ಮಾದಪ್ಪನ ಸನ್ನಿಧಿಯಲ್ಲಿ ದೀಪಾವಳಿ ಜಾತ್ರೆ ಸಂಭ್ರಮ

ಮೊದಲ ದಿನ ದೇವರಿಗೆ ಎಣ್ಣೆಮಜ್ಜನ ಸೇವೆ | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಶ್ರೀ ಕ್ಷೇತ್ರ

Team Udayavani, Nov 4, 2021, 12:19 PM IST

ಮಾದಪ್ಪ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಎಣ್ಣೆಮಜ್ಜನ ಸೇವೆ ಬೇಡಗಂಪಣ ಅರ್ಚಕರಿಂದ ನೆರವೇರಿತು. ಬೆಟ್ಟದಲ್ಲಿ ಬುಧವಾರದಿಂದ ಸರಳ, ಸಂಪ್ರದಾಯಕ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಮೊದಲ ದಿನ ಮಲೆ ಮಾದಪ್ಪನಿಗೆ ಎಳ್ಳುಕುಟ್ಟಿದ ಎಣ್ಣೆಯಿಂದ ಮಜ್ಜನ ಸೇವೆ ನೆರವೇರಿಸಲಾಯಿತು. ಇದೇ ವೇಳೆ ಮಾದಪ್ಪನಿಗೆ ಬಿಲ್ವಾರ್ಚನೆ, ಸಹಸ್ರ ನಾಮಾವಳಿ ಸೇರಿದಂತೆ ಹಲವು ಸೇವೆಗಳನ್ನು ನಡೆಸಲಾಯಿತು.

ಅಲಂಕೃತಗೊಂಡ ಶ್ರೀ ಕ್ಷೇತ್ರ: ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಶ್ರೀ ಕ್ಷೇತ್ರ ಮತ್ತು ದೇವಾಲಯವನ್ನು ವಿವಿಧ ವರ್ಣಗಳ ಪುಷ್ಪಾಲಂಕಾರ ಮತ್ತು ವಿದ್ಯುದ್ದೀಪಾಲಂಕಾರದಿಂದ ಕಂಗಳಿಸುವಂತೆ ಮಾಡಲಾಗಿದೆ. ಮಲೆ ಮಾದಪ್ಪನ ಸನ್ನಿಧಿಯ ಗರ್ಭಗುಡಿ, ಗರ್ಭಾಗಂಣ, ಪ್ರವೇಶ ದ್ವಾರವನ್ನು ಬಗೆಬಗೆಯ ವಿವಿಧ ವರ್ಣಗಳ ಪುಷ್ಪಗಳಿಂದ ಸಿಂಗರಿಸಲಾಗಿದೆ. ದೇವಾಲಯದ ಗರ್ಭಗುಡಿಯ ಗೋಪುರ, ರಾಜಗೋಪುರ, ದೇವಾಲಯದ ಮುಖ್ಯರಸ್ತೆಯನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಗಳಿಸಲಾಗಿದೆ.

ಇದನ್ನೂ ಓದಿ:- ಹುಲಿ ದಾಳಿಗೆ ಮೂರು ಹಸು, ಒಂದು ಕುರಿ ಸಾವು

ಇಂದು ಹಾಲರವೆ ಉತ್ಸವ: ದೀಪಾವಳಿ ಜಾತ್ರೆಯ ಮತ್ತೂಂದು ವಿಶೇಷವಾದ ಕಾಲರವೆ ಉತ್ಸವ ಗುರುವಾರ ಜರುಗಲಿದೆ. ಬೇಡಗಂಪಣ ಕುಲದ 108 ಹೆಣ್ಣುಮಕ್ಕಳು ದಟ್ಟಡವಿಯ ಮಧ್ಯಭಾಗದ ಕಾರಯ್ಯ ಮತ್ತು ಬಿಲ್ಲಯ್ಯನ ಮಡುವನ್ನು ತಲುಪಿ ಪುಣ್ಯಸ್ನಾನ ಮಾಡಿ ವಿಧಿವಿಧಾನಳೊಂದಿಗೆ ಪಜಾ ಕೈಂಕರ್ಯ ನೆರವೇರಿಸಿ ಹಾಲರವೆ ಉತ್ಸವ ನೆರವೇರಿಸಲಿದ್ದಾರೆ.

ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳಿಗೆ ನಿಷಿದ್ಧ

ಮಲೆ ಮಹದೇಶ್ವರ ಬೆಟ್ಟದಲ್ಲಿ ಕೋವಿಡ್‌ ನಿಯಮಾವಳಿ ಹಿನ್ನೆಲೆ ಈ ಬಾರಿ ಎಣ್ಣೆಮಜ್ಜನ ಸೇವೆಗೆ ಸ್ಥಳೀಯ ಭಕ್ತಾದಿಗಳನ್ನು ಹೊರತುಪಡಿಸಿ ಹೊರಗಿನ ಭಕ್ತಾದಿಗಳಿಗೆ ನಿರ್ಬಂಧ ಹೇರಲಾಗಿದೆ. ಜಿಲ್ಲಾಡಳಿತದ ನಿರ್ಬಂಧದ ಹಿನ್ನೆಲೆ ಎಣ್ಣೆಮಜ್ಜನ ಸೇವೆ ಹಾಗೂ ಹಾಲರವೆ ಉತ್ಸವದಲ್ಲಿ ಸ್ಥಳೀಯ ಭಕ್ತಾದಿಗಳ ಮಾತ್ರ ಅವಕಾಶ ನೀಡಿದ್ದು, ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದ ಹೊರ ಊರಿನ ಭಕ್ತಾದಿಗಳನ್ನು ಹನೂರು ಮತ್ತು ತಾಳಬೆಟ್ಟ ಚೆಕ್‌ ಪೋಸ್ಟ್‌ಗಳ ಬಳಿಯೇ ತಡೆಯಲಾಗುತಿತ್ತು.

ಪ್ರಾಧಿಕಾರದಿಂದ ಸಕಲ ವ್ಯವಸ್ಥೆ

ದೀಪಾವಳಿ ಜಾತ್ರಾ ಮಹೋತ್ಸವದ ಹಿನ್ನೆಲೆ ಕ್ಷೇತ್ರಕ್ಕೆ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತಾದಿಗಳಿಗೆ ಕೌದಳ್ಳಿಯಿಂದ ಶ್ರೀಕ್ಷೇತ್ರದವರೆಗೆ 10 ಕಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ರಾಜಗೋಪುರದ ಮುಂಭಾಗ ಎಡ ಮತ್ತು ಬಲಭಾಗದ ಮೈದಾನದಲ್ಲಿ ಶಾಮಿಯಾನ ಹಾಕಿ ನೆರಳಿವ ವ್ಯವಸ್ಥೆ ಕಲ್ಪಿಸಲಾಗಿದೆ.

ಅಂತರಗಂಗೆ ಸಮೀಪ ಏಕಕಾಲದಲ್ಲಿ 400 ಭಕ್ತಾದಿಗಳು ಸ್ನಾನ ಮಾಡುವ ರೀತಿಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಷವರ್‌ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ ದ್ವಿಚಕ್ರ ವಾಹನಗಳಿಗೆ, ಕಾರು, ಜೀಪು, ಕರಾರಸಾಸಂ ಮತ್ತು ತಮಿಳುನಾಡು ಸಾರಿಗೆ ಬಸ್ಸುಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.