ನಮ್ಮ ಕುಟುಂಬಕ್ಕೆ ನಾಟಕ ಎಂದರೆ ಪಂಚ ಪ್ರಾಣ: ರಾಘವೇಂದ್ರ ರಾಜಕುಮಾರ್

ತಾತ ವೇದಿಕೆಗೆ ಬರುತ್ತಿದ್ದಂತೆ ಎಮ್ಮೆ ರೌದ್ರಾವತಾರ ನೋಡಿ ಓಡಿ ಹೋಗಿತ್ತಂತೆ...

Team Udayavani, Nov 3, 2022, 7:00 PM IST

1-asdasd

ಚಾಮರಾಜನಗರ: ರಂಗಭೂಮಿ ಹಿನ್ನೆಲೆಯಿಂದ ಬಂದ ನಮ್ಮ ಕುಟುಂಬಕ್ಕೆ ನಾಟಕ ಎಂದರೆ ಪಂಚ ಪ್ರಾಣ. ನಮ್ಮ ತಾತ. ಹಾಗೂ ಅಪ್ಪಾಜಿಯವರು ನಾಟಕಗಳಲ್ಲಿ ಅಭಿನಯಿಸಿಕೊಂಡು ಬಂದವರು. ರಂಗಭೂಮಿ ಕಲೆ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಡಾ. ರಾಜಕುಮಾರ್ ಕಲಾಮಂದಿರದಲ್ಲಿ ಶ್ರೀ ಸಿದ್ದಮಲ್ಲೇಶ್ವರ ಕಲಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜಕುಮಾರ್ ರವರ ಸ್ಮರಣಾರ್ಥ ಗುರುವಾರ ನಡೆದ ದಕ್ಷಯಜ್ಞ ನಾಟಕ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ಅಪ್ಪಾಜಿ ಡಾ. ರಾಜಕುಮಾರ್ ರಂಗಭೂಮಿ ಕಲಾವಿದರು. ಅವರ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಅವರ ನಟನೆಯನ್ನು ನೋಡಿ ಬೆಳೆದವರು. ಮೈಸೂರು ಮಹಾರಾಜರು ನಾಟಕ ವೀಕ್ಷಣೆ ಮಾಡುತ್ತಿದ್ದಾಗ ಯಮನ ಪಾತ್ರವನ್ನು ಮಾಡಿದ್ದ ನಮ್ಮ ತಾತ ವೇದಿಕೆಗೆ ಬರುತ್ತಿದ್ದಂತೆ ಎಮ್ಮೆ ಅವರ ರೌದ್ರಾವತಾರ ನೋಡಿ ಓಡಿ ಹೋಗಿತ್ತಂತೆ. ಇದನ್ನು ನೋಡಿ ಮಹಾರಾಜರು ಬಹಳ ಸಮಯ ನಕ್ಕರಂತೆ. ಮಯೂರ ಪಾತ್ರದಲ್ಲಿ ನೀವು ರಾಜರಂತೆ ಕಾಣುತ್ತಿದ್ದೀರಿ ಅಂತ ಹೇಳಿದರೆ, ಅಪ್ಪಾಜಿ ಅದನ್ನು ಒಪ್ಪುತ್ತಿರಲಿಲ್ಲ. ವರದಾಚಾರ್ಯರು ರಾಜನ ಪಾತ್ರ ಮಾಡಿದರೆ, ಸ್ವತಃ ಮಹಾರಾಜರೇ ಬೆರಗಾಗುತ್ತಿದ್ದರಂತೆ. ಅಂಥವರ ಮುಂದೆ ನಾನೇನೂ ಅಲ್ಲ ಅಂತ ಅಪ್ಪಾಜಿ ಹೇಳುತ್ತಿದ್ದರು ಎಂದು ಸ್ಮರಿಸಿದರು.

