ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

11 ವರ್ಷವಾದರೂ ಪೂರ್ಣಗೊಳ್ಳದ ಜಿಲ್ಲಾ ರಂಗಮಂದಿರ ಕಾಮಗಾರಿ „ ಪ್ರದರ್ಶನಕ್ಕಾಗಿ ಕಲಾ ತಂಡಗಳ ಪರದಾಟ

Team Udayavani, Oct 18, 2021, 5:06 PM IST

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಚಾಮರಾಜನಗರ: ರಂಗಭೂಮಿಯಿಂದ ಬಂದು ಸಿನಿಮಾ ರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದ ವರನಟ ಡಾ.ರಾಜ್‌ಕುಮಾರ್‌ ತವರು ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 2010ರಲ್ಲಿ ಆರಂಭಗೊಂಡ ಜಿಲ್ಲಾ ರಂಗಮಂದಿರ ಕಾಮಗಾರಿ 11 ವರ್ಷವಾದರೂ ಪೂರ್ಣಗೊಂಡಿಲ್ಲ.! ಅಂತಿಮ ಹಂತದ ಕಾಮಗಾರಿ ನಡೆಯಬೇಕಿದ್ದು, ಕಾಮಗಾರಿ ಸ್ಥಗಿತ ಗೊಂಡಿರುವ ಕಾರಣ ಕಟ್ಟಡ ಪಾಳು ಬಿದ್ದಿದೆ. ಇನ್ನೊಂದೆಡೆ ರಂಗಮಂದಿರ ಇಲ್ಲದ ಕಾರಣ ಸ್ಥಳೀಯ ಕಲಾತಂಡಗಳು ಪ್ರದರ್ಶನಕ್ಕಾಗಿ ಪಡಿಪಾಟಲು ಪಡಬೇಕಿದೆ.

 ಅನುಮೋದನೆ: ರಾಜ್ಯ ಸರ್ಕಾರ 2009-10ನೇ ಸಾಲಿನಲ್ಲಿ ರಂಗಮಂದಿರ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಜಿಲ್ಲಾಡಳಿತ ಭವನದ ಆವರಣದಲ್ಲೇ ಇರುವ 20 ಗುಂಟೆ ಜಾಗದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ನಡೆದಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಟ್ಟಡ ನಿರ್ಮಿಸಿದೆ.

ಮೊದಲ ಹಂತದ ಕಾಮಗಾರಿಯಲ್ಲಿ ಸುಂದರವಾದ ಕಟ್ಟಡ ಮೇಲೆದ್ದಿತು. ಅದಕ್ಕೆ ಬಿಳಿ ಬಣ್ಣವನ್ನೂ ಬಳಿಯಲಾಗಿದೆ. ಆಗ ಕಟ್ಟಡ ನಿರ್ಮಾಣಗೊಂಡ ಬಳಿಕ, ಒಳಾಂಗಣದಲ್ಲಿ ಸ್ಥಳಾವಕಾಶ ಕಡಿಮೆಯಿದೆ. ರಂಗಮಂದಿರ ಸೂಕ್ತ ರೀತಿಯಲ್ಲಿ ನಿರ್ಮಾಣವಾಗಿಲ್ಲ ಎಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಎಸ್‌.ಮಹದೇವಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿ, ಮಾರ್ಪಾಡಿತ ಕಾಮಗಾರಿ ನಡೆಸಲು ಸೂಚಿಸಿದ್ದರು.

ಮತ್ತೆ, ಜಿಲ್ಲಾಧಿಕಾರಿ ಯೋಜನಾ ವರದಿ ತಯಾರಿಸಿ ಕಳುಹಿಸಿದ ಮೇಲೆ, ಜಿಲ್ಲಾ ರಂಗಮಂದಿರದ ಅಕಾಸ್ಟಿಕ್‌, ಫಾಲ್‌ ಸೀಲಿಂಗ್‌, ಸೌಂಡ್‌ ಸಿಸ್ಟಂ ಮತ್ತು ಆಸನದ ವ್ಯವಸ್ಥೆ ಮತ್ತಿತರ ಕಾಮಗಾರಿ ನಡೆಸಲು ಸರ್ಕಾರ 2017ರಲ್ಲಿ 2.30 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ, ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಹಲವು ಅಡಚಣೆ, ವಿಳಂಬದಿಂದಾಗಿ 2020ರ ಡಿಸೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿತು.

ಈ ಕಾಮಗಾರಿಗಳ ಏಜೆನ್ಸಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಟೆಂಡರ್‌ ಕರೆದು ಕೆಲಸ ಆರಂಭಿಸಬೇಕಿದೆ. ಈಗ ನಿರ್ಮಾಣವಾಗಿರುವ ರಂಗಮಂದಿರದ ಅಂತಿಮ ಹಂತದ ಕಾಮಗಾರಿ ಪೂರ್ಣಗೊಂಡು, ಉದ್ಘಾಟನೆಯಾದರೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ತಮ್ಮ ನಾಟಕ ಪ್ರದರ್ಶಿಸಲು ಉತ್ತಮ ರಂಗಮಂದಿರ ದೊರೆತಂತಾಗುತ್ತದೆ. ತನ್ಮೂಲಕ ರಂಗ ಕಲೆಗೂ ಪ್ರೋತ್ಸಾಹ ಸಿಗುತ್ತದೆ.

