ಶನದ ವ್ಯವಸ್ಥೆ ಕಲ್ಪಿಸುವ ಬಗ್ಗೆ, ಅಕ್ರಮ ಮದ್ಯ ಸಾಗಾಟ ಮತ್ತು ಪೂರೈಕೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನಿಡಿರುವ ಬಗ್ಗೆ ತಿಳಿಸಿದರು.
ಶೀಘ್ರ ಆಸ್ಪತ್ರೆ ಕಾಮಗಾರಿ ಆರಂಭಿಸಲು ಸೂಚನೆ: ಶ್ರೀ ಕ್ಷೇತ್ರದಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಈಗಾಗಲೇ 13 ಕೋಟಿ ವೆಚ್ಚದಲ್ಲಿ ಪ್ರಾಧಿಕಾರದ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ತೆರೆಯಲು ಕ್ರಮವಹಿಸಲಾಗಿದ್ದು ಸ್ಥಳವನ್ನೂ ಗುರುತಿಸಲಾಗಿದೆ. ಆದರೆ ಇಲ್ಲಿ ಕೆಲವೊಂದು ಮರಗಳಿರುವುದರಿಂದ ಮರಗಳ ಕಟಾವಿಗೆ ಅರಣ್ಯ ಇಲಾಖೆ ಅನುಮತಿಗಾಗಿ ಕಾಯಲಾಗುತ್ತಿದೆ. ಶೀಘ್ರವಾಗಿ ಪ್ರಕ್ರಿಯೆಯನ್ನು ಮುಗಿಸಿ ಆಸ್ಪತೆ ಕಾಮಗಾರಿಯನ್ನು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ವೈದ್ಯರ ಅಲಭ್ಯತೆ ಬಗ್ಗೆ ಮಾತನಾಡಿ ಈ ಬಗ್ಗೆ ಸಂಬಮಧಪಟ್ಟ ಅಧಿಕಾರಿಗ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಮುದಿನ ತಿಂಗಳು ಸಿ.ಎಂ ಆಗಮನ: ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಿನ ತಿಂಗಳಿನಲ್ಲಿ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು ಇಲ್ಲಿ ಆಗಮಿಸಿ ಸಭೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಾಧಿಕಾರದ ಸದಸ್ಯರ ಜೊತೆ ಚರ್ಚೆ ನಡೆಸಿ ಆಗಬೇಕಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎಂ.ಎಸ್.ಪಿ ದರದ ಬಗ್ಗೆ ಸಚಿವರ ಜೊತೆ ಚರ್ಚೆ: ಕಬ್ಬು ಮತ್ತು ಹಾಲಿಗೆ ವೈಜ್ಞಾನಿಕ ದರ ನಿಗದಿಮಾಡುವಂತೆÀ ಆಗ್ರಹಿಸಿ ಚಾಮರಾಜನಗರ ಜಿಲ್ಲೆಯ ರೈತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಈ ಬಗ್ಗೆ ಸಕ್ಕರೆ ಸಚಿವರು ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಒತ್ತಾಯ ಇರುವ ಬಗ್ಗೆ ಸಕ್ಕರೆ ಸಚಿವರ ಗಮನಕ್ಕೆ ತಾನೂ ಕೂಡ ತಂದು ಚರ್ಚೆ ಮಾಡು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನಶ್ರೀಗಳು, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಶಿಲ್ಪನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿಸಾಹು, ಅಪರ ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಕರ‍್ಯದರ್ಶಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.