ಅಪ್ಪಾಜಿಯವರು ಹಿರಣ್ಯಕಶಿಪು ಪಾತ್ರದಲ್ಲಿ ಅಷ್ಟು ಚೆನ್ನಾಗಿ ನಟಿಸಿದ್ದರೂ, ಅನೇಕ ಹಿರಿಯ ರಂಗಭೂಮಿ ಕಲಾವಿದರಷ್ಟು ನಟನೆ ನನಗೆ ಬರಲಿಲ್ಲ ಎಂದು ಹೇಳುತ್ತಿದ್ದರು. ಇಂಥ ತಾಕತ್ತು ರಂಗಭೂಮಿ ಕಲೆಗೆ ಇದೆ. ಚಾಮರಾಜನಗರ ಜಿಲ್ಲೆಯ ರಂಗಭೂಮಿ ಕಲಾವಿದರ ಬೀಡು. ಬಹಳಷ್ಟು ಹಿರಿಯ ಕಲಾವಿದರು ಇಲ್ಲಿ ಕುಳಿದ್ದೀರಿ. ನಾಟಕವನ್ನು ನೋಡಿ ಕಲಾವಿದರನ್ನು ಪೊ್ರೀತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಚಾಮರಾಜನಗರ ಜಿಲ್ಲೆಯಲ್ಲಿ ಜಾನಪದ ಕಲೆಗಳ ತವರೂರು. ಅದೇ ರೀತಿ ನಾಟಕ ಕಲೆಗೂ ಹೆಚ್ಚು ಪ್ರಸಿದ್ದಿಯಾಗಿದೆ. ಪೌರಾಣಿಕ ನಾಟಕಗಳನ್ನು ನೋಡುವವರು ಹಾಗೂ ಅಡುವವರ ಸಂಖ್ಯೆಯು ಕ್ಷೀಣಿಸುತ್ತಿದೆ. ಈ ಕಲೆ ಉಳಿಸಿ, ಬೆಳೆಸಬೇಕು. ಕಲಾವಿದರನ್ನು ಗೌರವಿರುವುದು ನಮ್ಮ ಕರ್ತವ್ಯವಾಗಬೇಕು. ದಕ್ಷಯಜ್ಞ ನಾಟಕ ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ಹೆಮ್ಮೆ ಎನ್ನುತ್ತದೆ. ಡಾ. ರಾಜಕುಮಾರ್ ಕಲಾಮಂದಿರವನ್ನು ಉದ್ಗಾಟನೆ ಮಾಡಿದ್ದು, ಹೆಚ್ಚು ಹೆಚ್ಚು ನಾಟಕಗಳು ಇಲ್ಲಿ ಪ್ರದರ್ಶನಗೊಳ್ಳಬೇಕು ಎಂದರು.

