ಗಾಳಿಮಳೆ ಬಂದ್ರೆ ವಿದ್ಯುತ್‌ ಸ್ಥಗಿತ, ನೀರಿಗೆ ಹಾಹಾಕಾರ

Team Udayavani, Jun 11, 2022, 1:45 PM IST

ಗಾಳಿಮಳೆ ಬಂದ್ರೆ ವಿದ್ಯುತ್‌ ಸ್ಥಗಿತ, ನೀರಿಗೆ ಹಾಹಾಕಾರ

ಯಳಂದೂರು: ಗಾಳಿ ಮಳೆ ಬಂದರೆ ವಿದ್ಯುತ್‌ ಸಮಸ್ಯೆ ಗೊಂಡು ಬಿಳಿಗಿರಿರಂಗನಬೆಟ್ಟದ ಪೋಡಿನ ನಿವಾಸಿಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದ್ದು. ಇದನ್ನು ಪರಿಹರಿಸಲು ಎರಡು ಮೂರು ದಿನಗಳು ಕಾಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.!

ತಾಲೂಕಿನ ಪ್ರಸಿದ್ಧ ಯಾತ್ರೆ ಹಾಗೂ ಪ್ರವಾಸಿ ಕ್ಷೇತ್ರದ ಪೋಡು ಗಳಾದ ಬಂಗ್ಲೆಪೋಡು, ಯರಕನಗದ್ದೆ, ಸೀಗೆಬೆಟ್ಟ, ಹೊಸಪೋಡು, ಕಲ್ಯಾಣಿಪೋಡು ಸೇರಿದಂತೆ ಒಟ್ಟು 710ಕ್ಕೂ ಹೆಚ್ಚು ಕುಟುಂಬಗಳು ವಾಸಿಸುವ ಸ್ಥಳವಾಗಿದೆ. ಇಲ್ಲಿನ ಜನರಿಗೆ ಸಮಪರ್ಕವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪರದಾಡುವುದು ನಿತ್ಯ ಕಾಯಕ ವಾಗಿದೆ. ಅರಣ್ಯ ಪ್ರದೇಶವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ವಿದ್ಯುತ್‌ ಸಂಪರ್ಕ ಹಾದು ಹೋಗಿರುವ ಸ್ಥಳಗಳಲ್ಲಿ ಸ್ವಲ್ಪ ವ್ಯತ್ಯಾಸವಾದರೆ, ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಆ ಸಮಯದಲ್ಲಿ ಕೈ ಪಂಪಿನ ನೀರಿಗೆ ಕಾಯುವ ಸ್ಥಿತಿ ಇಲ್ಲಿನ ನಾಗರಿಕರದ್ದು.

ದುರಸ್ತಿಗೆ ಮೂರು ದಿನ ಕಾಯಬೇಕು: ವಿದ್ಯುತ್‌ ಕಂಬ ಬಿದ್ದರೆ, ತಂತಿ ಕೆಳಕ್ಕೆ ಬಿದ್ದರೆ ಇದನ್ನು ದುರಸ್ತಿ ಪಡಿಸಲು ಎರಡು ಮೂರು ದಿನಗಳ ಕಾಲ ಬೇಕಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ನಿತ್ಯ ಭಕ್ತರು ಆಗಮಿಸುತ್ತಾರೆ. ವಿದ್ಯುತ್‌ ಇಲ್ಲದಿದ್ದರೆ ಕುಡಿಯುವ ನೀರೂ ಇಲ್ಲದ ಕಾರಣ ಭಕ್ತರು ಪರದಾಡುವ ಸ್ಥಿತಿ ಇದೆ.