ಇದನ್ನೂ ಓದಿ;- ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ಪೈಪೋಟಿ!: ವಿಪರ್ಯಾಸವೆಂದರೆ, ವರನಟ ಡಾ. ರಾಜ್‌ಕುಮಾರ್‌ ಅವರು ಜನಿಸಿದ ಜಿಲ್ಲೆಯ, ಜಿಲ್ಲಾ ಕೇಂದ್ರದಲ್ಲಿ ಅವರ ಹೆಸರಿನ ರಸ್ತೆಯಾಗಲೀ, ಸ್ಮಾರಕವಾಗಲೀ ಇಲ್ಲ. ಈ ರಂಗಮಂದಿರಕ್ಕೆ ಡಾ.ರಾಜ್‌ಕುಮಾರ್‌ ಅವರ ಹೆಸರಿಟ್ಟರೆ, ಅದು ಅರ್ಥಪೂರ್ಣವೂ, ಆ ಮಹಾನ್‌ ಕಲಾವಿದನಿಗೆ ಹುಟ್ಟೂರಿನಲ್ಲಿ ದೊರೆತ ಗೌರವವೂ ಆಗುತ್ತದೆ. ವಿಷಾದದ ಸಂಗತಿಯೆಂದರೆ, ಯಾವುದೇ ಸಂಘಟನೆ ರಂಗಮಂದಿರಕ್ಕೆ ಡಾ.ರಾಜ್‌ ಕುಮಾರ್‌ ಹೆಸರಿಡಬೇಕು ಎಂದು ಒತ್ತಾಯಿಸುತ್ತಿಲ್ಲ.!

ಉದ್ಘಾಟನೆಗೊಳ್ಳುವ ಮುನ್ನವೇ ಪಾಳು ಬಿದ್ದ ಕಟ್ಟಡ

2017ರಿಂದ ಕಾಮಗಾರಿ ನಿಂತ ಕಾರಣ, ಈಗ ರಂಗಮಂದಿರ ಪಾಳು ಬಿದ್ದಿದೆ. ಒಳಗೆಲ್ಲ ದೂಳಿನ ರಾಶಿ ತುಂಬಿದೆ. ಜೇಡರ ಬಲೆಗಳು ಆವರಿಸಿವೆ. ತುಂಬಾ ಪ್ರಾಚೀನ ಕಟ್ಟಡ ಪಾಳು ಬಿದ್ದಾಗ, ಗೋಡೆ, ಕಂಬದ ಮೇಲೆ ಹಕ್ಕಿಯ ಹಿಕ್ಕೆಗಳನ್ನು ವಿಸರ್ಜನೆ ಮಾಡಿದಂತೆ, ಈ ಕಟ್ಟಡದಲ್ಲೂ ಹಿಕ್ಕೆಗಳ ಕಲೆಗಳು ಆವರಿಸಿವೆ. ಈಗಲೇ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್‌ ಸ್ವಿಚ್‌ಗಳೆಲ್ಲಾ ಕಿತ್ತು ಹೋಗಿವೆ. ಗೋಡೆ ಮೇಲೆ ಮಸಿಯಲ್ಲಿ ಚಿತ್ರಗಳನ್ನು ಬರೆಯಲಾಗಿದೆ.

ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾಗಿ, ರಂಗ ಪ್ರದರ್ಶನದ ತಾಣವಾಗಬೇಕಿದ್ದ, ರಂಗಮಂದಿರವೊಂದು ಉದ್ಘಾಟನೆಗೊಳ್ಳುವ ಮೊದಲೇ ಪಾಳುಬಿದ್ದಿದೆ. ಇನ್ನೊಂದೆಡೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ರಂಗಮಂದಿರವಿಲ್ಲದೇ ಸಭಾ ಕಾರ್ಯಕ್ರಮ ನಡೆಸುವ ಜಾಗವಾದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲೇ ನಾಟಕ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ.

ಪ್ರದರ್ಶನದ ದಿನ ಯಾವುದಾದರೂ ಸರ್ಕಾರಿ ಕಾರ್ಯಕ್ರಮ ಅಥವಾ ಇನ್ನಿತರ ಸಭಾ ಕಾರ್ಯಕ್ರಮ ಬಿದ್ದರೆ, ಅಂದು ರಂಗ ಕಲಾವಿದರಿಗೆ ಪಟೇಲ್‌ ಸಭಾಂಗಣ ದೊರಕುವುದೂ ಇಲ್ಲ. ಪಟೇಲ್‌ ಸಭಾಂಗಣದ ವೇದಿಕೆ ಬಹಳ ಚಿಕ್ಕದಾಗಿದ್ದು, ನಾಟಕ ಪ್ರದರ್ಶನಕ್ಕೆ ಸೂಕ್ತವಾಗಿಲ್ಲ.

“ರಂಗಮಂದಿರದ ಮುಂದುವರಿದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಈ ವರ್ಷದ ಜನವರಿಯಲ್ಲಿ ಅನುಮೋದನೆ ದೊರಕಿತು. ಲೋಕೋಪಯೋಗಿ ಇಲಾಖೆ ಕಾಮಗಾರಿ ಏಜೆನ್ಸಿಯಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆಯಬೇಕಿದೆ. ಸದ್ಯದಲ್ಲೇ ಕಾಮಗಾರಿ ಪುನಾರಂಭಗೊಳ್ಳಲಿದೆ.” – ಗಿರೀಶ್‌, ಸಹಾಯಕ ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

  • ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.