ಖಾಸಗಿ ವೈದ್ಯರು ಕೋವಿಡ್ ಲಕ್ಷಣಗಳಿಗೆ ಚಿಕಿತ್ಸೆ ನೀಡಬೇಡಿ
Team Udayavani, May 20, 2021, 4:28 PM IST
ಯಳಂದೂರು: ಖಾಸಗಿ ಕ್ಲಿನಿಕ್‌ಗಳಲ್ಲಿವೈದ್ಯರು ಜ್ವರ, ನೆಗಡಿ, ಕೆಮ್ಮು,ಬೇಧಿಯಂತಹ ಕಾಯಿಲೆಗಳಿಗೆ ಚಿಕಿತ್ಸೆನೀಡಬಾರದು, ಇವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಶಿಫಾರಸು ಮಾಡಬೇಕು ಎಂದು ಶಾಸಕ ಎನ್.ಮಹೇಶ್ ಸೂಚಿಸಿದರು.
ತಾಪಂ ಕಚೇರಿ ಆವರಣದಲ್ಲಿಬುಧವಾರ ನಡೆದ ಟಾಸ್ಕ್ಫೋರ್ಸ್‌ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,ತಾಲೂಕಿನಲ್ಲಿ 8 ಕ್ಲಿನಿಕ್ ಹಾಗೂ ನರ್ಸಿಂಗ್‌ಹೋಂ ಇದೆ. ಇಲ್ಲಿನ ವೈದ್ಯರಿಗೆ ಈಗಾಗಲೇ ಈ ಬಗ್ಗೆ ಸೂಚಿಸಲಾಗಿದೆ. ಸಾರ್ವಜನಿಕರು ಇಂತಹ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆಪಡೆದುಕೊಂಡಲ್ಲಿ ಅದು ತಾತ್ಕಾಲಿಕಶಮನವಷ್ಟೆ, ನಂತರ ಕೋವಿಡ್ ಲಕ್ಷಣಇದ್ದರೆ ಇದು ಉಲ½ಣವಾಗಿ ಕಡೆಯಹೊತ್ತಿನಲ್ಲಿ ಕೋವಿಡ್ ಕೇಂದ್ರಕ್ಕೆ ಬಂದರೆಪ್ರಾಣಕ್ಕೆ ಆಪತ್ತು ಬರುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದರು.
2 ಆ್ಯಂಬುಲೆನ್ಸ್ ಕೊಡುಗೆ: ಶಾಸಕರಪ್ರದೇಶಾಭಿವೃದ್ಧಿಯ ಅನುದಾನದಿಂದಶೇ.25ರಷ್ಟು ಕೋವಿಡ್‌ಗೆ ಬಳಸಿಕೊಳ್ಳಲು ಅವಕಾಶವಿದೆ. ಇದರಲ್ಲಿ ಯಳಂದೂರುಹಾಗೂ ಸಂತೆಮರಹಳ್ಳಿ ಆಸ್ಪತ್ರೆಗಳಿಗೆ 2ಆ್ಯಂಬುಲೆನ್ಸ್ ಅವಶ್ಯಕತೆ ಇದ್ದು ಇದನ್ನು ಖರೀದಿಸಲು ಕ್ರಮ ವಹಿಸಲಾಗಿದೆ.ಇದರೊಂಗೆ ಕೊಳ್ಳೇಗಾಲ ಉಪವಿಭಾಗಆಸ್ಪತ್ರೆಗೆ 82 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ ಆಕ್ಸಿಜನ್ ಜನರೇಟರ್ ಅಳವಡಿಸಲು ಈಗಾಗಲೇ ಕೆಆರ್‌ಐಡಿಎಲ್‌ಗೆ ಗುತ್ತಿಗೆ ನೀಡಲಾಗಿದ್ದು, 15 ದಿನದೊಳಗೆ ಇದುಪೂರ್ಣಗೊಳ್ಳಲಿದೆ.
ಸಭೆಯಲ್ಲಿ ತಹಶೀಲ್ದಾರ್‌ಜಯಪ್ರಕಾಶ್, ಇಒ ಉಮೇಶ್,ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಸಿಪಿಐ ಶೇಖರ್, ಸಿಡಿಪಿಒದೀಪಾ, ಮುಖ್ಯಾಧಿಕಾರಿ ಎಂ.ಸಿ. ನಾಗರತ್ನಗ್ರಾಪಂ ಪಿಡಿಒಗಳು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.