ಸೆಸ್ಕ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: ಬಿಳಿಗಿರಿ ರಂಗನಬೆಟ್ಟದಲ್ಲಿ ಮಳೆಗಾಲದಲ್ಲಿ ಮಳೆ, ಬಿರುಗಾಳಿಗೆ ವಿದ್ಯುತ್‌ ಸಮಸ್ಯೆಯು ನಿರಂತರವಾಗಿ ತೊಂದರೆಯಾ ಗುತ್ತಿದೆ. ಬೆಟ್ಟದಲ್ಲಿ ಲೈನ್‌ಮೆನ್‌ ಇದ್ದರೂ ಸಹ ಕೆಲಸ ಮಾಡುವುದಿಲ್ಲ ಎಂಬುದು ಸ್ಥಳೀಯರ ದೂರಾಗಿದೆ. ಈ ಕೆಲಸ ನಿಧಾನವಾಗುವುದರಿಂದ 1 ರಿಂದ 2 ದಿನಗಳ ವಿದ್ಯುತ್‌ಗೆ ಕಾಯಕಬೇಕು. ಜತೆಗೆ ಇಲಾಖೆ ಅಧಿಕಾರಿಗಳಿಗೆ ಮೊಬೈಲ್‌ಗೆ ಕರೆ ಮಾಡಿದ್ದಾರೆ ಸ್ವಿಚ್‌ ಆಫ್ ಆಗಿರುತ್ತದೆ. ರಾತ್ರಿ ವೇಳೆಯಲ್ಲಿ ಕಾಡು ಪ್ರಾಣಿಗಳ ಕಾಟವು ಹೆಚ್ಚಾಗಿದ್ದು ಭಯದಲ್ಲಿ ಬದುಕು ಸವೆಸುವ ಸ್ಥಿತಿ ಇದೆ ಎಂಬುದು ಸ್ಥಳೀಯ ಬೇದೆಗೌಡ ಸೇರಿದಂತೆ ಹಲವರ ದೂರಾಗಿದೆ.

ಮಳೆ ಬಂದರೆ ಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿ ಕುಡಿಯುವ ನೀರಿಗೆ ಜನರು ಪರದಾಡಬೇಕು. ಸೆಸ್ಕ್ ಇಲಾಖೆ ಸಿಬ್ಬಂದಿ ಬೆಟ್ಟದಲ್ಲಿ ವಾಸ ಮಾಡದ ಕಾರಣ ಸಾಕಷ್ಟ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜ ವಾಗಿಲ್ಲ, ಆದ್ದರಿಂದ ಸಂಬಂಧಪಟ್ಟ ಮೇಲಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. -ವೆಂಕಟೇಶ್‌, ಬೆಟ್ಟದ ನಿವಾಸಿ

ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಈ ಕೂಡಲೇ ಪಿಡಿಒಯಿಂದ ಮಾಹಿತಿ ತಿಳಿದುಕೊಳ್ಳುತ್ತೇನೆ. ವಿದ್ಯುತ್‌ ಸಮಸ್ಯೆಯಾದರೆ ಕೂಡಲೇ ನೌಕರರು ಸರಿಪಡಿಸುವಂತೆ ಸೂಚನೆ ನೀಡುತ್ತೇನೆ. ಮುಂದೆ ಈ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು. – ನಿಂಗರಾಜು, ಸೆಸ್ಕ್ ಎಇಇ

ತಾಲೂಕಿನ ಬಿಳಿಗಿರಿ ರಂಗನಬೆಟ್ಟದಲ್ಲಿ ವಿದ್ಯುತ್‌ ಸಮಸ್ಯೆಯಾದರೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ವಿದ್ಯುತ್‌ ಇಲಾಖೆ ಸಿಬ್ಬಂದಿ ಇಲ್ಲವಾದ ಕಾರಣ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಬೆಟ್ಟದಲ್ಲಿ ಸೆಸ್ಕ್ ಸಿಬ್ಬಂದಿ ವಾಸ ಮಾಡುವ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗುವುದು. -ಸ್ವಾಮಿ, ಪಿಡಿಒ ಬಿಳಿಗಿರಿರಂಗನೆಬೆಟ್ಟ

-ಫೈರೋಜ್‌ಖಾನ್‌

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.