ನಮ್ಮೂರಿನಲ್ಲಿ ಮಾತಾಡುವುದು ಹೆಚ್ಚು ಖುಷಿ ಕೊಡುತ್ತದೆ

ಚಾಮರಾಜನಗರ ನಮ್ಮ ಹುಟ್ಟೂರು. ಇಲ್ಲಿಗೆ ಬಂದರೆ ನಮಗೆ ಬಹಳ ಸಂತೋಷವಾಗುತ್ತದೆ. ನಾನು ಎಲ್ಲೆಲ್ಲೋ ವೇದಿಕೆಯಲ್ಲಿ ಮಾತನಾಡಬಹುದು. ಆದರೆ, ನಮ್ಮೂರಿನ ವೇದಿಕೆಯಲ್ಲಿ ನಿಂತು ಮಾತನಾಡುತ್ತಿರುವುದು ನನಗೆ ಹೆಚ್ಚು ಖುಷಿ ಕೊಡುತ್ತದೆ. ಅಪ್ಪಾಜಿ ಅವರ ಹೆಸರಿನಲ್ಲಿರುವ ಡಾ. ರಾಜಕುಮಾರ್ ರಂಗಮಂದಿರದಲ್ಲಿ ದಕ್ಷ ಯಜ್ಞ ನಾಟಕವನ್ನು ಉದ್ಘಾಟನೆ ಮಾಡಿದ್ದು ನನ್ನ ಪುಣ್ಯ. ಕರುನಾಡಿನ ಕಲಾಪ್ರೇಮಿಗಳು ನಮ್ಮ ಕುಟುಂಬವನ್ನು ಬೆಳೆಸಿದ್ದಾರೆ. ಅವರಿಗೆ ನಮ್ಮ ಜನ್ಮ ಇರುವವರಿಗೆ ಋಣ ತಿಳಿಸಲು ಸಾಧ್ಯವಿಲ್ಲ.
ಅಪ್ಪು ಭಾವಚಿತ್ರಕ್ಕೆ ನಾನು ಹೂವು ಹಾಕಲಿಲ್ಲ. ಕಾರಣ ಅವನು ನನ್ನ ತಮ್ಮ. ತಮ್ಮ ನನಗೆ ಹೂವು ಹಾಕಬೇಕಾಗಿತ್ತು ಎಂದು ಭಾವುಕರಾದರು. ತನ್ನ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಅಪ್ಪು ಅನೇಕ ಸಂದೇಶ ಬಿಟ್ಟು ಹೋಗಿದ್ದಾನೆ. ಕಾಡು ಉಳಿಸಿ, ಕಾಡಿನಲ್ಲಿ ಪ್ಲಾಸ್ಟಿಕ್ ಬಳಸಬೇಡಿ. ನೀರನ್ನು ವ್ಯರ್ಥ ಮಾಡಬೇಡಿ ಎಂಬ ಸಂದೇಶಗಳನ್ನು ನೀಡಿದ್ದಾನೆ. ಇವುಗಳನ್ನು ಪಾಲಿಸುವುದು ಅವನಿಗೆ ನಾವು ನೀಡುವ ಗೌರವ ಎಂದರು.

ನಗರ ಮಠದ ಶ್ರೀ ಚನ್ನಬಸವಸ್ವಾಮೀಜಿ, ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜಕುಮಾರ್, ಮಂಗಳಾ ರಾಘವೇಂದ್ರ ರಾಜಕುಮಾರ್ ಅವರಿಗೆ ಬಸವೇಶ್ವರ ವಿಗ್ರಹ ನೀಡಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಿದ್ದಮಲ್ಲೇಶ್ವರ ಕಲಾ ಬಳಗ ಅಧ್ಯಕ್ಷ ಎನ್.ಆರ್. ಪುರುಷೋತ್ತಮ್, ಕಾರ್ಯದರ್ಶಿ ಬಸವರಾಜು, ಹಿರಿಯ ಕಲಾವಿದೆ ಪಂಕಜಾ ರವಿಶಂಕರ್, ಚಾಮುಲ್ ಅಧ್ಯಕ್ಷ ನಾಗೇಂದ್ರ, ನಿರ್ದೇಶಕರಾದ ಎಚ್.ಎಸ್. ಬಸವರಾಜು, ಸದಾಶಿವಮೂರ್ತಿ, ನಗರಸಭಾ ಸದಸ್ಯರಾದ ಮಮತಾ ಬಾಲಸುಬ್ರಹ್ಮಣ್ಯ, ರಾಜಪ್ಪ, , ಮುಖಂಡರಾದ ಉಮೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕ ಗುರುಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಡಾ.ಎ.ಆರ್.ಬಾಬು, ಪಿ. ಮರಿಸ್ವಾಮಿ, ಎಂ. ರಾಮಚಂದ್ರ, ಪಿ. ರಾಜಣ್ಣ, ಎಪಿಎಂಸಿ ಅಧ್ಯಕ್ಷ ಮನೋಜ್‌ಪಟೇಲ್, ಮಾಜಿ ಅಧ್ಯಕ್ಷ ಡಿ. ನಾಗೇಂದ್ರ, ಗುರುಸ್ವಾಮಿ, ಮೊದಲಾದವರು ಇದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.