ವಿವಿಧೆಡೆ ಡಿಕೆಶಿ ಪದಗ್ರಹಣ ವೀಕ್ಷಣೆ
Team Udayavani, Jul 3, 2020, 5:14 AM IST
ಯಳಂದೂರು: ತಾಲೂಕಿನ ವಿವಿಧೆಡೆ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ನಿಗದಿತ ಪ್ರದೇಶಗಳಲ್ಲಿ ಟಿವಿ ಪರದೆಗಳ ಮೂಲಕ ಕಾರ್ಯಕ್ರಮ ನೇರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು.
ಇದರೊಂದಿಗೆ ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ಕೊಟ್ಟು, ಸಾಮಾಜಿಕ ಅಂತರ ಕಾಯ್ದುಕೊಂಡು ಚೇರ್ ಹಾಕಿ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ನಿಗದಿತ ಸ್ಥಳಗಳಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಸಂವಿಧಾನ ಪೀಠಿಕೆ ಓದಿದ ಬಳಿಕ ಎದ್ದುನಿಂತು ರಾಷ್ಟ್ರಗೀತೆ ಹಾಡಿದರು.
ಮಾಜಿ ಶಾಸಕರಾದ ಕೃಷ್ಣಮೂರ್ತಿ, ಜಯಣ್ಣ, ಬಾಲರಾಜು ಜಿಪಂ ಸದಸ್ಯರಾದ ಯೋಗೇಶ್, ಉಮಾವತಿ, ಮಾಜಿ ಸದಸ್ಯ ಕಿನಕಹಳ್ಳಿ ಸಿದ್ದರಾಜು, ತಾಪಂ ಅಧ್ಯಕ್ಷ ಸಿದ್ದರಾಜು ಸದಸ್ಯರಾದ ವೆಂಕಟೇಶ್, ನಿರಂಜನ್ ಪಪಂ ಸದಸ್ಯರಾದ ಮಹೇಶ್, ರಂಗನಾಥ, ಮಹದೇವ ನಾಯಕ, ಮಲ್ಲಯ್ಯ, ಮಂಜು, ರವಿ, ಮಾಜಿ ಸದಸ್ಯ ಶ್ರೀನಿವಾಸ್, ಮುಖಂಡರಾದ ರಾಜಶೇಖರ್, ಪ್ರಕಾಶ್, ನಿಂಗರಾಜು, ಮಲ್ಲು, ಲಿಂಗರಾಜಮೂರ್ತಿ, ಅಸ್ಲಂಪಾಷಾ, ಮುನವರ್‌ಬೇಗ್, ನಾಗರಾಜು, ರಮೇಶ, ನಂಜುಂಡ, ಚಂಗುಮಣಿ, ಬೆಟ್ಟಪ್ಪ, ರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.